ಮೈಸೂರು | ಮಹಿಳೆ ಹತ್ಯೆ; ಆರೋಪಿ ಬಂಧನ

Date:

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇ ಬಳಿಯ ಸಿದ್ದಲಿಂಗಪುರದ ಬೇಕರಿಯೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೃತ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಮಮತಾ(33) ಎಂದು ಗುರುತಿಸಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಮೇಟಗಳ್ಳಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಅವಿವಾಹಿತ ಮೋಹನ್ (26) ಎಂದು ಗುರುತಿಸಲಾಗಿದೆ. ಮೋಹನ್ ಬೇಕರಿ ನಡೆಸುತ್ತಿದ್ದನು. ಇದರಲ್ಲಿ ಮಮತಾ ಹೂಡಿಕೆ ಮಾಡಿದ್ದರು. ಹಾಗಾಗಿ ಮಮತಾ ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದರಿಂದ ಮೋಹನ್ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರೇಮಿಗಳ ಜೊತೆ ಮುಸ್ಲಿಂ ಯುವಕರ ಗೂಂಡಾಗಿರಿ

ಬುಧವಾರ ಸಂಜೆ ಮಮತಾ ಬೇಕರಿಗೆ ಬಂದಾಗ ಮೋಹನ್ ಕಬ್ಬಿಣದ ಸಲಾಕೆಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯ ನಂತರ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...

ಚಿತ್ರದುರ್ಗ | ಶೋಷಿತ ಸಮುದಾಯಗಳ ಪ್ರಗತಿಯ ಹರಿಕಾರ ಬಿ ಕೃಷ್ಣಪ್ಪ

ದಲಿತ, ಶೋಷಿತ ಸಮುದಾಯಗಳ ಪ್ರಗತಿಗಾಗಿ ಶ್ರಮಿಸಿದ ಪ್ರೊ.ಬಿ ಕೃಷ್ಣಪ್ಪ ಅವರು ಸ್ಮರಣೀಯ...

ಟ್ರಸ್ಟ್‌ಗಳ ಕಾರ್ಯನಿರ್ವಹಣೆಗೆ ಹೆಚ್ಚಿನ ಬಲ ತುಂಬುವೆ : ಸಚಿವ ಶಿವರಾಜ್ ತಂಗಡಗಿ

ವಿವಿಧ ಟ್ರಸ್ಟ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಸಚಿವರು ಕನ್ನಡ ಮತ್ತು ಸಂಸ್ಕೃತಿ...

ಇದು ನನ್ನ ಕೊನೆ ಚುನಾವಣೆ; ಸಕ್ರಿಯ ರಾಜಕಾರಣದಲ್ಲಿದ್ದು ಸೇವೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವರುಣಾ ಕ್ಷೇತ್ರದ ಕಾರ್ಯಕರ್ತರು, ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ ರಾಜ್ಯದ ಜನ ಬಿಜೆಪಿಯ...