ಮೈಸೂರು | ರೌಡಿ ಶೀಟರ್‌ನ ಬರ್ಬರ ಹತ್ಯೆ

Date:

Advertisements

ಎರಡು ಕೊಲೆ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದ ರೌಡಿ ಶೀಟರ್‌ನನ್ನು ಬೈಕ್‌ನಲ್ಲಿ ಬಂದ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಸಂಜೆ ಮೈಸೂರಿನ ಕಾಳಿದಾಸ ರಸ್ತೆಯ ಒಂಟಿಕೊಪ್ಪಲು ಎಂಬಲ್ಲಿ ನಡೆದಿದೆ.

ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸುದ್ದಿಗಾರರೊಂದಿಗೆ ಮಾತನಾಡಿ, “ಮೃತನನ್ನು ಚಂದ್ರಶೇಖರ್ ಅಲಿಯಾಸ್ ಕುಂದ ಚಂದ್ರು (42) ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈತನು ಮೃತಪಟ್ಟಿರುವುದಾಗಿ ಘೊಷಿಸಿದ್ದಾರೆ. ಪ್ರಕರಣವನ್ನು ಭೇದಿಸಲು ನಗರ ಅಪರಾಧ ವಿಭಾಗದ ತನಿಖಾಧಿಕಾರಿಗಳನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದು, ಅಲ್ಲಿ ಬಲವಾದ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ” ಎಂದು ತಿಳಿಸಿದರು.

“ಸಂಜೆ 4.45ರ ಸುಮಾರಿಗೆ ಚಂದ್ರು ಮೇಲೆ ಯುವಕರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಬಳಿಕ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಮೃತಪಟ್ಟಿದ್ದಾರೆ. ಚಂದ್ರು ಅವರ ಮನೆಯ ಎದುರಿನ ಟೈಲರ್ ಅಂಗಡಿಯ ಹೊರಗೆ ಕುಳಿತಿದ್ದಾಗ ಯುವಕರ ಗ್ಯಾಂಗ್ ಅವರ ಮೇಲೆ ಹಲ್ಲೆ ನಡೆಸಿ, ತಮ್ಮ ದ್ವಿಚಕ್ರ ವಾಹನಗಳಲ್ಲಿ ಪರಾರಿಯಾಗುತ್ತಿದ್ದ ಆರರಿಂದ ಎಂಟು ಮಂದಿ ದಾಳಿಕೋರರ ಹರ್ಷೋದ್ಗಾರವನ್ನು ನೆರೆಹೊರೆಯವರು ಕೇಳಿಸಿಕೊಂಡಿದ್ದಾರೆ. ಸ್ವಲ್ಪ ಸಮಯದಲ್ಲೇ, ಆತನ ತಲೆ ಮತ್ತು ಹೊಟ್ಟೆಯ ಮೇಲೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಮಲಗಿರುವುದು ಕಂಡುಬಂದಿದೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ನೋಟರಿ ವಕೀಲರ ನೇಮಕಕ್ಕೆ ಲಂಚ; ಕೇಂದ್ರ ಸರ್ಕಾರದ ಹೆಚ್ಚುವರಿ ಕಾನೂನು ಸಲಹೆಗಾರ ಬಂಧನ

“ಚಂದ್ರು ಅವರ ಮೇಲೆ ಹರಿತವಾದ ಮತ್ತು ಮೊಂಡಾಗಿರುವ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಕೋರರ ಗುರುತು ತಿಳಿದುಬಂದಿಲ್ಲ. ನಾವು ಸುಳಿವುಗಳನ್ನು ಸಂಗ್ರಹಿಸಿ, ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.

ಘಟನೆ ಹಿನ್ನೆಲೆ

“ಚಂದ್ರು ಅವರ ಪತ್ನಿ ಶಿಲ್ಪಾ ಆಹಾರದ ಗಾಡಿ ನಡೆಸುತ್ತಿದ್ದು, ಘಟನೆಯ ಸಮಯದಲ್ಲಿ ಮನೆಯಿಂದ ಹೊರಗಿದ್ದರು. ಅವರು ತಮ್ಮ ತಾಯಿ ಮತ್ತು ಏಳು ವರ್ಷದ ಮಗ ರಜತ್ ಅವರೊಂದಿಗೆ ವಾಸಿಸುತ್ತಿದ್ದರು” ಎಂದು ತಿಳಿಸಿದ್ದಾರೆ.

“ಚಂದ್ರು ರೌಡಿ ಶೀಟರ್ ಆಗಿದ್ದು, ಈ ಹಿಂದೆ 2008ರಲ್ಲಿ ಹುಣಸೂರು ಜೋಡಿ ಕೊಲೆ ಪ್ರಕರಣ ಹಾಗೂ 2016ರಲ್ಲಿ ನಡೆದ ದೇವು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಎರಡೂ ಕೊಲೆ ಪ್ರಕರಣಗಳಲ್ಲಿ ಚಂದ್ರು ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ವಕೀಲರು ದೃಢಪಡಿಸಿದ್ದರು. ಇದೀಗ ಒಂಟಿಕೊಪ್ಪಲು ಸಮೀಪದ ಪಡುವಾರಹಳ್ಳಿಯ ಮನೆ ಬಳಿ ದೇವು ಅವರನ್ನು ಹತ್ಯೆ ಮಾಡಲಾಗಿದೆ” ಎಂದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X