ಮೈಸೂರು | ರಾಗಿ ಖರೀದಿ ಕೇಂದ್ರ ಶೀಘ್ರ ತೆರೆಯುವಂತೆ ರೈತ ಸಂಘದ ಆಗ್ರಹ

Date:

ಮೈಸೂರು ಜಿಲ್ಲೆಯಾದ್ಯಂತ ರಾಗಿ ಕೊಯ್ಲಾಗಿ ಮೂರು ತಿಂಗಳೇ ಕಳೆದರು ರಾಗಿ ಖರೀದಿ ಕೇಂದ್ರ ತೆರೆಯದೆ ದಲ್ಲಾಳಿಗಳಿಗೆ ಅನುಕೂಲ ಆಗುವಂತೆ ನಡೆದುಕೊಂಡಿರುವ ಕ್ರಮವನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಈ ಕೂಡಲೆ ರಾಗಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹ ಮಾಡಿದೆ.

- Advertisement -

” ರಾಗಿ ಬೆಳೆ ಬೆಳೆದು ತಿಂಗಳುಗಟ್ಟಲೆ ಕಳೆದರು ಸಹ ಸಕಾಲದಲ್ಲಿ ರಾಗಿ ಕೇಂದ್ರವನ್ನು ತೆರೆಯದೆ,ರೈತರು ತಾವು ಬೆಳೆದಿರುವ ರಾಗಿಯನ್ನು ದಲ್ಲಾಳಿಗಳಿಗೆ ಕಡಿಮೆ ಬೆಲೆಗೆ ಮಾರಿಕೊಳ್ಳುವಂತೆ ಆಗಿದೆ. ಖರೀದಿ ಕೇಂದ್ರದ ಲಾಭವನ್ನು ರೈತರು ಪಡೆಯಬೇಕಿತ್ತು ಆದರೆ ಸಮಯಕ್ಕೆ ರಾಗಿ ಕೇಂದ್ರ ತೆರೆಯದ ಹಿನ್ನೆಲೆಯಲ್ಲಿ ದಲ್ಲಾಳ್ಳಿಗಳ ಪಾಲಾಗುತ್ತಿದೆ. ಈ ರೀತಿಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘವು ಹೋರಾಟ ಮಾಡುತ್ತಲೇ ಬರುತ್ತಿದೆ. ರೈತ ಬೆಳೆಯುವ ಬೆಳೆಗೆ ಸರಿಯಾದ ವೈಜ್ಞಾನಿಕ ಬೆಲೆಯನ್ನು ಸರ್ಕಾರ ನಿಗದಿಪಡಿಸದೆ ಹರಾಜು ಮಾಡುವಂತ ಪರಿಸ್ಥಿತಿಯಲ್ಲಿ ರೈತರು ಇದ್ದಾರೆ. ಕನಿಷ್ಠ ಖರೀದಿ ಕೇಂದ್ರವನ್ನಾದರೂ ಸಕಾಲದಲ್ಲಿ ಸರ್ಕಾರ ತೆರೆದರೆ ರೈತರಿಗೆ ಬಹಳ ಅನುಕೂಲವಾಗುತ್ತದೆ.ಆದುದರಿಂದ ರಾಗಿ ಕೇಂದ್ರವನ್ನು ಶೀಘ್ರವಾಗಿ ತೆರೆಯಬೇಕೆಂದು ” ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹಕ್ಕೋತ್ತಾಯಗಳು:

  • ಪ್ರಸ್ತುತ ಸಾಲಿನ ರಾಗಿ ಕೇಂದ್ರವನ್ನು ಶೀಘ್ರವೇ ತೆರೆಯುವುದು ಹಾಗೂ ನಿರಂತರವಾಗಿ ಖರೀದಿ ಕೇಂದ್ರವನ್ನು ಕಾಲ ಮಿತಿಯಿಲ್ಲದೆ ವರ್ಷಪೂರ್ತಿ ತೆರೆದಿರುವಂತೆ ಕ್ರಮ ಕೈಗೊಳ್ಳಬೇಕು.
  • * ಖರೀದಿ ಕೇಂದ್ರದಲ್ಲಿ ಕಾರ್ಮಿಕರ, ಅಧಿಕಾರಿಗಳ ಕೆಲವು ಸಮಸ್ಯೆಗಳಿದ್ದು, ರೈತರಿಗೆ ತೊಂದರೆಯಾಗುತ್ತಿದೆ. ಮತ್ತು ಕೆಲವು ಅಧಿಕಾರಿಗಳು ದಲ್ಲಾಳಿಗಳ ಜೊತೆ ಶಾಮೀಲಾಗಿರುತ್ತಾರೆ. ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
  • ಖರೀದಿ ಕೇಂದ್ರಗಳಲ್ಲಿ ನೊಂದಾಯಿಸುವ ರೈತರಿಗೆ ಬೆಳೆ ಇಲ್ಲದ ಸಮಯದಲ್ಲಿ ಸರ್ವೆ ಕಾರ್ಯ ಮಾಡಿ, ಬೆಳೆ ಬಂದಿರುವ ಸಂದರ್ಭದಲ್ಲಿ ಪರಿಶೀಲಿಸದೆ ಬೆಂಬಲ ಬೆಲೆಗೆ ಮಾರಾಟ ಮಾಡಲು ಅನುಮತಿಯಿಂದ ವಂಚಿತರಾಗಿರುತ್ತಾರೆ. ಈ ರೀತಿಯ ತಾಂತ್ರಿಕ ದೋಷವನ್ನು ಸರಿಪಡಿಸುವುದು.
  • ರಾಗಿ ಖರೀದಿ ಕೇಂದ್ರಕ್ಕೆ ರೈತರಿಗೆ ನಿರ್ಬಂಧ ಮಾಡಿರುವ ಕ್ರಮ ಸರಿಯಿಲ್ಲ. ತಾನು ಬೆಳೆದ ಎಲ್ಲಾ ರಾಗಿಯನ್ನು ಖರೀದಿ ಮಾಡುವಂತೆ ಸರ್ಕಾರವು ಅನುವು ಮಾಡಿಕೊಡಬೇಕು.
  • ನಿರಂತರವಾಗಿ ಸಂಘವು ಖರೀದಿ ಕೇಂದ್ರಗಳನ್ನು ತೆರೆಯಲು ಪ್ರತಿಭಟನೆ ಮೂಲಕ ಎಚ್ಚರಿಸುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಆದುದರಿಂದ ಬೆಂಬಲ ಬೆಲೆಯ ಖರೀದಿ ಕೇಂದ್ರಗಳನ್ನು ಕಾಲ ಕಾಲಕ್ಕೆ ತೆರೆಯುವ ಮೂಲಕ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರವು ಮುಂದಾಲೋಚನೆ ಕ್ರಮ ಕೈಗೊಳ್ಳಬೇಕು.

ಈ ಮೇಲ್ಕಂಡ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಉಪವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲು ಉಪವಿಭಾಗಾಧಿಕಾರಿಗಳು ಹುಣಸೂರು ಉಪವಿಭಾಗ ರವರು ಮನವಿ ಸ್ವೀಕರಿಸದಿರುವ ಕಾರಣ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಉಂಟಾಗಿದ್ದು, ಪ್ರತಿಭಟನೆ ಸಂದರ್ಭದಲ್ಲಿ ರೈತ ಸಂಘದ ಕಾರ್ಯಕರ್ತರು ಹಾಗೂ ದಸಂಸ ಸಂಘಟನೆ ಕಾರ್ಯಕರ್ತರನ್ನು ಡಿವೈಎಸ್ಪಿ ಗೋಪಾಲಕೃಷ್ಣ ಅವರ ನೇತೃತ್ವದ ಪೊಲೀಸ್ ಅಧಿಕಾರಿಗಳು ಬಂಧಿಸಿ, ಬಿಡುಗಡೆ ಮಾಡಿದ್ದಾರೆ.

ಮನವಿ ಪತ್ರ ಸ್ವೀಕಾರವಾಗದ ಹಿನ್ನಲೆಯಲ್ಲಿ ರೈತರ ಬೇಡಿಕೆಯನ್ನು ಸರ್ಕಾರ ಕೂಡಲೆ ಈಡೇರಿಸಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿಯುವುದಾಗಿ ಈದಿನ. ಕಾಮ್ ಮೂಲಕ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಐಎಂಎಸ್ಎಸ್ ಸಂಘಟನೆಯಿಂದ ‘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ‘

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ರಾಜ್ಯ ಮಹಿಳಾ ಕಾರ್ಯದರ್ಶಿ ನೇತ್ರವತಿ, ಜಿಲ್ಲಾ ಉಪಾಧ್ಯಕ್ಷ ಆಲಿಜಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಗ್ರಹಾರ ರಾಮೇಗೌಡ, ಜಿಲ್ಲಾ ಖಜಾಂಚಿ ಈಶ್ವರ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಅರಸ್, ಜಿಲ್ಲಾ ಪದಾಧಿಕಾರಿ ಬಸವರಾಜೇಗೌಡ, ಹೆಚ್ ಡಿ ಕೋಟೆ ರೈತ ಸಂಘದ ಅಧ್ಯಕ್ಷ ಮಹದೇವ ನಾಯಕ, ಕೆ.ಆರ್ ನಗರ ರೈತ ಸಂಘದ ಅಧ್ಯಕ್ಷ ಮಲ್ಲೇಶ್, ಪ್ರಗತಿಪರ ಸಂಘಟನೆ ಒಕ್ಕೂಟದ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ಸಿದ್ದೇಶ್, ಪ್ರಕಾಶ್, ಚಿಕ್ಕ ಹುಣಸೂರು ರಾಜು, ನಾರಾಯಣ್, ಗಿರೀಶ್, ರವಿನಾಯಕ್, ಟಿ.ಎಂ. ಮೌನೇಶ್, ಶಿವರಾಜ್ ಎನ್ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...