ಮೈಸೂರು | 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣ

Date:

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ಯೋಜನೆ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಪೂರ್ಣಕೊಂಡಿದ್ದು, ಜ. 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

2018ರಲ್ಲಿ ಶಾಸಕರಾಗಿದ್ದ ಕೆ. ವೆಂಕಟೇಶ್ 295 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ರೂಪಿಸಿ ಪ್ರಸ್ತಾವವನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿಟ್ಟು, ಮಹತ್ವದ ಯೋಜನೆಗೆ ಮಂಜೂರಾತಿ ಪಡೆದುಕೊಂಡು ಶಂಕುಸ್ಥಾಪನೆ ಮಾಡಿಸಿದ್ದರು.

ಕಾವೇರಿ ನದಿಯ ದಡದಲ್ಲಿರುವ ಮುಳಸೋಗೆ ಗ್ರಾಮದಿಂದ ತಾಲೂಕಿನ 79ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. 295 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಯನ್ನು ಕಾವೇರಿ ನೀರಾವರಿ ನಿಗಮವು ಮಹಾರಾಷ್ಟ್ರ ಕೊಲ್ಲಾಪುರದ ಲಕ್ಷ್ಮೀ ಸಿವಿಲ್ ಎಂಜಿನಿಯರಿಂಗ್ ಅಂಡ್ ಕನ್ಸ್ಟ್ರಕ್ಷನ್ ಕಂಪನಿ ಮೂಲಕ ಅನುಷ್ಠಾನಗೊಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮುಳ್ಳುಸೋಗೆ ಗ್ರಾಮದ ಬಳಿ ಏತ ನೀರಾವರಿಯ ಮೂಲಕ ಕಾವೇರಿ ನದಿಯಿಂದ ನೀರನ್ನು ಎತ್ತಿ ಅಲ್ಲಿಂದ 11.37 ಕಿ.ಮೀವರೆಗೆ ಅಳವಡಿಸಿರುವ ಪೈಪ್‌ ಲೈನ್‌ಗಳ ಮೂಲಕ ಬ್ಯಾಡರ ಬೆಳಗೊಲಿ ಬಳಿ ನಿರ್ಮಾಣಗೊಂಡಿರುವ ಸಂಗ್ರಹಣಾ ತೊಟ್ಟಿಗೆ ನೀರನ್ನು ತರುವ ಕಾಮಗಾರಿ ಸಹ ಸಂಪೂರ್ಣಗೊಂಡಿದೆ.

ಮಳೆಗಾಲದಲ್ಲಿ ನಿರಂತರವಾಗಿ ಕೆರೆಗಳಿಗೆ ನೀರು ಹಾಯಿಸುವ ಸಲುವಾಗಿ ಪ್ರತ್ಯೇಕ ವಿದ್ಯುತ್ ಉಪ ಕೇಂದ್ರವನ್ನು ಸಹ ತೆರೆಯಲಾಗಿದೆ. ಈ ಯೋಜನೆಗೆ 66 ಕೆವಿ ವಿದ್ಯುತ್ ಅಗತ್ಯವಿದೆ. ಬೃಹತ್ ಗಾತ್ರದ ಜಾಕ್ವೆಲ್, ಪಂಪ್‌ಗಳನ್ನು ಅಳವಡಿಸಿ, ದೊಡ್ಡ ಗಾತ್ರದ ಪೈಪ್‌ಗಳನ್ನು ಅಳವಡಿಸಿ ಕೆರೆಗಳಿಗೆ ನೀರು ಹರಿಸಲು ಯೋಜನೆ ರೂಪಿಸಲಾಗಿದೆ.

ಜ. 24ರಂದು ತಾಲೂಕಿನ ಭಾರತಮಾತ ಕೊಪ್ಪ ಶಾಲೆಯ ಬಳಿ ಇರುವ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ; ಚೆಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು...

ಉಡುಪಿ | ಮತದಾನ ಬಹಿಷ್ಕಾರ ಹಿಂಪಡೆದ ಕಟ್ಟಿಂಗೇರಿ ಮತದಾರರು

ರಸ್ತೆಯ ಅವ್ಯವಸ್ಥೆ ಖಂಡಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸುವಲ್ಲಿ ಮಾಜಿ...

ಕಲಬುರಗಿ | ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿತ್ತು: ಮಾಲೀಕಯ್ಯ ಗುತ್ತೇದಾರ

2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ...

ದಕ್ಷಿಣ ಕನ್ನಡ | ಎನ್‌ಡಿಎ ಹೀನಾಯ ಸೋಲು, ‘ಇಂಡಿಯಾ’ ಒಕ್ಕೂಟಕ್ಕೆ ಬಹುಮತ ಖಚಿತ: ಎಂ ವೀರಪ್ಪ ಮೊಯಿಲಿ

ಬೆಲೆ ಏರಿಕೆ, ಆರ್ಥಿಕ ಅಸಮಾನತೆ ನಿರುದ್ಯೋಗದಿಂದ ಕೇಂದ್ರ ಸರ್ಕಾರದ ವಿರುದ್ಧ ಜನರ...