ಮೈಸೂರು | ಯುವ ಸಮೂಹ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು: ಸಚಿವ ಮಹದೇವಪ್ಪ

Date:

ಇಂದಿನ ಯುವ ಸಮೂಹವು ಓದುವ ಹವ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿಯೊಂದು ವಿಚಾರದಲ್ಲೂ ಆಳವಾದ ಅಧ್ಯಯನ ಕೈಗೊಳ್ಳಬೇಕು ಎಂದು ಸಚಿವ ಡಾ. ಎಚ್‌ ಸಿ ಮಹದೇವಪ್ಪ ಹೇಳಿದರು.

- Advertisement -

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ ಎನ್ ಲಕ್ಷ್ಮಿ ಅವರ ಅಭಿನಂದನಾ ಸಮಾರಂಭ, ‘ಅರಿವಿನ ಸಿರಿ’ ಅಭಿನಂದನಾ ಗ್ರಂಥ ಹಾಗೂ ನಾಲ್ಕು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಾಮಾಜಿಕ ಜಾಲತಾಣದ ಮೂಲಕ ಪರಿಪೂರ್ಣವಾದ ಸಮಾಜ ನಿರ್ಮಿಸಲು ಸಾಧ್ಯವಿಲ್ಲ. ಓದುವ ಹವ್ಯಾಸದಿಂದ ಮಾತ್ರ ಭೌದ್ಧಿಕವಾಗಿ ಬಲಾಢ್ಯರಾಗಲು ಸಾಧ್ಯ. ದೇಶದಲ್ಲಿರುವ ಅವೈಜ್ಞಾನಿಕತೆಯನ್ನು ತೊಲಗಿಸಲು ಶಿಕ್ಷಣ ಬಹಳ ಮುಖ್ಯ. ವೈಜ್ಞಾನಿಕತೆ ಹಾಗೂ ವೈಚಾರಿಕತೆಯಿಂದ ಕೂಡಿದ ಶಿಕ್ಷಣವು ಮೂಢನಂಬಿಕೆ, ಅನಾಗರಿಕತೆ ಹಾಗೂ ಶೋಷಣೆಯನ್ನು ತೊಡೆದು ಹಾಕುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
WhatsApp Image 2025 02 04 at 11.18.14 AM

“ಮಹಿಳೆಯರ ಸಮಾನತೆಗಾಗಿ ಬಾಬಾ ಸಾಹೇಬರು ಜಾರಿಗೆ ತಂದ ಹಿಂದೂ ಕೋಡ್ ಬಿಲ್ ಕುರಿತು ಯಾವುದೇ ಕಾರ್ಯಾಗಾರದಲ್ಲಿ ಚರ್ಚೆಗಳು ನಡೆಯುತ್ತಿಲ್ಲ. ಈ ಬಗ್ಗೆ ಗಮನಹರಿಸಬೇಕಾದ ಮಹಿಳೆಯರು ಮೌಢ್ಯ, ಕಂದಾಚಾರಕ್ಕೆ ಸಿಲುಕಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಹೆಣ್ಣುಮಕ್ಕಳು ವಿದ್ಯಾವಂತರಾಗಿದ್ದರೂ ಕೂಡ ಹೆಚ್ಚು ಮೌಢ್ಯದ ಕಡೆ ವಾಲುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದದ್ದೀರಾ?:ಮೈಸೂರು | ಕ್ರಿಯೇಟಿವ್ ಎಕಾನಮಿಯೇ ಭಾರತದ ಭವಿಷ್ಯ: ಕೇಂದ್ರ ಸಚಿವ ಮುರುಗನ್

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ, ಕೆಎಸ್‌ಒಯು ಕುಲಪತಿ ಶರಣಪ್ಪ ವಿ ಹಲಸೆ, ವಿಶ್ರಾಂತ ಕುಲಪತಿ ಪ್ರೊ ಕೆ ಎಸ್ ರಂಗಪ್ಪ, ರಾಮೇಗೌಡ, ಪ್ರೊ ನಾಗಣ್ಣ, ಬಂಜಗೆರೆ ಜಯಪ್ರಕಾಶ್, ಚಿಂತಕ ಪ್ರೊ ಭಗವಾನ್, ಚಂದ್ರಶೇಖರ್, ಕುಲಸಚಿವ ಪ್ರವೀಣ್ ಮೊದಲಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...