ಮೈಸೂರು | ಡಿಸೆಂಬರ್‌ನಲ್ಲಿ ಮೂರು ದಿನ ಎಐಡಿಎಸ್ಒ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ

Date:

ನಮ್ಮ ದೇಶದ ನವೋದಯ ಚಳವಳಿಯ ಮೂಲ ಉದ್ದೇಶ ಎಲ್ಲ ಹಳೆಯ ಕಂದಾಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು ಎಂದು ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ ಜಿ ಹೇಳಿದರು.

- Advertisement -

ಮೈಸೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಯವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವುದೇ ಹೆಣ್ಣು ಮಗುವು ಅಭದ್ರತೆಯಿಂದ ಬಳಲದೆ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧ್ಯೇಯದೊಂದಿಗೆ ಹೋರಾಡಿದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಶಿಕ್ಷಣಕ್ಕೆ ಅನುದಾನ ಕಡಿತಗೊಳಿಸುತ್ತ ಬಂದಿವೆ. ಎನ್ಇಪಿ ಶಿಕ್ಷಣ ನೀತಿಯು ಜಾರಿಯಾದ ಮೊದಲ ಹಂತದಲ್ಲೇ 13,800 ಸರ್ಕಾರಿ ಶಾಲೆಗಳನ್ನು ವಿಲೀನೀಕರಣದ ಹೆಸರಿನಲ್ಲಿ ಮುಚ್ಚಲು ಆದೇಶ ಹೊರಡಿಸಿತು. ನಾಲ್ಕು ವರ್ಷದ ಪದವಿಯು ಜಾರಿಯಾಯಿತು. ಎಐಡಿಎಸ್‌ ನಾಯಕತ್ವದಡಿಯಲ್ಲಿ 37 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಜನಸಾಮಾನ್ಯರು ಸಹಿ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂದು ಹೇಳಿದರು.

“ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಎನ್ಇಪಿ-2020ಯನ್ನು ಕರ್ನಾಟಕದಲ್ಲಿ ರದ್ದುಗೊಳಿಸಬೇಕಾಯಿತು. ಈ ಅಭೂತಪೂರ್ವ ವಿಜಯವು, ದೇಶಕ್ಕೆ ಮಾದರಿಯಾಗುವಂತಿದೆ. ಈಗ ನಮ್ಮ ಮುಂದಿರುವ ದೊಡ್ಡ ಸವಾಲೆಂದರೆ ಎನ್‌ಇಪಿಯು ದೇಶದ ಯಾವುದೇ ಮೂಲೆಯಲ್ಲೂ ಜಾರಿಯಾಗದಂತೆ ತಡೆಯಲು ವಿದ್ಯಾರ್ಥಿಗಳ ಸಂಘಟಿತ ಹೋರಾಟ ಬೆಳೆಸುವುದಾಗಿದೆ” ಎಂದು ಹೇಳಿದರು.

“ಸಮಾಜದಲ್ಲಿ ಕುಸಿಯುತ್ತಿರುವ ಸಾಂಸ್ಕೃತಿಕ ಮಟ್ಟ ಹಾಗೂ ಮಹಿಳೆಯರ ಮೇಲೆ ದಿನೇ ದಿನೆ ಹೆಚ್ಚುತ್ತಿರುವ ಅಪರಾಧಗಳ ವಿರುದ್ಧ ಸಾಂಸ್ಕೃತಿಕ ಚಳವಳಿಯನ್ನು ಹರಿಬಿಡಬೇಕಿದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ, ಮಾನವತೆ ಮತ್ತು ಸಂಸ್ಕೃತಿಯನ್ನು ಉಳಿಸುವ ಘೋಷವಾಕ್ಯಗಳನ್ನು ಮೊಳಗಿಸಿ, ಉತ್ತಮ ಸಮಾಜ ನಿರ್ಮಿಸುವ ಉದಾತ್ತ ಜವಬ್ದಾರಿ ನಮ್ಮ ಮೇಲಿದೆ. ಈ ಐತಿಹಾಸಿಕ ಅವಶ್ಯಕತೆಗಾಗಿ ವಿದ್ಯಾರ್ಥಿ ಹೋರಾಟಗಳನ್ನು ಇನ್ನಷ್ಟು ಬಲಿಷ್ಠಗೊಳಿಸಲು ದೇಶದ ರಾಜಧಾನಿ ದೆಹಲಿಯಲ್ಲಿ ಡಿಸೆಂಬರ್‌ 27, 28, 29ರಂದು ಎಐಡಿಎಸ್ಒ ನೇತೃತ್ವದಲ್ಲಿ 10ನೇ ಅಖಿಲ ಭಾರತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ” ಎಂದರು.

“ಶಿಕ್ಷಣ ಪ್ರೇಮಿ ಜನತೆ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಈ ಸಮ್ಮೇಳನದ ಕರೆಗೆ ಓಗೊಟ್ಟು, ಅಖಿಲ ಭಾರತ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಐಡಿಎಸ್ಒ ಮೈಸೂರು ಜಿಲ್ಲಾ ಸಮಿತಿ ಮನವಿ ಮಾಡುತ್ತದೆ” ಎಂದು ಕೋರಿದರು.

ಪ್ರಮುಖ ಬೇಡಿಕೆಗಳು:

  1. ಶಾಲಾ ಕಾಲೇಜುಗಳಲ್ಲಿ ಎಲ್ಲ ಹಂತದ ಶುಲ್ಕ ಏರಿಕೆಯನ್ನು ತಡೆಗಟ್ಟಬೇಕು.
  2. ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ, ಮುಚ್ಚಿದ ಶಾಲೆಗಳನ್ನು ಪುನರಾರಂಭಿಸಬೇಕು.
  3. ಖಾಲಿಯಿರುವ ಎಲ್ಲ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ಕಾಯಂ ಆಧಾರದ ಮೇಲೆ ಭರ್ತಿ ಮಾಡಬೇಕು.
  4. ಎನ್‌ಟಿಎ ರದ್ದುಗೊಳಿಸಿ ಮತ್ತು ಎಲ್ಲ ಪರೀಕ್ಷಾ ಅಕ್ರಮಗಳ ಕುರಿತು ಪರಿಣಾಮಕಾರಿ ತನಿಖೆ ನಡೆಸಬೇಕು.
  5. ವೈದ್ಯಕೀಯ ಶಿಕ್ಷಣದಲ್ಲಿ ಅವೈಜ್ಞಾನಿಕ ಸಿಎಂಬಿಎ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಿ ಮತ್ತು ನೀಟ್‌ ರದ್ದುಗೊಳಿಸಬೇಕು.
  6. ನಾಲ್ಕು ವರ್ಷದ ಪದವಿಯನ್ನು ತಿರಸ್ಕರಿಸಿ, ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ, ಕೇಂದ್ರೀಕರಣ, ವೃತ್ತಿಪರೀಕರಣದ ನೀಲಿನಕ್ಷೆಯಾಗಿರುವ ಎನ್‌ಇಪಿ-2020ನ್ನು ರದ್ದುಗೊಳಿಸಿ ಮತ್ತು ಶಿಕ್ಷಣದಲ್ಲಿ ಕೋಮುವಾದೀಕರಣವನ್ನು ತಡೆಗಟ್ಟಬೇಕು.
  7. ಎಲ್ಲ ಸಂಶೋಧನಾ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದೆ ಗೌರವಾನ್ವಿತ ಮತ್ತು ನಿಯಮಿತ ಫೆಲೋಶಿಪ್ ನೀಡಲು ಕ್ರಮ ಕೈಗೊಳ್ಳಬೇಕು.
  8. ನವೋದಯದ ಹರಿಕಾರರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೀವನ ಹೋರಾಟಗಳನ್ನು ಪಠ್ಯಕ್ರಮದಲ್ಲಿ ಸೇರಿಸಿ, ಅವೈಜ್ಞಾನಿಕ ವಿಚಾರಗಳನ್ನು ಹರಡುವ ಮತ್ತು ಐತಿಹಾಸಿಕ ಸತ್ಯಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಬೇಕು.
  9. ಸರ್ಕಾರ ಎಲ್ಲರಿಗೂ ಉದ್ಯೋಗವನ್ನು ಖಾತ್ರಿಪಡಿಸಬೇಕು.
  10. ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್‌ನಲ್ಲಿ ಶೇ.10ರಷ್ಟು ಮತ್ತು ರಾಜ್ಯ ಬಜೆಟ್‌ನಲ್ಲಿ ಶೇ.30ರಷ್ಟು ಮೀಸಲಿಡಬೇಕು. ಒಟ್ಟು ಜಿಡಿಪಿಯ ಶೇ.3 ಮತ್ತು ಬಜೆಟ್‌ನಲ್ಲಿ ಶೇ.3ರಷ್ಟನ್ನು ಸಂಶೋಧನೆಗಾಗಿ ನಿಗದಿಪಡಿಸಬೇಕು.
  11. ಕ್ಯಾಂಪಸ್‌ಗಳ ಒಳಗೆ ಮತ್ತು ಹೊರಗೆ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಅವರ ಘನತೆಯ ರಕ್ಷಣೆಯನ್ನು ಖಾತ್ರಿಪಡಿಸಿ.
  12. ಲಿಂಗ್ಡೊ ಆಯೋಗದ ಶಿಫಾರಸುಗಳನ್ನು ರದ್ದುಗೊಳಿಸಿ ಮತ್ತು ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಎಲ್ಲ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮರು-ಪರಿಚಯಿಸಿ, ಎಲ್ಲ ಶೈಕ್ಷಣಿಕ ಕ್ಯಾಂಪಸ್‌ಗಳಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಮುಕ್ತ ಪ್ರಜಾತಾಂತ್ರಿಕ ವಾತಾವರಣವನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಡಿಎಸ್ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಹಾಗೂ ಪದಾಧಿಕಾರಿ ಹೇಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...