ಮೈಸೂರು | ಕುರಿಗಳ ಮೇಲೆ ಹರಿದ ಟಿಪ್ಪರ್‌, 18ಕುರಿಗಳ ಸಾವು, ಕುರಿಗಾಯಿಗೆ ಗಂಭೀರ ಗಾಯ

Date:

ಟಿಪ್ಪರ್ ಲಾರಿಯೊಂದು ಕುರಿಗಳ ಮೇಲೆ ಹರಿ ಪರಿಣಾಮ 18 ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾ ನಗರದ ಬಳಿ ಗುರುವಾರ (ಡಿ.28) ನಡೆದಿದೆ.

ತುಮಕೂರು ಜಿಲ್ಲೆಯ ಅಲೆಮಾರಿ ಕುರಿಗಾಹಿಗಳು, ಕುರಿಗಳನ್ನು ಮೇಯಿಸಲು ಹೋಗುತ್ತಿದ್ದಾಗ, ಬೇಗೂರು ಕಡೆಯಿಂದ ಬಂದ ಡಸ್ಟ್ ತುಂಬಿದ ಟಿಪ್ಪರ್ ಲಾರಿ ವೇಗವಾಗಿ ಬಂದು ಕುರಿಗಳ ಮೇಲೆ ಹರಿದಿದೆ. ಕುರಿಗಾಹಿಯು ಗಂಭೀರವಾಗಿ ಗಾಯಗೊಂಡು ನೆರಳಾಡುತ್ತಿದ್ದನ್ನು ಕಂಡ ಸ್ಥಳಿಯರು ಆತನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

18 ಕುರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 40 ಕುರಿಗಳು ಗಾಯಗೊಂಡಿವೆ. ಟಿಪ್ಪರ್ ಲಾರಿಯ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ. ನಾವು ಕುರಿಗಳನ್ನು ನಂಬಿಕೊಂಡು ಜೀವನ ಮಾಡುತ್ತಿದ್ದೇವೆ. ಊರೂರು ಸುತ್ತಿ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿರುವಾಗ ಲಾರಿಯಿಂದ ನಡೆದ ಅಪಘಾತದಲ್ಲಿ ನಮಗೆ ಸುಮಾರು 8 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ನಮಗೆ ಸೂಕ್ತ ಪರಿಹಾರ ನೀಡುವ ತನಕ ರಸ್ತೆಯಲ್ಲಿಯೇ ಹೋರಾಟ ಮಾಡುತ್ತೇವೆ, ಎಂದು ಕುರಿಗಾಹಿಗಳು ಪಟ್ಟುಹಿಡಿದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹುಲ್ಲಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆ ಪ್ರಕರಣ: ನಟ ದರ್ಶನ್ ವಿರುದ್ಧ ಪ್ರತಿಭಟನೆ

ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಸಾವಿಗೆ ನ್ಯಾಯ...

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು...