ಮೈಸೂರು | ಜೂ.27ರಂದು ಅದ್ಧೂರಿಯಾಗಿ ಕೆಂಪೇಗೌಡ ಜಯಂತಿ ಆಚರಣೆ

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ವಿವಿಧ ಚಟುವಟಿಕೆಗಳಲ್ಲಿ ನಿರತರಾಗಿರುವ ಹಿನ್ನೆಲೆಯಲ್ಲಿ, ಜೂನ್ 27ರಂದು ಎಂದಿನಂತೆ ಮೈಸೂರಿನ ಕಲಾಮಂದಿರದಲ್ಲಿ ಸರ್ಕಾರದ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ವಿವಿಧ ಜಿಲ್ಲಾ ಒಕ್ಕಲಿಗರ ಸಂಘಗಳು ಒಮ್ಮತದ ನಿರ್ಣಯ ಕೈಗೊಂಡಿವೆ.

- Advertisement -

ನಗರದ ಜಲದರ್ಶಿನಿಯಲ್ಲಿ ರಾಜ್ಯ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ಹಾಗೂ ವಿವಿಧ ಒಕ್ಕಲಿಗ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಯಿತು. ಆರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬೇರೆ ದಿನಾಂಕದಲ್ಲಿ ಜಯಂತಿ ಆಚರಿಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಬೇರೆ ಕಾರ್ಯಕ್ರಮದ ಮೂಲಕ ಭಾಗವಹಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ, ನಿಗದಿತ ದಿನಾಂಕವಾದ ಜೂ.27ರಂದೇ ಜಿಲ್ಲಾಡಳಿತದೊಂದಿಗೆ ಸೇರಿ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಲ್. ನಾಗೇಂದ್ರ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಮುದಾಯದ ವಿಚಾರದಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಂದಾಗಬೇಕು ಎಂದು ಕರೆ ನೀಡಿದರು. ಮುಂದಿನ ವರ್ಷಗಳಿಂದ ಜಯಂತಿ ಆಚರಣೆಯ ಸಿದ್ಧತೆಗಳನ್ನು ಮೂರು ತಿಂಗಳ ಮುಂಚೆಯೇ ಆರಂಭಿಸುವ ಅಗತ್ಯವಿದ್ದು, ಹೆಚ್ಚಿನ ಪ್ರಚಾರದ ಮೂಲಕ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವಂತೆ ಮಾಡಬೇಕೆಂದು ಹೇಳಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವ ಸಮಿತಿ ಅಧ್ಯಕ್ಷ ಪಿ. ಪ್ರಶಾಂತಗೌಡ ಮಾತನಾಡಿ, ಜಯಂತಿ ಯಶಸ್ವಿಗಾಗಿ ಪ್ರಚಾರ, ಆಹಾರ, ಪ್ರತಿಭಾ ಪುರಸ್ಕಾರ, ಸ್ವಾಗತ, ಹಣಕಾಸು ಸೇರಿದಂತೆ ಏಳಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದರು. ಸಮುದಾಯದ ಆಸಕ್ತರು ಮುಂದೆ ಬಂದು ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಬಹುದಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ-ಮನವಿ ಸಲ್ಲಿಕೆ

ಚುಂಚನಗಿರಿ ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಶಾಸಕ ಹರೀಶ್ ಗೌಡ ಹಾಗೂ ಮಾಜಿ ಶಾಸಕ ಎಲ್. ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಹಾಲಿ ಹಾಗೂ ಮಾಜಿ ಶಾಸಕರು ಸೇರಿದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು. ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಮಳೆ ಕೊರತೆ: ಕಾಫಿ, ಮೆಣಸು ಇಳುವರಿ ಕುಂಠಿತ, ರೈತರಿಗೆ ಆರ್ಥಿಕ ನಷ್ಟ

ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಕೆ.ವಿ. ಶ್ರೀಧರ್, ಮೈಸೂರು-ಚಾಮರಾಜನಗರ ಜಿಲ್ಲಾ ಸಂಘದ ಅಧ್ಯಕ್ಷ ಎಂ. ಮರಿಸ್ವಾಮಿ, ಗೌರವಾಧ್ಯಕ್ಷ ಆಲತೂರು ಜಯರಾಮ್, ಉಪಾಧ್ಯಕ್ಷ ರವಿಕುಮಾರ್ ರಾಜಕೀಯ, ಬನ್ನೂರು ಮಹೇಶ್, ಪ್ರಧಾನ ಕಾರ್ಯದರ್ಶಿ ಎಂ.ಇ. ಚೇತನ್, ನಿರ್ದೇಶಕರಾದ ಒಂಟಿಕೊಪ್ಪಲು ಗುರುರಾಜ್, ರವಿ, ಬಿ.ಪಿ. ಬೋರೇಗೌಡ, ಗಿರೀಶ್ ಗೌಡ, ಜಿ. ಕುಮಾರ್ ಗೌಡ, ಎಂ. ಸುಶೀಲ ನಂಜಪ್ಪ, ಉಮೇಶ್ ಹಾಗೂ ಸಮುದಾಯದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...

ಕಲಬುರಗಿ | ನಕಲಿ ಎಸ್‌ಟಿ ಪ್ರಮಾಣ ಪತ್ರಗಳಿಗೆ ಕಡಿವಾಣ, ಮೀಸಲಾತಿ ರಕ್ಷಣೆಗೆ ಆಗ್ರಹ

ನಕಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಜಾತಿ ಪ್ರಮಾಣಪತ್ರಗಳ ಹಾವಳಿಗೆ ಕಡಿವಾಣ ಹಾಕಬೇಕು...