ಮೈಸೂರು | ಜುಲೈ.19 ರಂದು ಬೃಹತ್ ಸಮಾವೇಶ; ಸಚಿವ ಮಹದೇವಪ್ಪರಿಂದ ಪೂರ್ವಭಾವಿ ಸಭೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ. 19 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ‘ ಸರ್ಕಾರದ ಸಾಧನೆಗಳ ಸಮಾವೇಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ‘ ಬೃಹತ್ ಸಮಾವೇಶ ಸಂಬಂಧ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಶನಿವಾರ ಸರ್ಕಾರಿ ಅತಿಥಿ ಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿವರ್ಗದವರು ಹಾಗೂ ಮುಖಂಡರೊಡನೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾತನಾಡಿದ ಸಚಿವರು, ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸುಸರ್ಜಿತ ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆಯನ್ನು ಬಹಳ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಚಾರದಂತೆ ಆಸನ ವ್ಯವಸ್ಥೆ ಮಾಡುವುದು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ಗಳ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಿದ್ದತೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಾವಿರಾರು ಸಂಖ್ಯೆಯಲ್ಲಿ ಬರುವ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಯಾವುದೇ ಕಿರಿಕಿರಿ ಉಂಟಾಗಬಾರದು. ಇದು ಸರ್ಕಾರದ ಬೃಹತ್ ಸಮಾರಂಭವಾಗಿದ್ದು, ಪಾಲ್ಗೊಳ್ಳುವ ಎಲ್ಲರಿಗೂ ಕುಡಿಯುವ ನೀರು, ಶೌಚಾಲಯ, ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಂಡು, ಯಾವುದಕ್ಕೂ ಕೊರತೆ ಉಂಟಾಗದಂತೆ ಸಮಾರಂಭ ನಡೆಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರೆಲ್ಲರೂ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಸಭೆಗೆ ಆಗಮಿಸಿದ್ದ ಎಲ್ಲರೂ ಸಹಮತ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು : ಸಚಿವ ಮಹದೇವಪ್ಪ

ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಎ. ಆರ್. ಕೃಷ್ಣಮೂರ್ತಿ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಮಾಜಿ ಶಾಸಕರಾದ ಎಚ್. ಪಿ. ಮಂಜುನಾಥ್, ಎಂ. ಕೆ. ಸೋಮಶೇಖರ್, ಆರ್. ನರೇಂದ್ರ, ಸುನೀತ ವೀರಪ್ಪಗೌಡ, ಕಳಲೆ ಕೇಶವಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಷೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ. ಜೆ. ವಿಜಯಕುಮಾರ್, ಆರ್. ಮೂರ್ತಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X