ಮೈಸೂರು | ತಂಬಾಕು ಆರೋಗ್ಯ ಮತ್ತು ಪರಿಸರಕ್ಕೆ ಮಾರಕ: ಡಾ. ರವಿಕುಮಾರ್ ಎಚ್ಚರಿಕೆ

Date:

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಮತ್ತು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

- Advertisement -

ಕಾರ್ಯಕ್ರಮವನ್ನು ಸಹಾಯಕ ಸರ್ಕಾರಿ ಅಭಿಯೋಜಕರಾದ ಮುತ್ತುಲಕ್ಷ್ಮಿ ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ಗಂಗರಾಜು ಎಸ್ ಅವರು ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅವರು ಪರಿಸರ ಸಂರಕ್ಷಣೆ ಮತ್ತು ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಜಿಲ್ಲಾ ಸಂಯೋಜಕರಾದ ಶಿವಕುಮಾರ್ ಕಾರ್ಯಕ್ರಮದ ವಾಸ್ತವಿಕ ನುಡಿಗಳನ್ನು ಮಂಡಿಸಿದರು. ಬಳಿಕ ಮಾತನಾಡಿದ ಸಹಾಯಕ ಸರ್ಕಾರಿ ಅಭಿಯೋಜಕರಾದ ಮುತ್ತುಲಕ್ಷ್ಮಿ, ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೀವನದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬುದರ ಬಗ್ಗೆ ಅರಿವು ಹೊಂದುವುದು ಅಗತ್ಯವಾಗಿದ್ದು, ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, “ವಿಶ್ವ ತಂಬಾಕು ರಹಿತ ದಿನದ ಮಹತ್ವವನ್ನು ವಿವರಿಸಿದರು. ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ತೊಂದರೆಗಳು ಸೇರಿದಂತೆ ಅನೇಕ ಮಾರಕ ಕಾಯಿಲೆಗಳು ಉಂಟಾಗುತ್ತವೆ ಎಂದು ತಿಳಿಸಿದರು. 2026ರ ವಿಶ್ವ ತಂಬಾಕು ರಹಿತ ದಿನದ ಘೋಷವಾಕ್ಯವಾದ ‘ಮುಖವಾಡವನ್ನು ಕಳಚುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು’ ಕುರಿತು ಮಾಹಿತಿ ನೀಡಿದ ಅವರು, ಯುವಜನರನ್ನು ಗುರಿಯಾಗಿಸಿಕೊಂಡು ತಂಬಾಕು ಉತ್ಪನ್ನಗಳ ಮಾರಾಟ ನಡೆಯುತ್ತಿರುವ ಬಗ್ಗೆ ಎಚ್ಚರಿಕೆ ವಹಿಸುವಂತೆ ಕರೆ ನೀಡಿದರು.

ತಂಬಾಕು ಕೃಷಿಯಿಂದ ಉಂಟಾಗುವ ಅರಣ್ಯನಾಶ, ಮಣ್ಣಿನ ಫಲವತ್ತತೆ ಕುಸಿತ ಹಾಗೂ ಪರಿಸರ ಹಾನಿಯ ಕುರಿತು ವಿವರಿಸಿದ ಅವರು, ತಂಬಾಕು ಬಳಕೆ ಆರೋಗ್ಯದ ಜೊತೆಗೆ ಪರಿಸರಕ್ಕೂ ಗಂಭೀರ ಹಾನಿಯನ್ನು ಉಂಟುಮಾಡುತ್ತದೆ ಎಂದು ತಿಳಿಸಿದರು. ತಂಬಾಕು ಉತ್ಪಾದನೆ, ಬಳಕೆ ಮತ್ತು ತ್ಯಾಜ್ಯ ನಿರ್ವಹಣೆಯ ಸಂಪೂರ್ಣ ಚಕ್ರದ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ವಕೀಲರ ಸಂಘದ ಅಧ್ಯಕ್ಷರಾದ ಗಂಗರಾಜು ಎಸ್. ಮಾತನಾಡಿ, ಮನೆಯ ಹಿರಿಯರು ಅಥವಾ ಸ್ನೇಹಿತರ ದುಶ್ಚಟಗಳು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು ಒಳ್ಳೆಯವರ ಸಹವಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಗುರಿ ಮುಖ್ಯವಾಗಿದ್ದು, ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ವಕೀಲರಾದ ಜೆ.ಸಿ. ಕುಮಾರ್ ಅವರು ತಂಬಾಕು ಸೇವನೆಯ ದುಷ್ಪರಿಣಾಮಗಳು, ತಂಬಾಕು ನಿಯಂತ್ರಣ ಕ್ರಮಗಳು ಹಾಗೂ ಸಾರ್ವಜನಿಕ ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸುವ ಅಗತ್ಯದ ಕುರಿತು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು: ಶಾಸಕ ಎ.ಎಸ್. ಪೊನ್ನಣ್ಣ

ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಕಂದಸ್ವಾಮಿ, ಸಹಾಯಕ ಸರ್ಕಾರಿ ಅಭಿಯೋಜಕ ಮಹೇಂದ್ರ, ಹಿರಿಯ ವಕೀಲ ಜೆ.ಸಿ. ಕುಮಾರ್, ಪಣಿರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್, ಶರಣಪ್ಪ, ಅಶೋಕ್, ಮಹೇಶ್, ಕಾನೂನು ಸೇವಾ ಸಮಿತಿ ಸಿಬ್ಬಂದಿಗಳಾದ ಕವಿತಾ, ಶ್ರುತಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...