ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಎಚ್ಚರಿಕೆ ಜಾಥಾ

Date:

ಸಂಯುಕ್ತ ಕಿಸಾನ್ ಮೋರ್ಚಾ ಕಳೆದ ದಿನ ರಾಜ್ಯವ್ಯಾಪಿ ಜನಜಾಗೃತಿ ಅಭಿಯಾನದ ಭಾಗವಾಗಿ ರೈತ, ಕಾರ್ಮಿಕ ಹಾಗೂ ಎಲ್ಲ ರೀತಿಯ ಶೋಷಿತ ಬಂಧುಗಳ ಹಿತ ಕಾಯುವಂತೆ ಆಗ್ರಹಿಸಿ ‘ಎಚ್ಚರಿಕೆ ಜಾಥಾʼ ನಡೆಸಿತು.

- Advertisement -

ಟೌನ್ ಹಾಲ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಸಂಸ, ಜೆಸಿಟಿಯು ಕಾರ್ಯಕರ್ತರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಸಯ್ಯಾಜಿರಾವ್ ರಸ್ತೆ ಮೂಲಕ ಮೆರವಣಿಗೆ ನಡೆಸುವುದರ ಮೂಲಕ ಗಾಂಧಿ ವೃತ್ತದಲ್ಲಿ ಸೇರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

“ಕಾರ್ಮಿಕರು ಮತ್ತು ರೈತರು ಜಂಟಿಯಾಗಿ ದೇಶಾದ್ಯಂತ ಜ್ವಲಂತ ಸಮಸ್ಯೆಗಳನ್ನು ಎತ್ತಿ ಹಿಡಿಯಲು ಮತ್ತು ಪರಿಹಾರಕ್ಕಾಗಿ ಒತ್ತಾಯಿಸಲು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2020ರಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ಐತಿಹಾಸಿಕ ಚಳವಳಿ ಆರಂಭಿಸಲಾಗಿತ್ತು. ಆದೇ ದಿನವಾದ ನವೆಂಬರ್‌ 26ರಂದು ಪ್ರತಿಭಟನಾ ದಿನವನ್ನಾಗಿ ಆಚರಿಸಿದ್ದೇವೆ” ಎಂದು ಸಂಘಟಕರು ಹೇಳಿದರು.

“ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಯಾಗಬೇಕು. ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದರಿಂದ ರೈತರು ಸಾಲಗಾರರಾಗಿ ಲಕ್ಷಾಂತರ ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡಬೇಕು” ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

“ರೈತರ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಖಾಸಗೀಕರಣವಾಗದಂತೆ ತಡೆಯಬೇಕು. ರೈತರಿಗೆ ಅನ್ಯಾಯವಾಗದಂತೆ ರೈತರ ಹಿತ ಕಾಯುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಾರ್ಯೋನ್ಮುಖರಾಗಬೇಕು” ಎಂದು ಒತ್ತಾಯಿಸಿದರು.

ಜನಾಂದೋಲನ ಮಹಾ ಮೈತಿಯ ಉಗ್ರನರಸಿಂಹೆ ಗೌಡ ಮಾತನಾಡಿ, “ಕೇಂದ್ರ ಸರ್ಕಾರ ಎಂಎಲ್‌ಸಿಗಳಿಗೆ ಅನುಕೂಲವಾಗುವಂತೆ ಡಿಜಿಟಲೀಕರಣವನ್ನು ಹೇರುತ್ತಿದೆ. ಇದರಿಂದ ಕಾರ್ಪೊರೇಟ್ ಕಂಪನಿಗಳ ಅದಾನಿ ಮತ್ತು ಅಂಬಾನಿಯಂಥವರಿಗೆ ನೆರವು ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗದ ಆಸರೆಯಿರದೆ ವಾಸ್ತವವಾಗಿ ಗುಲಾಮಗಿರಿಗೆ ತಳ್ಳುವಂತಹ ಕೆಲಸವಾಗುತ್ತಿದೆ. ಕಾರ್ಮಿಕರಿಗೆ ಭದ್ರತೆಯಿಲ್ಲ. ಹೆಚ್ಚು ಸಮಯ ದುಡಿಸಿಕೊಳ್ಳುವುದು ಬಿಟ್ಟರೆ, ಕಾರ್ಮಿಕರ ಹಿತ ಕಾಯುವ ಕುಟುಂಬದ ಭದ್ರತೆ ಒದಗಿಸುವ ಕೆಲಸವಾಗುತ್ತಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಅನುಭದಲ್ಲಿರುವವರಿಗೆ  ಭೂಮಿ ಮಂಜೂರು ಮಾಡಲು ರೈತರ ಮನವಿ 

ಜಗದೀಶ್ ಸೂರ್ಯ ಮಾತನಾಡಿ, “ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ಧೋರಣೆಗಳಿಂದ ರೈತರು, ಕಾರ್ಮಿಕರು ಶೋಷಣೆಗೆ ಒಳಗಾಗಿದ್ದಾರೆ. ಯುವಕರು ಬದುಕು ಕಟ್ಟಿಕೊಳ್ಳಲು ಆಗುತ್ತಿಲ್ಲ. ಕಾರ್ಪೊರೇಟ್ ಕುಳಗಳಿಗೆ ಮಣೆ ಹಾಕುತ್ತ ರೈತ, ಕಾರ್ಮಿಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ರೈತ ವಿರೋಧಿ ಕಾಯ್ದೆಗಳು ಒಂದುಕಡೆಯಾದರೆ, ಇನ್ನೊಂದು ಕಡೆ ಕಾರ್ಮಿಕ ವಿರೋಧಿ ನಡೆಯಂತಹ ದುರಾಡಳಿತವನ್ನು ನಿಲ್ಲಿಸಬೇಕು” ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಜನಮನ ಗೋಪಾಲ್, ನೇತ್ರಾವತಿ, ಮಹಾದೇವ ನಾಯಕ, ಪಿ ಮರಂಕಯ್ಯ ಮೊದಲಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...