ಮೈಸೂರು | ಕೃಷ್ಣರಾಜ ಮತ ಕ್ಷೇತ್ರದಲ್ಲಿ ನೀರಿನ ಸಮಸ್ಯೆ; ನೀರು ಸರಬರಾಜು ಕೇಂದ್ರಕ್ಕೆ ಶಾಸಕ ಭೇಟಿ

Date:

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ಬಿದರಗೋಡು ನೀರು ಸರಬರಾಜು ಕೇಂದ್ರ(ಪಂಪಿಂಗ್ ಸ್ಟೇಷನ್‌)ಕ್ಕೆ ಕೃಷ್ಣರಾಜ ಮತಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

ಮೈಸೂರು-ನಂಜನಗೂಡಿನ ಗಡಿ ಭಾಗದಿಂದ ಕಬಿನಿ ನೀರನ್ನು ಪಂಪ್ ಮಾಡಿ ನಗರದ ಕೆಲವು ಭಾಗಗಳಿಗೆ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಮುಖ್ಯವಾಗಿ ಕೃಷ್ಣರಾಜ ವಿಭಾಗದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಸರಬರಾಜು ಕೇಂದ್ರದಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಬಗ್ಗೆ ಶಾಸಕರು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಪ್ರಸ್ತುತ ನೀರು ಸರಬರಾಜು ಕೇಂದ್ರದಿಂದ ಕೇವಲ 60 ಎಂಎಲ್‌ಡಿ (ಮಿಲಿಯನ್ ಲೀಟರ್ ಪರ್ ಡೇ) ನೀರನ್ನು ಪಂಪ್ ಮಾಡಿ ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂಎಸ್‌ಡಿಬಿ) ಮೈಸೂರು ನಗರಕ್ಕೆ ಹೆಚ್ಚುವರಿಯಾಗಿ 120 ಎಂಎಲ್‌ಡಿಯಷ್ಟು ಕಬಿನಿ ನೀರನ್ನು ಪೂರೈಕೆ ಮಾಡಲು ಬಿದರಗೋಡು ಕುಡಿಯುವ ನೀರಿನ ಯೋಜನೆಯ ಎರಡನೇ ಹಂತವನ್ನು ಜಾರಿಗೆ ತರುತ್ತಿದೆ. ಯೋಜನೆ ಪ್ರಗತಿಯಲ್ಲಿರುವುದರಿಂದ ಪೈಪ್ ಲೈನ್ ಹಾಕುವ ಕಾರ್ಯ ಪೂರ್ಣಗೊಂಡ ನಂತರ ನಗರಕ್ಕೆ ಕಬಿನಿ ಯೋಜನೆಯಿಂದ 180 ಎಂಎಲ್‌ಡಿಟಷ್ಟು ನೀರು ಲಭ್ಯವಾಗಲಿದ್ದು, ಇದರಿಂದ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ. ಈ ಯೋಜನೆಯು ನಗರದ ಉದ್ದೇಶಿತ ಪೆರಿಫೆರಲ್ ರಿಂಗ್ ರಸ್ತೆಯ ಸುತ್ತಲೂ ಬರುವ ಹೊಸ ಲೇಔಟ್‌ಗಳಿಗೂ ಕುಡಿಯುವ ನೀರನ್ನು ಪೂರೈಸುವ ಗುರಿ ಹೊಂದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

“ತಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕುಡಿಯುವ ನೀರು ಸರಬರಾಜು, ವಿತರಣಾ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಅಧ್ಯಯನ ಮಾಡಲು ಪಂಪಿಂಗ್ ಕೇಂದ್ರವನ್ನು ಪರಿಶೀಲಿಸಿದ್ದೇನೆ” ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

“ಕಬಿನಿ ಮತ್ತು ಕೆಆರ್‌ಎಸ್ ಅಣೆಕಟ್ಟೆಗಳಿಂದ ತಮ್ಮ ಕ್ಷೇತ್ರದ ಯಾವ ವಾರ್ಡ್‌ಗಳಿಗೆ ನೀರು ಬರುತ್ತಿದೆ ಎಂಬ ವಿವರಗಳನ್ನು ಅಧ್ಯಯನ ಮಾಡಿ ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇನೆ” ಎಂದು ಹೇಳಿದರು.

ಮೇಯರ್ ಶಿವಕುಮಾರ್, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ, ಅಧೀಕ್ಷಕ ಎಂಜಿನಿಯರ್ ಎಸ್.ಮಹೇಶ್, ವಾಣಿ ವಿಲಾಸ ವಾಟರ್ ವರ್ಕ್ಸ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸುವರ್ಣ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...