ಮೈಸೂರು | ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಸಾವು; ಪತಿ, ಅತ್ತೆ ಬಂಧನ

Date:

ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆಂದು ಆರೋಪದ ಮೇಲೆ ಮಹಿಳೆಯ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮೃತಳ ತಾಯಿ ತೆರೇಸಮ್ಮ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪತಿ ಆಂಟನಿ ಕಿರಣ್ ಮತ್ತು ಆತನ ತಾಯಿಯನ್ನು ಬುಧವಾರ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಅಂತೋಣಿ ಕಿರಣ್ ಪತ್ನಿ ನಿತ್ಯಾ ನಿರ್ಮಲ(25) ಎಂಬುವವರು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇವರಿಗೆ ಒಂದು ವರ್ಷದ ಮಗು ಇದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಣ್ಣೇನಹಳ್ಳಿಯ ತೆರೇಸಮ್ಮ ಎಂಬುವವರ 2ನೇ ಪುತ್ರಿಯನ್ನು ಎರಡೂವರೆ ವರ್ಷಗಳ ಹಿಂದೆ ಕೂಡ್ಲೂರಿನ ಕಿರಣ್‌ಗೆ ಮದುವೆ ಮಾಡಿ ಕೊಟ್ಟಿದ್ದರು.

“ಕೆಲವು ದಿನಗಳಿಂದ ಪತಿ ಕಿರಣ್, ನನ್ನ ಮದುವೆ ವೇಳೆ ವರದಕ್ಷಿಣೆ ಕೊಟ್ಟಿಲ್ಲ. ಬೇರೆಯವರನ್ನು ಮದುವೆಯಾಗಿದ್ದರೆ ಲಕ್ಷಾಂತರ ವರದಕ್ಷಿಣೆ ಸಿಗುತ್ತಿತ್ತು. ಮನೆಕಟ್ಟುತ್ತಿದ್ದೇನೆ, ಈಗಲಾದರೂ ತವರು ಮನೆಯಿಂದ ಹಣ ತೆಗೆದುಕೊಂಡು ಬಾ ಎಂದು ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಎರಡ್ಮೂರು ಬಾರಿ ನ್ಯಾಯ ಪಂಚಾಯಿತಿಯೂ ನಡೆದಿತ್ತು. ಮಗಳನ್ನು ಸಮಾಧಾನ ಮಾಡಿ ಕಳುಹಿಸಿಕೊಟ್ಟಿದ್ದೆವು. ಇತ್ತೀಚೆಗೆ ಪತಿಯ ಕಿರುಕುಳ ಹೆಚ್ಚಾಗಿತ್ತು. ಈ ಬಗ್ಗೆ ನಿರ್ಮಲ ನನ್ನೊಂದಿಗೆ ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದಳು. ಆದರೆ ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ ಬಡವಿ ತಾಯಿ ನಾನು ಏನೂ ಮಾಡಲಾಗದೆ ಊರಿನವರಿಗೆ ಗೊತ್ತಾದರೆ ಮರ್ಯಾದೆ ಹೋಗುತ್ತದೆಂದು ಅಂಜಿ ಮಗಳನ್ನು ಸಮಾಧಾನಿಸುತ್ತಲೇ ಬಂದಿದ್ದೆ” ಎಂದು ಮೃತಳ ತಾಯಿ ತೆರೇಸಮ್ಮ ಕಣ್ಣೀರು ಹಾಕಿದ್ದಾರೆ.

“ಮಂಗಳವಾರ ಬೆಳಿಗ್ಗೆ 10ಗಂಟೆಗೆ ನನಗೆ ಪೋನ್ ಮಾಡಿ, ʼಹಣ ತರುವಂತೆ ನನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ. ಸಾಯಿಸುತ್ತೇನೆಂದು ಗಂಡ ಹೊಡೆದಿದ್ದಾರೆ. ಬಂದು ನನ್ನನ್ನು ಕರೆದುಕೊಂಡು ಹೋಗುʼ ಎಂದು ಹೇಳಿದ್ದಳು. ಶಾಲೆಯಲ್ಲಿ ಬಿಸಿಯೂಟ ತಯಾರಿ ಮಾಡುತ್ತಿದ್ದ ನಾನು ಮಗಳಿಗೆ ಸಮಾಧಾನ ಹೇಳಿ, ಆಮೇಲೆ ಬರುತ್ತೇನೆಂದು ಪೋನ್ ಕಟ್ ಮಾಡಿದ್ದೆ. ಶಾಲೆಯ ಮಧ್ಯಾಹ್ನದ ಅಡುಗೆ ಕೆಲಸ ಮುಗಿದ ನಂತರ ಮಗಳಿಗೆ ಪೋನ್ ಮಾಡಿದರೆ ಸ್ವಿಚ್‌ಆಫ್ ಆಗಿತ್ತು” ಎಂದು ದುಃಖಿಸುತ್ತಿದ್ದಾರೆ.

ಮಗಳ ಫೋನ್‌ ಸ್ವಿಚ್‌ಆಫ್‌ ಆಗಿದ್ದನ್ನು ಕಂಡು ಗಾಬರಿಯಾದ ತೆರೇಸಮ್ಮ ಕೂಡ್ಲೂರಿನ ಮಗಳ ಮನೆಯ ಅಕ್ಕಪಕ್ಕದವರಿಗೆ ಫೋನ್ ಮಾಡಿದಾಗ ಮಗಳ ಸಾವಿನ ಸುದ್ದಿ ತಿಳಿದು ಕಂಗಾಲಾಗಿದ್ದಾರೆ. ತಾಯಿ ತನ್ನ ಗ್ರಾಮಸ್ಥರೊಂದಿಗೆ ಕೂಡ್ಲೂರಿಗೆ ಹೋದ ವೇಳೆ ಪತ್ನಿ ನಿರ್ಮಲಾ ಲೋ-ಬಿಪಿಯಿಂದ ಸಾವನ್ನಪ್ಪಿದ್ದಾಳೆಂದು ಹೇಳಿದ್ದು, ತರಾತುರಿಯಲ್ಲಿ ಅಂತ್ಯ ಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದರೆಂಬುದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಅನುಮತಿ ನಿರಾಕರಣೆ ನಡುವೆಯೂ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದ ಎಂಇಎಸ್

“ಆಂಟನಿ ಮತ್ತು ಅವರ ತಾಯಿ ನನ್ನ ಮಗಳು ನಿತ್ಯಾಳಿಗೆ ದಿನ ಬೆಳಗಾದರೆ ಚಿತ್ರಹಿಂಸೆ ನೀಡುತ್ತಿದ್ದರು. ತನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಆಕೆಯ ದೇಹದ ಮೇಲಿನ ಗಾಯದ ಗುರುತುಗಳು ಕೊಲೆಯಾಗಿರುವುದಕ್ಕೆ ಸಾಕ್ಷಿಯಾಗಿವೆ. ತನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ತೆರೇಸಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಹಶೀಲ್ದಾರ್ ಮಂಜುನಾಥ್ ಮಹಜರು ನಡೆಸಿದ್ದು, ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸರು ವರದಕ್ಷಿಣೆ ಕಿರುಕುಳ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...