ಮೈಸೂರು | ಪ್ರೇಮಿಯ ಜೊತೆ ಊರು ತೊರೆದ ಯುವತಿ; ಕುಟುಂಬಸ್ಥರು ಆತ್ಮಹತ್ಯೆ

Date:

ಪ್ರೀತಿಸುತ್ತಿದ್ದ ಯುವಕನ ಜೊತೆ ಯುವತಿ ಊರು ತೊರೆದಿದ್ದು, ಮರ್ಯಾದೆ ಹೋಯಿತೆಂದು ನೊಂದ ಯುವತಿಯ ಕುಟುಂಬಸ್ಥರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಬೂದನೂರು ನಿವಾಸಿಗಳಾದ ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಹಾಗೂ ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮೂವರೂ ಕೆರೆಗೆ ಹಾರಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ತನ್ನ ಪ್ರೇಮಿಯೊಂದಿಗೆ ಊರು ತೊರೆದು ಹೋಗಿದ್ದರು. ಮಗಳು ಊರು ತೊರೆದಿದ್ದರಿಂದ ಊರಿನಲ್ಲಿ ಮರ್ಯಾದೆ ಇರುವುದಿಲ್ಲವೆಂದು ಮಹದೇವಸ್ವಾಮಿ ಕುಟುಂಬ ಆತಂಕಗೊಂಡು ನೊಂದಿದ್ದರು. ಇದೇ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಮೂವರೂ ಕೆರೆಗೆ ಹಾರಿ ಸಾವನ್ನಪ್ಪಿದ್ದಾರೆ. ಅವರ ಬೈಕ್ ಮತ್ತು ಚಪ್ಪಲಿಗಳು ಕೆರೆಯ ಏರಿ ಮೇಲೆ ಪತ್ತೆಯಾಗಿದ್ದು, ಅನುಮಾನಗೊಂಡ ಗ್ರಾಮಸ್ಥರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಶೋಧ ನಡೆಸಿದ್ದು, ಮೂವರ ಮೃತದೇಹಗಳು ಪತ್ತೆಯಾಗಿವೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಎಚ್‌.ಡಿ ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...