ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಮೈಸೂರು ಜಿಲ್ಲೆಯ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ಗ್ರಾಮದ ರಾಮಕೃಷ್ಣ ಶರ್ಮಾ ಮತ್ತು ಶ್ರೀರಂಗಪಟ್ಟನ ತಾಲೂಕಿನ ಕೆಆರ್‌ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತಪಟ್ಟು ದುರ್ದೈವಿಗಳು.
ಈ ಇಬ್ಬರು ಕುಂಭಮೇಳಕ್ಕೆ ತೆಳಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪೂಜೆ ಮುಗಿಸಿಕೊಂಡು ಕಾರಿನಲ್ಲಿ ಮೈಸೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ, ಅವರ ಕಾರು ಉತ್ತರಪ್ರದೇಶದ ಮಿರ್ಜಾಪುರ ಅಪಘಾತಕ್ಕೀಡಾಕಿದೆ.
ತೀವ್ರ ರಕ್ತಸ್ರಾವವಾಗುತ್ತಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.