ಮೈಸೂರು | ಮಹಿಳೆಯರ ಘನತೆ, ಮಾನವೀಯ ಮೌಲ್ಯ ಉಳಿಸಲು ‘ಯುವ ಜನರ ಸಂಕಲ್ಪ’ ಸಮಾವೇಶ

Date:

ಮಹಿಳೆಯರ ಘನತೆ ಮತ್ತು ಮಾನವೀಯ ಮೌಲ್ಯ ಉಳಿಸಲು ವಲಯ ಮಟ್ಟದ ‘ಯುವಜನರ ಸಂಕಲ್ಪ’ ಸಮಾವೇಶವನ್ನು ಮೈಸೂರು ನಗರದ ಗೋವರ್ಧನ ಸಭಾಂಗಣದಲ್ಲಿ ಎಐಡಿವೈಓ ಸಂಘಟನೆಯಿಂದ ಆಯೋಜಿಸಲಾಗಿತ್ತು.

- Advertisement -

ಕಾರ್ಯಕ್ರಮ ಉದ್ಘಾಟಿಸಿದ ಮೆಡಿಕಲ್ ಸರ್ವೀಸ್ ಸೆಂಟರ್‌ನ ರಾಜ್ಯಾಧ್ಯಕ್ಷೆ ಡಾ ಸುಧಾ ಕಾಮತ್ ಮಾತನಾಡಿ, ಇಂದಿನ ಸಮಾಜದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ, ದೌರ್ಜನ್ಯ ಮತ್ತು ಸಾಂಸ್ಕೃತಿಕ ಅಧಃಪತನವನ್ನು ನೋಡಿದರೆ ನಾವು ನಾಗರಿಕ ಸಮಾಜದದಲ್ಲಿ ಬದುಕುತ್ತಿದ್ದೇವೆ ಎಂಬ ಪ್ರಶ್ನೆಯನ್ನು ಉಂಟು ಮಾಡುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ, ಬದಲಾಗಿ ಹೆಣ್ಣು ಮಕ್ಕಳನ್ನು ನಿಯಂತ್ರಣದಲ್ಲಿ ಇಡುತ್ತಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದೇ ಪೌರುಷ ಎಂಬುದಾಗಿ ಭಾವಿಸಿರುತ್ತಾರೆ. ಆದರೆ, ನಿಜವಾದ ಪೌರುಷ ಇರುವುದು ಅನ್ಯಾಯದ ವಿರುದ್ಧ ಧ್ವನಿ ಎತ್ತುವುದರಲ್ಲಿ. ನಮ್ಮ ನವೋದಯದ ಚಿಂತಕರು ಮತ್ತು ಸ್ವಾತಂತ್ರ ಹೋರಾಟಗಾರರು ಮಾಡಿದ್ದು ಇದನ್ನೇ. ಈಗಿನ ಸಮಾಜದಲ್ಲಿ ಅಶ್ಲೀಲ ಸಿನಿಮಾ, ಸಾಹಿತ್ಯಗಳು ತಾಂಡವಾಡುತ್ತಿದೆ ಇದಕ್ಕೆ ಕಡಿವಾಣ ಹಾಕಬೇಕು.
ಯುವಜನರು ದಾರಿ ತಪ್ಪುವುದನ್ನು ತಡೆಗಟ್ಟಿ ,ಸಮಾಜದ ಪ್ರಗತಿಯ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಮನೋವೈದ್ಯ ಡಾ ಕಿಶೋರ್ ‘ಲೈಂಗಿಕ ಅಪರಾಧಗಳು – ಕಾರಣ‌ ಮತ್ತು ಪರಿಹಾರ ‘ ಎಂಬ ವಿಷಯದ ಕುರಿತು ಸಂವಾದ ನಡೆಸಿ ಮಧ್ಯ , ಮಾದಕ ವ್ಯಸನಗಳು ಮಾನವನ ಚಿಂತನಾ ಶಕ್ತಿಯನ್ನು ಕುಂಠಿತಗೊಳಿಸುತ್ತವೆ. ಅವುಗಳ ಪ್ರಭಾವದಲ್ಲಿರುವ ಮನುಷ್ಯನಲ್ಲಿ ಪಶು ಪ್ರವೃತ್ತಿಗಳು ಮುನ್ನೆಲೆಗೆ ಬರುತ್ತವೆ. ಇದಲ್ಲದೆ ಸೇಡಿನ ಮನೋಭಾವ, ಪುರುಷ ಪ್ರಾಬಲ್ಯವನ್ನು ಪ್ರದರ್ಶಿಸುವ ಹಂಬಲ ಮೊದಲಾದ ಕಾರಣಗಳು ಲೈಂಗಿಕ ಅಪರಾಧಗಳಿಗೆ ಕಾರಣವಾಗುತ್ತಿವೆ‌ ಎಂದು ತಿಳಿ ಹೇಳಿದರು.

ಸಾಮಾಜಿಕ ಮಾಧ್ಯಮಗಳು ಸಮಸ್ಯೆಯನ್ನು ಉಲ್ಬಣಗೊಳಿಸಿ ದೌರ್ಜನ್ಯಕ್ಕೊಳಗಾದವರು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿದ್ದು, ಶೈಕ್ಷಣಿಕ, ಕೌಟುಂಬಿಕ, ಸಾಮಾಜಿಕ, ಆರ್ಥಿಕ ಬಿಕ್ಕಟ್ಟುಗಳಿಗೆ ಒಳಗಾಗುತ್ತಾರೆ. ಹಾಗಾಗಿ, ಲೈಂಗಿಕ ದೌರ್ಜನ್ಯಗಳ ಕುರಿತು ಮಾತನಾಡುವ, ಅವುಗಳನ್ನು ತಡೆಗಟ್ಟಲು ಬೇಕಾದ ಕಾನೂನು ಹಾಗೂ ಸಾಮಾಜಿಕ ಬದಲಾವಣೆಗೆ ಹೋರಾಡುವ ಪ್ರಯತ್ನ ಎಲ್ಲರಿಂದ ನಡೆಯುವುದು ಅಗತ್ಯ ಎಂದರು.

‘ಯುವಜನರ ಮನಸ್ಸಿನ ತಲ್ಲಣಗಳು’ ವಿಚಾರ ಗೋಷ್ಠಿಯ ಭಾಗವಾಗಿ ಎಐಡಿವೈಓ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಡಾ ಜಿ ಶಶಿಕುಮಾರ್ ಮಾತನಾಡಿ, “ಸ್ವಾತಂತ್ರ್ಯ ಸಂಗ್ರಾಮದಲ್ಲಿ ನೇತಾಜಿ, ಭಗತ್ ಸಿಂಗ್‌ರಂತಹ ಹಲವಾರು ಯುವಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಅವರಿಂದ ಸ್ಪೂರ್ತಿ ಪಡೆದು ಈಗಿನ ಯುವಕರು ಸಾಮಾಜಿಕ ಪರಿಸ್ಥಿತಿಗಳ ಬಗ್ಗೆ ಯೋಚಿಸಬೇಕು. ಸಮಾಜದ ಬಗ್ಗೆ ಚಿಂತನೆ ಮಾಡದಿದ್ದರೆ ನೈತಿಕವಾಗಿ, ಸಾಂಸ್ಕೃತಿಕವಾಗಿ ಬಲಗೊಳ್ಳಲು ಸಾಧ್ಯವಿಲ್ಲ. ಸಮಾಜದಲ್ಲಿ ವಿಕೃತತೆ ಹೆಚ್ಚಾಗಿ ಸೂಕ್ಷ್ಮ ಸಂವೇದನೆ ಎಂಬುದೇ ಕಡಿಮೆಯಾಗುತ್ತಿದೆ. ಹಾಗಾಗಿ ಧನಾತ್ಮಕ ವಿಚಾರಗಳು ಹೆಚ್ಚಾಗಿ ಪ್ರಚಾರವಾಗಬೇಕು”ಎಂದರು.

ಸಾಹಿತಿ ಶರತ್ ಚಂದ್ರ ಚಟರ್ಜಿ ಅವರ “ಮಾನವನ ಸಾವು ದುಃಖಕರ, ಆದರೆ ಮಾನವೀಯ ಮೌಲ್ಯಗಳ ಸಾವು ಅತ್ಯಂತ ದುಃಖಕರ” ಹಾಗಾಗಿ ಹೊಸ ಆದರ್ಶ ಮತ್ತು ಉದಾತ್ತ ಮೌಲ್ಯಕ್ಕಾಗಿ ತುಡಿತ ಇರುವ ಯುವಜನರು ಸಾಮಾಜಿಕ ಕೆಲಸಗಳಲ್ಲಿ ಭಾಗಿಯಾಗುವ ಮೂಲಕ ಹೊಸ ಸಾಂಸ್ಕೃತಿಕ ಆಂದೋಲನಕ್ಕೆ ಕೈ ಜೋಡಿಸಬೇಕೆಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಫೆ.14ರಂದು ಉಚಿತ ಸಾಮೂಹಿಕ ಅಕ್ಷರಭ್ಯಾಸ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಎಐಡಿವೈಓ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ, ಜಿಲ್ಲಾಧ್ಯಕ್ಷ ಸುನಿಲ್ ಟಿ ಆರ್, ಜಿಲ್ಲಾ ಕಾರ್ಯದರ್ಶಿ ಸುಮಾ, ಜಿಲ್ಲಾ ಜಂಟಿ ಕಾರ್ಯದರ್ಶಿ ನೀತು, ಪದಾಧಿಕಾರಿ ಸಿಂಚನ ಹಾಗೂ ಮೈಸೂರು, ಚಾಮರಾಜನಗರ ಸೇರಿದಂತೆ ಸುತ್ತಮುತ್ತಲಿನ ತಾಲೂಕುಗಳಿಂದಲೂ ನೂರಾರು ಯುವಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...