600 ಕೆಜಿಯಷ್ಟು ಚಿನ್ನದ ಅವ್ಯವಹಾರ : ಚಿನ್ನತಂಬಿಯ ಆಸ್ತಿ ಮುಟ್ಟುಗೋಲು, ತನಿಖೆಗೆ ಎಸ್‌ಐಟಿ ರಚನೆಗೆ ಶ್ರೀವತ್ಸ ಆಗ್ರಹ

Date:

ಗ್ರಾಹಕರಿಂದ ಪಡೆದ ಚಿನ್ನಾಭರಣಗಳನ್ನು ಕರಗಿಸಿ ದುರುಪಯೋಗಪಡಿಸಿಕೊಂಡು ಮೋಸ ಎಸಗಿದ ಆರೋಪ ಎದುರಿಸುತ್ತಿರುವ ‘ಡಿಜಿಎಫ್‌ ಗೋಲ್ಡ್‌ ಆ್ಯಂಡ್ ಡೈಮಂಡ್‌’ ಮಾಲೀಕ ಸೌಂದರ್‌ರಾಜ್ ಅಲಿಯಾಸ್ ಚಿನ್ನತಂಬಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಮೈಸೂರು ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ ಒತ್ತಾಯಿಸಿದರು.

- Advertisement -

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಶಾಸಕ ಟಿ ಎಸ್‌ ಶ್ರೀವತ್ಸ ಅವರು, “ಮೋಸಕ್ಕೆ ಒಳಗಾದವರು ನೀಡಿದ ದೂರಿನ ಅನ್ವಯ ಚಿನ್ನತಂಬಿ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಜಾಮೀನು ಸಿಕ್ಕಿ ಬಿಡುಗಡೆ ಆಗಿದ್ದಾರೆ. ಇದು ದೂರುದಾರರ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

“ಮೋಸ ಹೋದ 75 ಮಂದಿ ನನ್ನ ಬಳಿ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಅವರಿಗೆ ನ್ಯಾಯ ಕೊಡಿಸಲೆಂದು ಕಾನೂನು ಪ್ರಕಾರ ಹೋರಾಟ ನಡೆಸಿದ್ದೆ. ಈಗ ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಈಗಾಗಲೇ ಚಿನ್ನತಂಬಿಯ ಆಸ್ತಿಯನ್ನು ಗುರುತಿಸಿ, ಮೈಸೂರು ಉಪವಿಭಾಗಾಧಿಕಾರಿಯನ್ನು ಸಕ್ಷಮ ಪ್ರಾಧಿಕಾರವೆಂದು ನೇಮಿಸಲಾಗಿದೆ” ಎಂದು ಹೇಳಿದರು.

“ಚಿನ್ನತಂಬಿ ನಂಬಿ ಚಿನ್ನ ಕಳೆದುಕೊಂಡು ನಷ್ಟ ಅನುಭವಿಸಿದವರು ಹತಾಶರಾಗಿದ್ದಾರೆ. ಪೊಲೀಸರು, ರಾಜಕಾರಣಿಗಳು ನಮಗೆ ಸಹಾಯ ಮಾಡುತ್ತಿಲ್ಲವೆಂಬ ಆತಂಕ, ಅನುಮಾನ ಸಂತ್ರಸ್ತರಲ್ಲಿದೆ. ಈ ಕಾರಣದಿಂದಲೇ ನಗರದಲ್ಲಿ ಚಿನ್ನತಂಬಿ ಒಡೆತನದ ಹೋಟೆಲ್ ಮೇಲೆ ಈಚೆಗೆ ದಾಳಿ ನಡೆಸಿದ್ದಾರೆ. ಹೀಗೆ, ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಇದರಿಂದ ನಷ್ಟವನ್ನು ಭರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮತ್ತೆ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ. ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಹೀಗಾಗಿ, ನ್ಯಾಯಾಲಯದಿಂದ ನ್ಯಾಯ ಸಿಗುವವರೆಗೂ ದೂರುದಾರರು ಕಾಯಬೇಕಾಗುತ್ತದೆ” ಎಂದು ಕೋರಿದರು.

“ಈ ವಂಚನೆ ಪ್ರಕರಣದ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನಸೆಳೆಯುತ್ತೇನೆ. 400ಕ್ಕೂ ಅಧಿಕ ಮಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರಿಗೆ, ನ್ಯಾಯ ದೊರೆಯುತ್ತದೆಂಬ ನಂಬಿಕೆ ಬರುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಏನೆಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಒತ್ತಾಯಿಸಿದ ಅವರು, ದೂರುದಾರರು ಆತಂಕಕ್ಕೆ ಒಳಗಾಗದೇ ಕಾಯಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿದ್ದೀರಾ? ವಿಜಯಪುರ | ಬರದ ಛಾಯೆ: ರೈತರ ಸಂಕಷ್ಟಕ್ಕೆ ಸ್ಪಂದಿಸುವುದಾಗಿ ಸಚಿವ ಎಂ ಬಿ ಪಾಟೀಲ್ ಭರವಸೆ

“600 ಕೆಜಿಯಷ್ಟು ಚಿನ್ನದ ವ್ಯವಹಾರ ನಡೆದಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ದೂರು ಸಲ್ಲಿಸಲಾಗಿದೆ. ಆ ಚಿನ್ನ ಎಲ್ಲಿ ಹೋಯಿತು, ಮಧ್ಯವರ್ತಿಗಳು ಯಾರು? ಎಲ್ಲೆಲ್ಲಿ ವಹಿವಾಟು ನಡೆದಿದೆ ಎಂಬುದನ್ನು ಪತ್ತೆ ಹಚ್ಚುವಂತೆ ದೂರಿನಲ್ಲಿ ಕೇಳಲಾಗಿದೆ. ಕುವೆಂಪುನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಷ್ಟೆಲ್ಲ ಮೋಸ ನಡೆದಿದ್ದರೂ, ಈವರೆಗೂ ಒಬ್ಬ ಪೊಲೀಸರ ವಿರುದ್ಧವೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಹಿಂದೆ ದೊಡ್ಡ ಷಡ್ಯಂತ್ರವೇ ನಡೆದಿದೆ. ಹೀಗಾಗಿ, ತನಿಖೆಗೆ ಎಸ್‌ಐಟಿ ರಚನೆ ಮಾಡಬೇಕು. ಈ ಬಗ್ಗೆ, ಅಧಿವೇಶನದಲ್ಲೇ ಸರ್ಕಾರದ ಗಮನಸೆಳೆಯಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸೆ. 27ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ

ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ...

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...