ನಾಯಕತ್ವ ಬದಲಾವಣೆ | ರಾಹುಲ್ ಗಾಂಧಿ ತೀರ್ಮಾನಕ್ಕೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ

Date:

ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಮೈಸೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ, ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ ಎಂದು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಾಯಕತ್ವ ಬದಲಾವಣೆ ಮಾಧ್ಯಮಗಳ ಸೃಷ್ಟಿ, ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ?. ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲು ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.

ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದರೆ ತಪ್ಪೇನು?

ಮಾಜಿ ಸಚಿವ ಕೆ.ಎನ್.ರಾಜಣ್ಣ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಭೇಟಿ ಮಾಡಲಿ, ಡಿ.ಕೆ.ಶಿವಕುಮಾರ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಇದನ್ನು ಓದಿ? ಈ ದಿನ ಸಂಪಾದಕೀಯ | ವಾಯು ಮಾಲಿನ್ಯದ ಚರ್ಚೆಯೇ ಇಲ್ಲದೆ ಮುಗಿಯಿತು ಸಂಸತ್ ಅಧಿವೇಶನ!

ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಹೇಳುವುದು ಸರಿಯಲ್ಲ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸರಕಾರ ಮಾಡಿತ್ತು ಎಂದು ಸಿದ್ದರಾಮಯ್ಯ ಹೇಳಿದರು.

ಬಜೆಟ್ ಸಿದ್ಧತೆ ನಡೆದಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ತಯಾರಿ ನಡೆಸುವಾಗ ತಿಳಿಸುವುದಾಗಿ ಮುಖ್ಯಮಂತ್ರಿ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...