ನಗರ ಪಾಲಿಕೆಯ ‘ಮಿರರ್’ ತಂತ್ರ: ಮೈಸೂರು ಜನತೆಯಿಂದ ಮೆಚ್ಚುಗೆ

Date:

ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರವಿಸರ್ಜನೆ ಮಾಡುವುದನ್ನು ತಡೆಯಲು ಮೈಸೂರು ಮಹಾನಗರ ಪಾಲಿಕೆ ವಿನೂತನ ಯೋಜನೆಯೊಂದನ್ನು ಕಾರ್ಯರೂಪಕ್ಕೆ ತಂದಿದ್ದು, ಗ್ರಾಮಾಂತರ ಬಸ್‌ ನಿಲ್ದಾಣದ ತಡೆಗೋಡೆಗಳಿಗೆ ಸ್ಟೀಲ್‌ ಮಿರರ್‌ ಅಳವಡಿಸಿವ ಮೂಲಕ ವಿನೂತನ ಪ್ರಯೋಗಕ್ಕೆ ಪಾಲಿಕೆ ನಾಂದಿ ಹಾಡಿದೆ.

- Advertisement -

“ಪ್ರಾಯೋಗಿಕ ಯೋಜನೆಯ ಮೊದಲ ಹಂತವಾಗಿ ಬಸ್‌ ನಿಲ್ದಾಣ ಹಾಗೂ ಸರ್ಕಾರಿ ಅಥಿತಿ ಗೃಹಕ್ಕೆ ಹೊಂದಿಕೊಂಡ ಮೋರಿಯ ಗೋಡೆಗೆ ಈಗಾಗಲೇ ಕನ್ನಡಿಯನ್ನು ಅಳವಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಹಾಗೂ ಮೂತ್ರ ವಿಸರ್ಜನೆ ಮಾಡುವುದನ್ನು ಈ ಮೂಲಕ ಮಾನಿಟರಿಂಗ್‌ ಮಾಡಲಾಗುತ್ತದೆ” ಎಂದು ಮೈಸೂರು ಮಹಾನಗರ ಪಾಲಿಕೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಈ ಯೋಜನೆಯ ಹಿಂದೆ ಮನೋವೈಜ್ಞಾನಿಕ ತಂತ್ರವಿದ್ದು, ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆ ಮಾಡುವವರು ಕನ್ನಡಿಗಳಲ್ಲಿ ತಮ್ಮ ಬೇಜವಬ್ದಾರಿ ಕೃತ್ಯದ ಪ್ರತಿಬಿಂಬವನ್ನು ನೋಡಿ ಲಜ್ಜೆಗೆ ಒಳಗಾಗುತ್ತಾರೆ. ಜತೆಗೆ ದಾರಿಹೋಕರ ಕಣ್ಣಿಗೂ ಗುರಿಯಾಗುವುದರಿಂದ ಕೃತ್ಯಕ್ಕೆ ಕಡಿವಾಣ ಬೀಳಬಹುದು” ಎಂಬುದು ಪಾಲಿಕೆಯ ಯೋಚನೆ.

ಇದನ್ನೂ ಓದಿ> ಮೈಸೂರು | ಬಿಸಿಗಾಳಿ ಭೀತಿ; ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲು

ರಾತ್ರಿ ವೇಳೆ ಕನ್ನಡಿಯ ಕೆಳಗೆ ಎಲ್‌ಇಡಿ ಬಲ್ಬ್‌ ಅಳವಡಿಸಿವುದರಿಂದ ಕತ್ತಲಿನಲ್ಲಿ ಸಿಕ್ಕ ಸಿಕ್ಕ ಗೋಡೆಗಳ ಮೇಲೆ ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಬಹುದು. ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ ನಗರದ ಉಳಿದ ಭಾಗಗಳಿಗೂ ವಿಸ್ತರಿಸುವ ಜತೆಗೆ ಉಳಿದ ನಗರಗಳಿಗೂ ಈ ಯೋಜನೆ ಮಾದರಿಯಾಗಲಿದೆ.

“ಸುಮಾರು 85 ಮೀಟರ್ ಉದ್ದದ ಗೋಡೆಗೆ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಈ ಯೋಜನೆಗೆ ಸುಮಾರು 9 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಈ ಪ್ರಯೋಗಾತ್ಮಕ ಕ್ರಮದಿಂದ 24 ಗಂಟೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಸಕಾರಾತ್ಮಕ ಫಲಿತಾಂಶ ದೊರಕಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಿನ್ನ ಸಲಹೆ ನೀಡಿದವರಿಗೆ ಮೈಸೂರು ಜನತೆಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಯ ವಿಡಿಯೊ ವೈರಲ್‌ ಆಗಿದೆ.

“ಈ ಸ್ಥಳವನ್ನು ಸ್ವಚ್ಛವಾಗಿಡಲು ಹಿಂದಿನ ಪ್ರಯತ್ನಗಳು ವಿಫಲವಾದ ನಂತರ ಪ್ರಾಯೋಗಿಕ ಆಧಾರದ ಮೇಲೆ ಈ ಕಲ್ಪನೆಯನ್ನು ಪರಿಚಯಿಸಲಾಗಿದೆ. ಪ್ರತಿಫಲಿತ ಮೇಲ್ಮೈ ‘ಮಾನಸಿಕ ನಿರೋಧಕ’ವನ್ನು ಸೃಷ್ಟಿಸಿದೆ. ಇದು ಕನ್ನಡಿಯಂತೆ ಕಾಣುವುದರಿಂದ ಇದರ ಮುಂದೆ ಮೂತ್ರ ವಿಸರ್ಜಿಸಲು ಜನರಿಗೆ ಅನಾನುಕೂಲವನ್ನುಂಟುಮಾಡುತ್ತದೆ. ಈ ಬಗ್ಗೆ ಇಲ್ಲಿಯವರೆಗೆ ಪ್ರತಿಕ್ರಿಯೆ ಸಕಾರಾತ್ಮಕವಾಗಿದೆ. ಅಲ್ಲದೆ ಒಂದು ಕಾಲದಲ್ಲಿ ಕೊಳಕಿಗೆ ಕುಖ್ಯಾತವಾಗಿದ್ದ ಈ ಸ್ಥಳವು ಈಗ ಹೆಚ್ಚು ಉತ್ತಮ ನೋಟವನ್ನು ನೀಡುತ್ತಿದೆ” ಎಂದು ಎಂಸಿಸಿಯ ಯುಜಿಡಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮೊಹಮ್ಮದ್ ಮುಸ್ತಫಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...