ಮೈಸೂರನ್ನು ವಿಶ್ವದ ಪ್ರಮುಖ ಯೋಗ ಕೇಂದ್ರವನ್ನಾಗಿಸಲು ಒತ್ತು: ಯದುವೀರ್

Date:

ಯೋಗದ ಮೂಲಕ ಮೈಸೂರು ವಿಶ್ವದ ಗಮನ ಸೆಳೆಯುತ್ತಿರುವ ಬೆನ್ನಲ್ಲೇ ನಗರದ ಐತಿಹಾಸಿಕ ಯೋಗ ಪರಂಪರೆಯನ್ನು ಮತ್ತಷ್ಟು ಬಲಪಡಿಸಿ, ಮೈಸೂರನ್ನು ವಿಶ್ವದ ಪ್ರಮುಖ ಯೋಗ ಕೇಂದ್ರವನ್ನಾಗಿ ರೂಪಿಸುವ ಅಗತ್ಯವಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

- Advertisement -

12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗ ಫೆಡರೇಷನ್ ಆಫ್ ಮೈಸೂರು (ವೈಎಫ್ಎಂ) ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕೃತಜ್ಞತಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಂತಾರಾಷ್ಟ್ರೀಯ ಯೋಗ ದಿನದಂದು ಬೃಹತ್ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ದಾಖಲೆ ನಿರ್ಮಿಸುವುದು ಹೆಮ್ಮೆಯ ಸಂಗತಿಯಾಗಿದೆ. ಆದರೆ, ಯೋಗವನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ, ಜನರ ದೈನಂದಿನ ಜೀವನದ ಭಾಗವಾಗಿಸುವುದು ಹೆಚ್ಚು ಮುಖ್ಯ ಎಂದು ಅಭಿಪ್ರಾಯಪಟ್ಟರು.

ಯೋಗದೊಂದಿಗೆ ಭಾರತೀಯ ತತ್ತ್ವಶಾಸ್ತ್ರ, ಆಹಾರ ಪದ್ಧತಿ ಹಾಗೂ ಜೀವನಶೈಲಿ ಅವಿನಾಭಾವವಾಗಿ ಬೆಸೆದುಕೊಂಡಿವೆ. ಆದ್ದರಿಂದ ಯೋಗದ ಇತಿಹಾಸ ಹಾಗೂ ಅದರ ಹಿಂದಿರುವ ಭಾರತೀಯ ಜ್ಞಾನ ಪರಂಪರೆಯನ್ನು ದಾಖಲಿಸಿ ಸಂರಕ್ಷಿಸುವ ಜತೆಗೆ, ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವೂ ನಡೆಯಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗಕ್ಕೆ ಜಾಗತಿಕ ವೇದಿಕೆ ಕಲ್ಪಿಸಿದ್ದಾರೆ. ಯೋಗವನ್ನು ಭಾರತದ ಸಾಫ್ಟ್ ಪವರ್ ಆಗಿ ಬಳಸಿಕೊಂಡು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಮೈಸೂರಿನ ಕೆಲವು ಪ್ರದೇಶಗಳನ್ನು ಯೋಗದ ಮಾದರಿ ಪ್ರದೇಶಗಳಾಗಿ ಅಭಿವೃದ್ಧಿಪಡಿಸಿ, ಯೋಗಾಭ್ಯಾಸಕ್ಕೆ ಪೂರಕವಾದ ವಾತಾವರಣ ನಿರ್ಮಿಸುವ ಕುರಿತು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

ಜಿಎಸ್ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್ ಮಾತನಾಡಿ, ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ವರ್ಷದಿಂದ ವರ್ಷಕ್ಕೆ ಬೃಹತ್ ಪ್ರಮಾಣದಲ್ಲಿ ಬೆಳೆಯುತ್ತಿದೆ. ಯೋಗದ ಮೂಲಕ ಮೈಸೂರಿನ ಹೆಗ್ಗಳಿಕೆ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ. ಸಣ್ಣ ಪ್ರಮಾಣದಲ್ಲಿ ಆರಂಭಗೊಂಡಿದ್ದ ಪ್ರಯತ್ನಕ್ಕೆ ಇಂದು ನಿರೀಕ್ಷೆಗೂ ಮೀರಿದ ಸ್ಪಂದನೆ ದೊರೆತಿದೆ. ವಿವಿಧ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಂಘಟನೆಗಳು ಕೈಜೋಡಿಸಿದ ಪರಿಣಾಮ 2017ರಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸುವ ಪ್ರಯತ್ನ ನಡೆಯಿತು. ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಹಾಗೂ ವಿವಿಧ ಸಂಘಟನೆಗಳು ‘ಮೈಸೂರಿನ ಹೆಮ್ಮೆ, ನಾವು ಒಂದಾಗಿ ಪಾಲ್ಗೊಳ್ಳುತ್ತೇವೆ’ ಎಂಬ ಮನೋಭಾವದಿಂದ ಯೋಗ ದಿನಾಚರಣೆಗೆ ಬೆಂಬಲ ನೀಡುತ್ತಿರುವುದು ನಗರದ ವಿಶೇಷತೆ ಎಂದು ಹೇಳಿದರು.

ಮುಂದಿನ ವರ್ಷಗಳಲ್ಲಿ ಒಂದೇ ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಆದರೆ ಈ ಬಾರಿ ಒಂದೇ ಸ್ಥಳದಲ್ಲಿ ಕಾರ್ಯಕ್ರಮ ನಡೆಸುವ ಬದಲು ಮೈಸೂರಿನ ವಿವಿಧೆಡೆ ಜನರು ಇರುವ ಸ್ಥಳದಲ್ಲಿಯೇ ಯೋಗಾಭ್ಯಾಸ ನಡೆಸುವಂತೆ ಯೋಜನೆ ರೂಪಿಸಲಾಗಿತ್ತು. ಇದಕ್ಕೆ ನಗರದ ವಿವಿಧ ಸಂಘಟನೆಗಳು ವ್ಯಾಪಕವಾಗಿ ಕೈಜೋಡಿಸಿವೆ. ಈ ಬಾರಿಯ ಅಭಿಯಾನದಲ್ಲಿ ಸುಮಾರು 1,250 ಸಂಘಟನೆಗಳು ಭಾಗವಹಿಸಿದ್ದು, ಆರಂಭದಲ್ಲಿ 1.20 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಲಭ್ಯ ಮಾಹಿತಿಯಂತೆ 1.29 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸದಲ್ಲಿ ಪಾಲ್ಗೊಂಡಿರುವುದು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜಿ. ಬೆಟಸೂರ ಮಠ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಮೈಸೂರು ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾ ದೇವಿ, ಗ್ಲೋಬಲ್ ಯೋಗ ರೆಕಾರ್ಡ್ಸ್ ಕೌನ್ಸಿಲ್ ಅಧ್ಯಕ್ಷ ಡಾ. ಯೋಗಿ ದೇವರಾಜ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...