ಮೈಸೂರು | ಡಿ.20ರಂದು ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ನಗರದ ಸ್ವಚ್ಛತೆಗೆ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಡಿ.20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಮಾಜ ಸೇವಕ ಮತ್ತು ಗೋಪಾಲಗೌಡ ಮೆಮೋರಿಯಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶುಶ್ರುತ್ ಗೌಡ ತಿಳಿಸಿದ್ದಾರೆ.

- Advertisement -

ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ ಮೈಸೂರನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರು ಕೆಲಸದ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಹಾಗಾಗಿ ನಗರದ ಸ್ವಚ್ಛತೆಗಾಗಿ ಕೆಲಸ ಮಾಡುವ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ವಿ.ಆರ್. ಟ್ರಸ್ಟ್ ವತಿಯಿಂದ ಪ್ರೊಜೆಕ್ಟ್ ಅಡಿ ನಗರದ ಟೌನ್ ಹಾಲ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪೌರಕಾರ್ಮಿಕರ ದಿನವಾದ ಡಿ. 20ರಂದು ಹಮ್ಮಿಕೊಳ್ಳಲಾಗಿದೆ. ಈವರೆಗೆ ನಮ್ಮ ಸಂಸ್ಥೆಯ ವತಿಯಿಂದ 50ಕ್ಕೂ ಹೆಚ್ಚು ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿದ್ದು, 10,000ಕ್ಕೂ ಹೆಚ್ಚು ಜನರರನ್ನು ತಪಾಸಣೆ ಮಾಡಲಾಗಿದೆ ಎಂದರು.

ಪೌರಕಾರ್ಮಿಕರಿಗಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುವುದಾಗಿ ಭರವಸೆ ನೀಡಿದ್ದೇವು. ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 2500ಕ್ಕೂ ಹೆಚ್ಚು ಪೌರಕಾರ್ಮಿಕರು ನಮ್ಮ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದಕೊಳ್ಳಬೇಕೆಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...