ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು

Date:

ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಮಹತ್ವ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಅರಿವು ಕಾರ್ಯಕ್ರಮವನ್ನು ಹೆಚ್.ಡಿ.ಕೋಟೆಯಲ್ಲಿ ಆಯೋಜಿಸಲಾಗಿತ್ತು.

- Advertisement -

ಪಟ್ಟಣದ ಚಿತ್ತಧಾಮ ಶಾಂತಿಪುರದ ಸಭಾಂಗಣದಲ್ಲಿ ಚಿತ್ತ ಪ್ರಕಾಶ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು, ವತಿಯಿಂದ ಆರೋಗ್ಯ ಇಲಾಖೆ ಹಾಗೂ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ರವಿಕುಮಾರ್, ಮಾನಸಿಕ ಆರೋಗ್ಯವು ವ್ಯಕ್ತಿಯ ಭಾವನಾತ್ಮಕ, ಮಾನಸಿಕ ಹಾಗೂ ಸಾಮಾಜಿಕ ಯೋಗಕ್ಷೇಮಕ್ಕೆ ಸಂಬಂಧಿಸಿದ್ದು, ವ್ಯಕ್ತಿಯ ಆಲೋಚನೆ, ಭಾವನೆ ಮತ್ತು ನಡವಳಿಕೆಯ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು, ದೈನಂದಿನ ಒತ್ತಡ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು, ಕೆಲಸ ಮತ್ತು ವಿದ್ಯಾಭ್ಯಾಸದಲ್ಲಿ ಏಕಾಗ್ರತೆ ಸಾಧಿಸಲು ಹಾಗೂ ಕುಟುಂಬ ಮತ್ತು ಸ್ನೇಹಿತರೊಂದಿಗೆ ಉತ್ತಮ ಸಂಬಂಧಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡುವುದು, ಪೌಷ್ಟಿಕ ಆಹಾರ ಸೇವಿಸುವುದು, ಸಾಕಷ್ಟು ನಿದ್ರೆ ಮಾಡುವುದು, ಆಸಕ್ತಿಯ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಅಗತ್ಯವಿದ್ದಾಗ ವೈದ್ಯರು ಅಥವಾ ಮಾನಸಿಕ ಆರೋಗ್ಯ ತಜ್ಞರ ಸಲಹೆ ಪಡೆಯುವುದು ಮುಖ್ಯ ಎಂದು ಸಲಹೆ ನೀಡಿದರು.

ಮಾನಸಿಕ ತಜ್ಞ ಡಾ. ಶಶಿಧರ್ ಬೀಳಗಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯು ವಿದ್ಯಾರ್ಥಿಗಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು. ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ದೌರ್ಬಲ್ಯ, ಜ್ಞಾಪಕಶಕ್ತಿ ಕುಂದುವಿಕೆ, ಆತಂಕ, ಮಾನಸಿಕ ಅಸ್ಥಿರತೆ, ನಿದ್ರಾಹೀನತೆ ಹಾಗೂ ತಲೆನೋವು ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗಬಹುದು. ಮೆದುಳಿನ ಕಾರ್ಯಕ್ಷಮತೆ ಮತ್ತು ಯೋಚನಾ ಸಾಮರ್ಥ್ಯಕ್ಕೂ ಧಕ್ಕೆಯಾಗುವ ಸಾಧ್ಯತೆ ಇದೆ. ಮಾದಕ ವ್ಯಸನದಿಂದ ವಿದ್ಯಾರ್ಥಿಗಳಲ್ಲಿ ಪಾಠದ ಮೇಲಿನ ಏಕಾಗ್ರತೆ ಮತ್ತು ಆಸಕ್ತಿ ಕಡಿಮೆಯಾಗುವುದು, ಶಾಲೆ ಅಥವಾ ಕಾಲೇಜಿಗೆ ಗೈರುಹಾಜರಿ ಹೆಚ್ಚಾಗುವುದು, ಶೈಕ್ಷಣಿಕವಾಗಿ ಹಿನ್ನಡೆ ಉಂಟಾಗುವುದು ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಬಹುದು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಸ್ನೇಹಿತರ ಸಹವಾಸವನ್ನು ಬೆಳೆಸಿಕೊಳ್ಳಬೇಕು. ಯಾವುದೇ ಸಮಸ್ಯೆ ಎದುರಾದರೂ ಅದನ್ನು ಮುಚ್ಚಿಡದೆ ಪೋಷಕರು, ಶಿಕ್ಷಕರು ಅಥವಾ ತಜ್ಞರೊಂದಿಗೆ ಹಂಚಿಕೊಂಡು ಸೂಕ್ತ ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

ಸಬ್‌ಇನ್ಸ್‌ಪೆಕ್ಟರ್ ಚಿಕ್ಕನಾಯ್ಕ ಮಾತನಾಡಿ, ಗಾಂಜಾ ಸೇರಿದಂತೆ ನಿಷೇಧಿತ ಮಾದಕ ವಸ್ತುಗಳ ಬೆಳೆ, ಮಾರಾಟ ಹಾಗೂ ಸೇವನೆ ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿದರೆ ಕಾನೂನು ಕ್ರಮ ಹಾಗೂ ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಮಾದಕ ವಸ್ತುಗಳ ಸೇವನೆಯು ದೇಹ ಮತ್ತು ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುವುದರಿಂದ ವಿದ್ಯಾರ್ಥಿಗಳು ಇಂತಹ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ಬಳಕೆ ಅಥವಾ ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ದೊರೆತರೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಶಾಲಾ ದಾಖಲೆ ಪರಿಶೀಲಿಸಿ; ತಿದ್ದುಪಡಿಗೆ ಶಾಲೆ-BEO ಹಂತದವರೆಗೆ ಇರುವ ಮಾರ್ಗವೇನು?

ಕಾರ್ಯಕ್ರಮದಲ್ಲಿ ಚಿತ್ತಧಾಮದ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಟ್ಯಾಲೆಂಟ್ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...