ಸರ್ಕಾರದ ವಿವಿಧ ಇಲಾಖೆಗಳ ಸೇವೆ ಮತ್ತು ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನ ಆಯೋಜಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹೆಗ್ಗಡದೇವನಕೋಟೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಂದೇ ವೇದಿಕೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರನ್ನು ಸಂಪರ್ಕಿಸಿ, ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡುವುದರ ಜತೆಗೆ ಅರ್ಹ ಫಲಾನುಭವಿಗಳಿಗೆ ಅಗತ್ಯ ದಾಖಲೆಗಳು ಹಾಗೂ ಸೌಲಭ್ಯಗಳನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸಾರ್ವಜನಿಕರು ಇಂತಹ ಆಂದೋಲನಗಳ ಸದುಪಯೋಗ ಪಡೆದುಕೊಳ್ಳಬೇಕು. ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿರುವ ಹೆಗ್ಗಡದೇವನಕೋಟೆ ತಾಲ್ಲೂಕಿನ ಜನರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ಶಾಸಕ ಅನಿಲ್ ಚಿಕ್ಕಮಾದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಇ-ಖಾತಾ, ಲೇಬರ್ ಕಾರ್ಡ್ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯ ಪಾಸ್‌ಪುಸ್ತಕಗಳನ್ನು ವಿತರಿಸಲಾಯಿತು. ಕೃಷಿ ವಸ್ತುಪ್ರದರ್ಶನ, ದಿವ್ಯಾಂಗರಿಗೆ ಸಾಧನ–ಸಲಕರಣೆ ವಿತರಣೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರಿವು ಕಾರ್ಯಕ್ರಮ ಸೇರಿದಂತೆ ವಿವಿಧ ಇಲಾಖೆಗಳ ಮಳಿಗೆಗಳನ್ನು ಉದ್ಘಾಟಿಸಲಾಯಿತು.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು
ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಕಾರ್ಮಿಕ, ರೇಷ್ಮೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕಾಲೇಜು ಶಿಕ್ಷಣ ಸೇರಿದಂತೆ ಹಲವು ಇಲಾಖೆಗಳು ಮಳಿಗೆಗಳನ್ನು ತೆರೆದಿದ್ದವು.
ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?
ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಆದ್ಯತೆ ನೀಡಿ ಸೂಕ್ತ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?
ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.



