ಮೈಸೂರು | ಸರ್ಕಾರಿ ಆಸ್ಪತ್ರೆ ವೈದ್ಯ ವಿರುದ್ಧ ನ್ಯಾಯಾಧೀಶೆ ದೂರು; ಪ್ರಕರಣ ದಾಖಲು

Date:

ಚಿಕಿತ್ಸೆ ನೀಡಲು 12 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಆರೋಪದ ಮೇಲೆ ಮೈಸೂರಿನ ಸರ್ಕಾರಿ ವೈದ್ಯೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ ಶಿಲ್ಪಾ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರಿನ ಚೆಲುವಾಂಬ ಆಸ್ಪತ್ರೆಯ ವೈದ್ಯೆ ಡಾ. ಚೈತ್ರಾ ಸೇರಿದಂತೆ ಆಸ್ಪತ್ರೆಯ ಮೂವರ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು ಮೂಲದ ಬಾಲಕಿಗೆ ಶ್ವಾಸಕೋಶ ಹಾಗೂ ಉಸಿರಾಟ ಸಮಸ್ಯೆ ಇತ್ತು. ಆಕೆಯನ್ನು ಆಕೆಯ ಪೋಷಕರು ಅಕ್ಟೋಬರ್ 26ರಂದು ಚೆಲುವಾಂಬ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಬಾಲಕಿಯ ಊರಿನವರೇ ಆದ ನ್ಯಾಯಾಧೀಶೆ ಶಿಲ್ಪಾ ಅವರೂ ಕೂಡ ಆಕೆಯ ಜೊತೆಗೆ ಆಸ್ಪತ್ರೆಗೆ ತೆರಳಿದ್ದರು. ಆದರೆ, ರಾತ್ರಿ ಪಾಳಿಯಲ್ಲಿದ್ದ ವೈದ್ಯೆ ಚೈತ್ರಾ ಅವರು ಬೆಡ್‌ ಖಾಲಿ ಇಲ್ಲವೆಂದು ಹೇಳಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಖಾಸಗಿ ಆಸ್ಪತ್ರೆಯಲ್ಲಿ ದಿನಕ್ಕೆ ಸುಮಾರು 30,000 ರೂ. ವ್ಯಯಿಸಬೇಕಾಗುತ್ತದೆ ಎಂದು ತಿಳಿದು, ಮತ್ತೆ ಮರಳಿ ಸರ್ಕಾರಿ ಆಸ್ಪತ್ರೆಗೆ ಬಂದಿದ್ದಾರೆ. ನ್ಯಾಯಾಧೀಶೆ ಶಿಲ್ಪಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ ಬಳಿಕ ಬಾಲಕಿಯನ್ನು ವೈದ್ಯರು ದಾಖಲಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನವೆಂಬರ್ 4ರಂದು ಬಾಲಕಿ ಮೃತಪಟ್ಟಿದ್ದಳು.

ಆಕೆಯ ಸಾವಿಗೆ ಸಕಾಲಕ್ಕೆ ಚಿಕಿತ್ಸೆ ನೀಡದ ವೈದ್ಯರ ನಿರ್ಲಕ್ಷ್ಯವೂ ಕಾರಣವೆಂದು ನ್ಯಾಯಾಧೀಶೆ ಶೆಲ್ಪಾ ಅವರು ವೈದ್ಯೆ ಡಾ. ಚೈತ್ರಾ ಮತ್ತು ಇಬ್ಬರು ವಿರುದ್ಧ ದೇವರಾಜ ಪೊಲೀಸ್ ಠಾಣೆ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ನ್ಯಾಯಾಧೀಶರು ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 306ರ ಅಡಿ ಪ್ರಕರಣ ದಾಖಲಾಗಿದೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...