ಮೈಸೂರು | ಅನಾರೋಗ್ಯ ಪೀಡಿತ ಟೈಲರ್ಸ್ ಕುಟುಂಬಗಳಿಗೆ ಕೆಟಿಎನ್‌ಎಸ್‌ನಿಂದ ಧನಸಹಾಯ

Date:

ಕರುನಾಡು ರಾಜ್ಯ ಟೈಲರ್ಸ್ ನೆರವುನಿಧಿ ಸಮಿತಿ (ರಿ) (ಕೆಟಿಎನ್‌ಎಸ್) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮೂವರು ಟೈಲರ್ ವೃತ್ತಿಬಾಂಧವರ ಕುಟುಂಬಗಳಿಗೆ ತಲಾ ₹10,000 ಧನಸಹಾಯ ನೀಡಿ ಮಾನವೀಯತೆ ಮೆರೆದರು.

- Advertisement -

ಎಚ್.ಡಿ.ಕೋಟೆ ತಾಲೂಕು ಸಮಿತಿಯ ಸದಸ್ಯರಾದ ಟೈಲರ್ ಕೃಷ್ಣ, ಟಿ. ನರಸೀಪುರ ತಾಲೂಕು ಸಮಿತಿಯ ಟೈಲರ್ ಸಿದ್ದರಾಜು ಹಾಗೂ ಹುಣಸೂರು ತಾಲೂಕು ಸಮಿತಿಯ ಟೈಲರ್ ನಟರಾಜ್ ಅವರು ಗ್ಯಾಂಗ್ರೀನ್, ನರದೌರ್ಬಲ್ಯ ಸೇರಿದಂತೆ ಹಲವು ಮಾರಣಾಂತಿಕ ಕಾಯಿಲೆಗಳಿಂದ ಮೈಸೂರಿನ ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಸಾಂತ್ವನ ಹೇಳಿ ತಲಾ ₹10,000 ಧನಸಹಾಯದ ಚೆಕ್‌ಗಳನ್ನು ವಿತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ಸಂದರ್ಭದಲ್ಲಿ ಮಾತನಾಡಿದ ಕೆಟಿಎನ್‌ಎಸ್ ರಾಜ್ಯಾಧ್ಯಕ್ಷ ಚನ್ನನಾಯಕ ಆಗತ್ತೂರು, ಸಮಿತಿಯು ಕಳೆದ ನಾಲ್ಕು ವರ್ಷಗಳಿಂದ ಆರೋಗ್ಯ ಶಿಬಿರಗಳು, ರಕ್ತದಾನ ಶಿಬಿರಗಳು, ರಾಷ್ಟ್ರ ಹಾಗೂ ರಾಜ್ಯದ ಮಹನೀಯರ ಜಯಂತಿ ಕಾರ್ಯಕ್ರಮಗಳು ಸೇರಿದಂತೆ ಅನೇಕ ಸಮಾಜಮುಖಿ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ತಿಳಿಸಿದರು.

ಇದಲ್ಲದೆ, ಸಮಿತಿಯ ಸದಸ್ಯರು ಅಥವಾ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದ ಸಂದರ್ಭಗಳಲ್ಲಿ ಹಾಗೂ ಸದಸ್ಯರ ನಿಧನದ ವೇಳೆ ಅವರ ಕುಟುಂಬಗಳಿಗೆ ₹10,000 ರಿಂದ ₹50,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಇದುವರೆಗೆ 25ಕ್ಕೂ ಹೆಚ್ಚು ಕುಟುಂಬಗಳಿಗೆ ಸಹಾಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಎಲ್ಲಾ ಟೈಲರ್ ವೃತ್ತಿಬಾಂಧವರು ಸಮಿತಿಯ ಸದಸ್ಯರಾಗುವ ಮೂಲಕ ಸಮಿತಿಯಿಂದ ದೊರೆಯುವ ವಿವಿಧ ಸೌಲಭ್ಯಗಳು ಮತ್ತು ನೆರವು ಯೋಜನೆಗಳ ಪ್ರಯೋಜನವನ್ನು ತಮ್ಮ ಕುಟುಂಬಕ್ಕೂ ದೊರಕಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ಮಾತನಾಡಿ, ಕೆಟಿಎನ್‌ಎಸ್ ಸಮಿತಿಯು ಸಾರ್ವಜನಿಕ ಸೇವೆಗಳ ಜೊತೆಗೆ ಸಂಕಷ್ಟದಲ್ಲಿರುವ ಸದಸ್ಯರ ಕುಟುಂಬಗಳಿಗೆ ಆರ್ಥಿಕವಾಗಿ ಬೆನ್ನೆಲುಬಾಗಿ ನಿಂತಿರುವುದು ಅತ್ಯಂತ ಶ್ಲಾಘನೀಯ ಮತ್ತು ಸಮಾಜಕ್ಕೆ ಮಾದರಿಯಾದ ಕಾರ್ಯವಾಗಿದೆ. ರಾಜ್ಯದ ಎಲ್ಲಾ ವೃತ್ತಿಬಾಂಧವರು ಸಮಿತಿಯೊಂದಿಗೆ ಕೈಜೋಡಿಸಿ ಸರ್ಕಾರ ಹಾಗೂ ಸಮಿತಿಯ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ತಾರಾ ಜಿ, ಕೆಟಿಎನ್‌ಎಸ್ ಮೈಸೂರು ಜಿಲ್ಲಾಧ್ಯಕ್ಷ ಪ್ರಕಾಶ್ ಸರಗೂರು, ಉಪಾಧ್ಯಕ್ಷ ಶಿವಣ್ಣ (ಹುಣಸೂರು), ಪ್ರಧಾನ ಕಾರ್ಯದರ್ಶಿ ನಾಗೇಂದ್ರ (ಹುಣಸೂರು), ಖಜಾಂಚಿ ಆರ್.ಸಿ. ರಾಜು, ಮೈಸೂರು ತಾಲೂಕು ಅಧ್ಯಕ್ಷ ಜನಾರ್ಧನ್ ಎಸ್, ಸಹ ಕಾರ್ಯದರ್ಶಿ ಆರ್.ಬಿ. ಕೇಶವ್, ರಮೇಶ್, ರಾಜೇಂದ್ರನಗರ ಸುರೇಶ್, ಟಿ. ನರಸೀಪುರದ ಪ್ರತಿನಿಧಿಗಳು ಸೇರಿದಂತೆ ಹಲವಾರು ಟೈಲರ್ ವೃತ್ತಿಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...