ಮೈಸೂರು | ಮೇಲಾಧಿಕಾರಿ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆ ನೌಕರ

Date:

ಮೇಲಾಧಿಕಾರಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.

ಮೂಲತಃ ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿಯ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆ ನೌಕರ. ಆತನನ್ನು ಮೇಲಾಧಿಕಾರಿಗಳು ನಿಂದಿಸಿದ್ದರಿಂದ ಮನವೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಎಚ್‌.ಡಿ ಕೋಟೆ ಹ್ಯಾಂಡ್‌ ಪೋಸ್ಟ್‌ನಲ್ಲಿರುವ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಆತ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಿಆರ್‌ಎಫ್ಒ ನವೀನ್ ಎಂಬವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪ ಸಂಬಂಧ ಪ್ರಕ್ರಿಯಿಸಿರುವ ನವೀನ್, “ನಾನು ವಿನೋದ್‌ ಮೇಲೆ ಹಲ್ಲೆಯನ್ನಾಗಿಲೀ, ಕಿರುಕುಳವನ್ನಾಗಲೀ ಮಾಡಿಲ್ಲ. ಇಲಾಖೆಯ ಜೀಪ್‌ ಟೈರ್ ಪಂಚರ್‌ ಆಗಿತ್ತು. ನೀವೇ ಪಂಚರ್‌ ಹಾಕಿಸಬೇಕೆಂದು ವಿನೋದ್‌ಗೆ ಸುಮ್ಮನೆ ಗದರಿದ್ದೆ. ಅಷ್ಟೇ ವಿನೋದ್‌ ನನ್ನ ವಿರುದ್ಧ ದೂರು ನೀಡಲು ಕಚೇರಿಗೆ ತೆರಳಿದ್ದರು. ಕಚೇರಿಯಲ್ಲಿ ಏನಾಗಿದೆಯೋ ಗೊತ್ತಿಲ್ಲ” ಎಂದು ಹೇಳಿದ್ದಾರೆ.

“ಕಚೇರಿಯಿಂದ ವಿನೋದ್‌ ವಸತಿಗೃಹಕ್ಕೆ ಬಂದಿದ್ದಾರೆ. ಆ ಸಮಯದಲ್ಲಿ ನಾವು ಕಾಫಿ ಕುಡಿಯಲು ಹೋಗಿದ್ದೆ. ಬರುವಷ್ಟರಲ್ಲಿ ವಿಷ ಸೇವಿಸಿದ್ದಾನೆ. ನಾನು ಅವರ ಮೇಲೆ ಹಲ್ಲೆ ಮಾಡಿಲ್ಲ. ನಮಗೆ ಹಲ್ಲೆ ಮಾಡುವ ಯಾವುದೇ ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ರಾಯಚೂರು | ಎಸ್‌ಯುಸಿಐ ಅಭ್ಯರ್ಥಿ ರಾಮಲಿಂಗಪ್ಪ ನಾಮಪತ್ರ ಸಲ್ಲಿಕೆ

ರಾಯಚೂರು-ಯಾದಗಿರಿ ಒಳಗೊಂಡ ರಾಯಚೂರು ಲೋಕಸಭಾ (ಪ.ಪಂ) ಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ...

ಗದಗ | ತಾಲೂಕು ಆಡಳಿತದಿಂದ ‘ಮೇವು ಬ್ಯಾಂಕ್’ ಆರಂಭ; ಕೆ.ಜಿಗೆ 2 ರೂ. ದರ ನಿಗದಿ

ಕೊಣ್ಣೂರು : ಜಾನುವಾರುಗಳಿಗೆ ಮೇವು ಕೊರತೆ ನೀಗಿಸಲು ತಾಲೂಕು ಆಡಳಿತದಿಂದ ಮೇವು...