ಮೈಸೂರು | ಶ್ರಮಿಕರ ಸಮಸ್ಯೆಗಳ ಪರಿಹಾರಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ

Date:

Advertisements

‌ದುಡಿಯುವ ಜನರ ಜ್ವಲಂತ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಬೇಕು ಎಂದು ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್ (ಎಐಯುಟಿಯುಸಿ) ಆಗ್ರಹಿಸಿದೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಕೇಂದ್ರ ಸರ್ಕಾರಕ್ಕೆ ಬರೆದ ಹಕ್ಕೊತ್ತಾಯ ಪತ್ರವನ್ನು ಮೈಸೂರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.

“ಒಳ್ಳೆಯ ದಿನ(ಅಚ್ಚೇ ದಿನ)ಗಳನ್ನು ಕೊಡುವುದಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಮ್ಮ ಸರ್ಕಾರವು ಹಿಂದಿನ ಸರ್ಕಾರಗಳು ಅನುಸರಿಸಿದ ನೀತಿಗಳನ್ನೇ ಬಹಳ ವೇಗವಾಗಿ ಜಾರಿಗೊಳಿಸುತ್ತಾ, ಅದರಲ್ಲೂ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿರುವುದು ಅತ್ಯಂತ ನೋವಿನ ವಿಚಾರ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ದುಡಿಯುವವರು ತೀವ್ರವಾದ ಬಾಧೆಗೆ ತುತ್ತಾಗಿದ್ದಾರೆ. ತ್ಯಾಗ ಬಲಿದಾನಗಳಿಂದ ಗಳಿಸಿದ ಅವರ ಎಲ್ಲ ಹಕ್ಕುಗಳು ಇನ್ನಿಲ್ಲವಾಗುತ್ತಿವೆ. ಖಾಯಂ ಉದ್ಯೋಗಗಳು ತೀವ್ರವಾಗಿ ಕಡಿತವಾಗುತ್ತಿವೆ. ಹೊರ ಗುತ್ತಿಗೆ, ವಿವಿಧ ರೀತಿಯ ಗುತ್ತಿಗೆ ಕೆಲಸಗಳು, ನಿಗದಿತ ಅವಧಿಗೆ ಮಾತ್ರ ಉದ್ಯೋಗ, ಗಿಗ್ ಕೆಲಸ ಇತ್ಯಾದಿಗಳು ಈಗ ಸರ್ವೇಸಾಮಾನ್ಯ ಎಂಬಂತಾಗಿದೆ. ಸಾರ್ವಜನಿಕ ಉದ್ಯಮಗಳನ್ನು ಜನಹಿತಕ್ಕೆ ವಿರುದ್ಧವಾಗಿ ಖಾಸಗೀಕರಿಸಲಾಗುತ್ತಿದೆ. ದುಡಿಯುವ ಜನರ ವೇತನ ಜೀವನವೆಚ್ಚಕ್ಕೆ ಹೋಲಿಸಿದರೆ ಕ್ಷೀಣಿಸುತ್ತಿದೆ. ಸೇವಾಭದ್ರತೆ ಮಾಯವಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಜನರ ಬೆವರು ರಕ್ತದಿಂದ ನಿರ್ಮಿಸಿದ್ದ ವಿವಿಧ ಸಾರ್ವಜನಿಕ ಕ್ಷೇತ್ರದ ಆಸ್ತಿಯನ್ನು ಯಾವುದೇ ಹೂಡಿಕೆ ಮಾಡದ ದೈತ್ಯ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸಲಾಗುತ್ತಿದೆ. ವಿಮಾನ ನಿಲ್ದಾಣಗಳು, ಹೆದ್ದಾರಿಗಳು, ಬಂದರುಗಳು, ರೈಲ್ವೆ ಹಳಿಗಳು- ನಿಲ್ದಾಣಗಳು ಹೀಗೆ ಎಲ್ಲವನ್ನೂ ಖಾಸಗಿ ಮಾಲೀಕರಿಗೆ ಒಪ್ಪಿಸಲಾಗುತ್ತಿದೆ. ಸರ್ಕಾರವು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಜಾರಿ ಮಾಡಿ ದೇಶದ ಅಪಾರ ಸಂಪತ್ತನ್ನು ಸೃಷ್ಟಿಸುವ ಬೃಹತ್ ಉದ್ದಿಮೆಗಳನ್ನು ಅತ್ಯಂತ ಕಡಿಮೆ ಆದಾಯಕ್ಕೆ ಖಾಸಗಿಯವರಿಗೆ ಒತ್ತೆ ಇಡಲಾಗುತ್ತಿದೆ. ಸಾರ್ವಜನಿಕ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಾ. ಖಾಸಗೀಕರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಎಲ್‌ಐಸಿ, ಜಿಐಸಿಗಳನ್ನು ಖಾಸಗೀಕರಿಸುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಬೆಳವಣಿಗೆ, ರಕ್ಷಣಾ ಉಪಕರಣಗಳನ್ನು ತಯಾರಿಸುವ 41 ಸಶಸ್ತ್ರ ಕಾರ್ಖಾನೆಗಳನ್ನು ಖಾಸಗೀಕರಣ ಪೂರ್ವದ ಪ್ರಕ್ರಿಯೆಯಾಗಿ 7 ನಿಗಮಗಳಾಗಿ ಪರಿವರ್ತಿಸಿದೆ. ಇದು ಗಂಭೀರ ಸ್ವರೂಪದ ದೇಶ ವಿರೋಧಿ ನಡೆಯಾಗಿದೆ” ಎಂದು ಆರೋಪಿಸಿದರು.

“ಎಲ್ಲರಿಗೂ ಖಾಯಂ ಉದ್ಯೋಗವನ್ನು ಒದಗಿಸಿ ಹಾಗೂ ‘ಉದ್ಯೋಗದ ಹಕ್ಕುನ್ನು’ ಸಂವಿಧಾನದ ಮೂಲಭೂತ ಹಕ್ಕನ್ನಾಗಿಸಬೇಕು. ವಿದ್ಯುತ್ (ತಿದ್ದುಪಡಿ) ಮಸೂದೆ 2023ನ್ನು ಹಿಂಪಡೆದು, ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು. ಎಲ್ಲ ಪಿಂಚಣಿದಾರರಿಗೆ ಬೆಲೆ ಸೂಚ್ಯಂಕ ಅನುಗುಣವಾದ ಪಿಂಚಣಿಯನ್ನು ಖಾತ್ರಿಪಡಿಸಿ ಮತ್ತು ಕನಿಷ್ಠ ₹10,000 ಪಿಂಚಣಿಯನ್ನು ಒದಗಿಸಬೇಕು. ಈ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

“ರಾಷ್ಟ್ರೀಯ ಕನಿಷ್ಠ ವೇತನವನ್ನು ತಿಂಗಳಿಗೆ ₹28,000ಕ್ಕೆ ಹೆಚ್ಚಿಸಬೇಕು. ಬೆಲೆ ಏರಿಕೆಯನ್ನು ನಿಯಂತ್ರಿಸಿ ಮತ್ತು ಆಹಾರ, ಔಷಧದಂತಹ ಅಗತ್ಯ ವಸ್ತುಗಳು ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯಬೇಕು. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಎಲ್ಲ ಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಿ, ಉದ್ಯೋಗಗಳ ಗುತ್ತಿಗೀಕರಣವನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

“ಸ್ಕೀಮ್ ಕಾರ್ಯಕರ್ತರನ್ನು ಸರ್ಕಾರಿ ನೌಕರರನ್ನಾಗಿ ಖಾಯಂಗೊಳಿಸಲು ಐಎಲ್‌ಸಿಯ 45ನೇ ಮತ್ತು 46ನೇ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಎಲ್ಲ ಸ್ಕೀಮ್ ಕಾರ್ಯಕರ್ತರಿಗೆ ಮಾಸಿಕ ಕನಿಷ್ಠ ವೇತನ ₹28,000 ಮತ್ತು ಪಿಂಚಣಿ ₹10,000 ಇಎಸ್‌ಐ ಮತ್ತು ಪಿಎಫ್ ಒದಗಿಸಬೇಕು. ಹೊಸ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ಹಿಂತೆಗೆದುಕೊಳ್ಳಿ ಮತ್ತು ಪಿಂಚಣಿಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಿ ಹಳೆಯ ಪಿಂಚಣಿ ಯೋಜನೆ(ಒಪಿಎಸ್‌)ಯನ್ನು ಪುನಃ ಜಾರಿಗೊಳಿಸಬೇಕು. ಕಾರ್ಮಿಕ ವಿರೋಧಿ 4 ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಿ, ಲೇಬರ್ ಕೋಡ್‌ಗಳ ಹೊಸ ನಿಯಮಗಳ ರಚನೆಯನ್ನು ನಿಲ್ಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಆಗ್ರಹ

“ಉದ್ಯೋಗ, ಸಾಮಾಜಿಕ ಭದ್ರತಾ ಕ್ರಮಗಳನ್ನು ಖಾತ್ರಿಪಡಿಸಿ ಮತ್ತು ಎಲ್ಲ ಕಾರ್ಮಿಕರಿಗೆ ವಿಮಾ ರಕ್ಷಣೆ, ಇಎಸ್‌ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಬೇಕು. ಎಲ್ಲ ಶಾಸನಬದ್ಧ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮತ್ತು ಕಾರ್ಮಿಕ ಕಾನೂನುಗಳ ಉಲ್ಲಂಘನೆಯ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂಬುದು ಸೇರಿದಂತೆ ಬಹುತೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X