ಮೈಸೂರು | ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ. ಎಚ್‌.ಸಿ ಮಹದೇವಪ್ಪ

Date:

ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಮಂಗಳವಾರ(ಡಿ.19) ಆಯೋಜಿಸಿದ್ದ ಮೂರು ದಿನಗಳ ‘ಸಿರಿಧಾನ್ಯ ಸಂಭ್ರಮಕ್ಕೆ’ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದರು.

ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೆ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ ಹತ್ತು ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆಯನ್ನು ಮಾಡಿದ್ದರು ಎಂದು ತಿಳಿಸಿದರು‌.

ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.

ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಠಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...

ಸಂಜೀವಿನಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಆಗ್ರಹ

ಸಂಜೀವಿನಿ ನೌಕರರಿಂದ ಬಿಟ್ಟಿ ಜಾಕರಿ ಮಾಡಿಕೊಳ್ಳಲಾಗುತ್ತಿದೆ. ಕಡಿಮೆ ವೇತನ ನೀಡುತ್ತಿದ್ದು, ಘನತೆಯ...