ಮೈಸೂರು | ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು

Date:

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಪ್ರಾದೇಶಿಕ ಆಯುಕ್ತ ಡಾ. ಜಿ ಸಿ ಪ್ರಕಾಶ್ ಅವರು ಅಮಾನತುಗೊಳಿಸಿ, ಆದೇಶ ಹೊರಡಿಸಿದ್ದಾರೆ.

- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ಅವರು ಜನವರಿ 7ರ ಭಾನುವಾರದಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತನ್ನ ಸಾವಿಗೆ ಉಪ ತಹಶೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣವೆಂದು ಡೆತ್ ನೋಟ್‌ನಲ್ಲಿ ಬರೆದು ವಾಟ್ಸಪ್ ಸ್ಟೇಟಸ್ ಹಾಕಿ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಧಾರವಾಡ | ಸಹಾಯಕ ಪ್ರಾಧ್ಯಾಪಕ ಹುದ್ದೆ; ಆರು ಸಾವಿರ ಮಂದಿ ನೇಮಕಕ್ಕೆ ಅಭ್ಯರ್ಥಿಗಳ ಆಗ್ರಹ

ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಸೋಮವಾರ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಉಪತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು. ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಕೂಡ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತ ಡಾ. ಜಿ ಸಿ ಪ್ರಕಾಶ್ ಅವರು ಉಪತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...