ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಉಪಸಮಿತಿಗಳ ರಚನೆ, ಕಾರ್ಯಕ್ರಮಗಳ ರೂಪುರೇಷೆ ಸಿದ್ಧತೆ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಅವರು ಮಂಗಳವಾರ ಅರಮನೆ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತ ಅಶಾಸ್ ಉರ್ ರೆಹ್ಮಾನ್ ಶರೀಫ್, ಮುಡಾ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಎಂ ಕೃಷ್ಣರಾಜು, ಪ್ರವಾಸೋದ್ಯಮ ಉಪ ನಿರ್ದೇಶಕಿ ಸವಿತಾ, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಪ್ರಾಧ್ಯಾಪಕ ಡಾ. ಬಿ ಎಸ್ ಚಂದ್ರಶೇಖರ್ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.