ಮೈಸೂರು | ಬೆಳಗಾವಿ ಜಿಲ್ಲೆಯ ಮರಾಠಿ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹ

Date:

Advertisements

ಬೆಳಗಾವಿ ಜಿಲ್ಲೆ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ಕರ್ತವ್ಯ ನಿರತ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಮರಾಠಿ ಪುಂಡರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ,ರಾಜ್ಯದಿಂದ ಗಡಿಪಾರು ಮಾಡುವಂತೆ ಮೈಸೂರಿನ ಪ್ರಜ್ಞಾವಂತ ನಾಗರಿಕ ವೇದಿಕೆ ಆಗ್ರಹಿಸಿದೆ.

ಪ್ರಜ್ಞಾವಂತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಮೈಸೂರು ನಗರದ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಡಾ ಶಿವರಾಜು ಅವರಿಗೆ ಸಲ್ಲಿಸಿದರು.

ಮಾಜಿ ನಗರಪಾಲಿಕ ಸದಸ್ಯ ಎಂ ವಿ ರಾಮ್ ಪ್ರಸಾದ್ ಮಾತನಾಡಿ ” ಕರ್ನಾಟಕದ ಗಡಿ ಜಿಲ್ಲೆಯಾದ ಬೆಳಗಾವಿಯ ಸುಳೇಬಾವಿ ಗ್ರಾಮದ ಹೊರವಲಯದಲ್ಲಿ ವಿಶ್ವ ಮಾತೃ ಭಾಷೆ ದಿನದಂದೇ ರಾಜ್ಯ ಸಾರಿಗೆ ಸಂಸ್ಥೆಯ ನಿರ್ವಾಹಕ ಮಹದೇವಪ್ಪ ಎಂಬುವರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ನಡೆಸಿದೆ. ಈ ವಿಚಾರವಾಗಿ ಪ್ರಶ್ನಿಸಿದ ಚಾಲಕ ಕಟಾಲ್ ಸಾಬ್‌ ಮೇಲೂ ಹಲ್ಲೆ ಮಾಡಿದ್ದು ಖಂಡನಿಯ.

Advertisements

ಹಲ್ಲೆಗೊಳಗಾದವರು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತಿದ್ದರು,ಇದುವರೆಗೆ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರುವುದು ವಿಷಾದನಿಯ ಸಂಗತಿ.

ಕೂಡಲೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಹಲ್ಲೆಕೋರರ ಮೇಲೆ ಕಠಿಣ ಕ್ರಮ ಜರುಗಿಸಬೇಕು, ರಾಜ್ಯದಿಂದ ಗಡಿಪಾರು ಮಾಡಬೇಕು.ಎಂಇಎಸ್ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳಿಗೆ ಕಪ್ಪು ಮಸಿ ಬಳಿದು, ನಾಲಿಗೆ ಹರಿ ಬಿಟ್ಟಿದ್ದು, ದಿನೆ ದಿನೇ ಇವರ ದಬ್ಬಾಳಿಕೆ ಹೆಚ್ಚುತ್ತಿದೆ ” ಎಂದು ಆರೋಪಿಸಿದರು.

ರಾಜ್ಯದ ಗಡಿಯಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಎಂಇಎಸ್ ಸಂಘಟನೆಯನ್ನು ರದ್ದು ಪಡಿಸಬೇಕು,ಬಸ್ ನಿರ್ವಾಹಕನ ವಿರುದ್ಧದ ಪೋಕ್ಸೋ ಪ್ರಕರಣ ವಾಪಸ್ ಪಡೆಯಬೇಕು. ಕನ್ನಡ ವಿರೋಧಿ ಕೃತ್ಯಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಮಾಜಿ ನಗರ ಪಾಲಿಕೆ ಸದಸ್ಯ ಮಾಧು ವಿ ರಾಮ ಪ್ರಸಾದ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಒಕ್ಕಲಿಗರ ಸಂಘದ ನಿರ್ದೇಶಕ ಎ ರವಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಸಾಮಾಜಿಕ ಹೋರಾಟಗಾರ ವಿಕ್ರಮ ಅಯ್ಯಂಗಾರ್, ಸುಚಿಂದ್ರ, ಮಹಾನ್ ಶ್ರೇಯಸ್, ಅಜಯ್ ಶಾಸ್ತ್ರಿ ಹಾಗೂ ಇನ್ನಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೆ. 1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಭೇಟಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ....

ಮೈಸೂರು | ಕನ್ನಡಪರ ಹೋರಾಟಗಾರ ಸ. ರ. ಸುದರ್ಶನ ಹೃದಯಾಘಾತದಿಂದ ನಿಧನ

ಮೈಸೂರಿನ ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ...

ಮೈಸೂರು | ಓರ್ವನ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು : ಸುರೇಶ್

ಮೈಸೂರಿನ ದಾರುಲ್ ಫಲಾ ಹೆಲ್ತ್ ಸೆಂಟರ್ ಶಾಂತಿ ನಗರದಲ್ಲಿ ಹೆಚ್.ಆರ್.ಎಸ್. ವತಿಯಿಂದ...

ಮೈಸೂರು | ವೈದ್ಯಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ; ಮೊದಲ ರೋಬೋಟಿಕ್ ಥೈರಾಯ್ಡ್ ಶಸ್ತ್ರಚಿಕಿತ್ಸೆ ಯಶಸ್ವಿ

ಮೈಸೂರಿನ ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಹಾಗೂ ರೋಬೋಟಿಕ್ ಸರ್ಜರಿ ಸಂಸ್ಥೆ...

Download Eedina App Android / iOS

X