ಮೈಸೂರು | ಅಜ್ಜಿ ತಿಥಿ ಕಾರ್ಯಕ್ಕೆ ಬಂದಿದ್ದ ಕುಟುಂಬ ನೀರುಪಾಲು

Date:

ಅಜ್ಜಿಯ ತಿಥಿ ಕಾರ್ಯಕ್ಕೆಂದು ಬಂದಿದ್ದ ಕುಟುಂಬವೊಂದರ ಮೂವರು ನಾಲೆಗೆ ಬಿದ್ದು, ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಸರಗೂರು ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ಮೃತ ಕುಟುಂಬದ ಯುವತಿ ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದಿದ್ದಾರ. ಅವರನ್ನು ರಕ್ಷಿಸಲು ಹೋದ ಆಕೆಯ ತಂದೆ-ತಾಯಿ ಕೂಡ ನೀರು ಪಾಲಾಗಿದ್ದಾರೆ. ಮೃತರನ್ನು ಚಂಗೌಡನಹಳ್ಳಿ ಗ್ರಾಮದ ಮಹಮ್ಮದ್ ಕಪಿಲ್ (42), ಶಾವರಭಾನು (35), ಶಾಹೀರಾಭಾನು (20) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಪಿಲ್‌ ಅವರ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತ್ತಿತ್ತು. ಅಜ್ಜಿಯ ತಿಥಿ ಕಾರ್ಯವಿದ್ದ ಕಾರಣ ಗ್ರಾಮಕ್ಕೆ ಬಂದಿದ್ದರು. ಕಾರ್ಯ ಮುಗಿಸಿ ನಾಲೆಯಲ್ಲಿ ಕೈ-ಕಾಲು ತೊಳೆಯಲು ಹೋಗಿದ್ದಾರೆ. ಆಗ ಶಾಹೀರಾಭಾನು ಕಾಲು ಜಾರಿ ನಾಲೆಗೆ ಬಂದಿದ್ದಾರೆ. ಆಕೆಯನ್ನು ರಕ್ಷಿಸಲು ಕಪಿಲ್ ಮತ್ತು ಶಾವರಭಾನು ನಾಲೆಗೆ ಇಳಿದಿದ್ದಾರೆ. ನೀರಿನ ರಭಸಕ್ಕೆ ಮೇಲೆ ಬರಲಾರದೆ ಮೂವರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಬಂದಿದ್ದು, ಮೃತದೇಹಗಳನ್ನು ಹೊರಕ್ಕೆ ತೆರೆದಿದ್ದಾರೆ. ಸರಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...