ಮೈಸೂರು | ನಿರಾಶ್ರಿತರಿಗೆ ಹೊದಿಕೆ ವಿತರಣಾ ಅಭಿಯಾನಕ್ಕೆ ಚಾಲನೆ

Date:

ಮೈಸೂರು ನಗರದಲ್ಲಿ 45 ದಿನ ಕಾಲ ಪ್ರತಿನಿತ್ಯ ರಾತ್ರಿ 11 ಗಂಟೆಯಿಂದ 12ಗಂಟೆಯವರೆಗೆ ನಗರದ ವಿವಿಧ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿದೆ.

- Advertisement -

ಬೀದಿಬದಿಯಲ್ಲಿ ಜೀವನಸಾಗಿಸುವ, ರಾತ್ರಿಹೊತ್ತು ರಸ್ತೆಯಲ್ಲಿ ಮಲಗುವ ನಿರ್ಗತಿಕರು, ಬೀದಿಬದಿವ್ಯಾಪಾರಸ್ಥರು, ಮುಂಜಾನೆಯೇ ಸ್ವಚ್ಛತೆ ಮಾಡುವ ಪೌರಕಾರ್ಮಿಕರು ಹಾಗೂ ಬಡವರ್ಗದವರಿಗೆ ಚಳಿಗಾಲ ಹಾಗೂ ವಿಪರೀತ ತಂಡೀಗಾಳಿ ವಾತಾವರಣದ ಪರಿಣಾಮ ಆರೋಗ್ಯ ಸಮಸ್ಯೆ ಎದುರಿಸುತ್ತಾರೆ. ಇಂತವರಿಗೆ ಹೊದಿಕೆ ವಿತರಿಸಲು ಟ್ರಸ್ಟ್‌ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಸಹಾಯಕರಿಗೆ ಹೂದಿಕೆ ವಿತರಣಾ ಅಭಿಯಾನವನ್ನು ಕೆ.ಆರ್. ಆಸ್ಪತ್ರೆ ಸುತ್ತಮುತ್ತ ಮಲಗಿರುವ ಸಾರ್ವಜನಿಕರಿಗೆ ಹೊದಿಕೆ ಹಾಕುವ ಮೂಲಕ ಚಾಲನೆ ನೀಡಲಾಯಿತು. ನಂತರ ಅಭಿಯಾನವನ್ನು ಉದ್ದೇಶಿಸಿ ಶಾಂತವೇರಿ ಗೋಪಾಲ್ ಗೌಡ ಆಸ್ಪತ್ರೆಯ ವ್ಯವಸ್ಥಾಪಕರಾದ ಡಾ. ಶುಶ್ರುತ ಗೌಡ ಮಾತನಾಡಿದರು.

ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ ಸ್ವಾಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಆದ ಕಾರಣ ಕಷ್ಟದಲ್ಲಿದ್ದೇವೆ ಸಹಾಯ ಮಾಡಿ ಎಂದು ಸಂಘಸಂಸ್ಥಗಳಿಗೆ ಅಥವಾ  ಸರ್ಕಾರಕ್ಕೆ ಅರ್ಜಿ ಹಾಕಲ್ಲ ಅಥವಾ ಸರ್ಕಾರದವರೇ ಎಲ್ಲವನ್ನು ಸರಿದಾರಿಗೆ ತರೋಕು ಆಗುವುದಿಲ್ಲ ಸಮಾಜವನ್ನ ಸರಿಪಡಿಸಲು ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಪಾತ್ರ ಬಹಳಮುಖ್ಯ,  ಅಶಕ್ತರಿರುವ ಸ್ಥಳಕ್ಕೆ ಹೋಗಿ ಹೊದಿಕೆ ವಿತರಣೆ ಕಾರ್ಯಕ್ರಮ ನಡೆಯುವ  ಮಾದರಿಯಲ್ಲೆ  ಅವರಿಗೆ ಆರೋಗ್ಯ ತಪಾಸಣೆ ಮಾಡಿಸಲು ಶ್ರಮಿಸೋಣ ಎಂದು ಹೇಳಿದರು.

ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಸ್ನೇಹಿತರ ಸಹಕಾರದೊಂದಿಗೆ ಕಳೆದ ನಾಲ್ಕು ವರ್ಷದಿಂದ ನಿರಂತರವಾಗಿ ಡಿಸೆಂಬರ್ ಹಾಗೂ ಜನವರಿ ತಿಂಗಳಿನಲ್ಲಿ ಚಳಿಗಾಲ ಸಂದರ್ಭದಲ್ಲಿ ಸ್ನೇಹಿತರೊಡನೆ ಸ್ಥಳಕ್ಕೆ ತೆರಳಿ ಅವರ ಸ್ಥಿತಿಗಳನ್ನು ನೋಡಿ ಹೊದಿಕೆ ಯನ್ನು ವಿತರಿಸುತ್ತಾ ಬಂದಿದ್ದೇವೆ. ಜೊತೆಗೆ ಕೆಲವೊಂದು ಹಾಡಿಗಳಿಗೆ ಭೇಟಿ ಕೊಟ್ಟಿ ಹಾಡಿ ಜನಾಂಗದವರಿಗೂ ಹೂದಿಕೆಯನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಅಹಿಂದ ಮುಖಂಡ ನಜರ್ಬಾದ್ ನಟರಾಜ್, ಕಡಕೋಳ ಪಟ್ಟಣ ಪಂಚಾಯತ್ ಕಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ರುದ್ರಮೂರ್ತಿ, ಬೈರತಿ ಲಿಂಗರಾಜು, ಸೇರಿದಂತೆ ಇನ್ನಿತರ ಟ್ರಸ್ಟ್ ಸದಸ್ಯರುಗಳು ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...