ಮೈಸೂರು | ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆ: ಯತೀಂದ್ರ ಸಿದ್ದರಾಮಯ್ಯ

Date:

Advertisements

ತಾಂತ್ರಿಕ ಸಮಸ್ಯೆಯಿಂದ ʼಗೃಹಲಕ್ಷ್ಮಿ ಯೋಜನೆʼಗೆ ತೊಂದರೆಯಾಗಿದೆ. ಸರ್ಕಾರ ಯೋಜನೆ ಪ್ರಾರಂಭಿಸಿದ ದಿನದಿಂದಲೂ ಪ್ರತಿಯೊಬ್ಬರ ಖಾತೆಗೆ ಹಣವನ್ನು ಬಿಡುಗಡೆ ಮಾಡುತ್ತದೆ. ಇದರ ಬಗ್ಗೆ ಯಾವುದೇ ಆತಂಕ ಬೇಡ ಎಂದು ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ತಾಲೂಕಿನ ವರುಣ ಕ್ಷೇತ್ರದ ಎಸ್ ಉತ್ತನಹಳ್ಳಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. “ಈ ಗ್ರಾಮದಲ್ಲಿ ಕಂದಾಯ ಇಲಾಖೆಯ ಸಮಸ್ಯೆಗಳು ಬಹಳಷ್ಟಿವೆ. ತಹಶೀಲ್ದಾರ್‌, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿಕೊಡುತ್ತೇನೆ” ಎಂದು ಭರವಸೆ ನೀಡಿದರು.

“ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಸ್ಮಶಾನ ಅಭಿವೃದ್ಧಿ, ರಿಂಗ್ ರಸ್ತೆಯಿಂದ ದೇವಸ್ಥಾನದವರೆಗೆ ಜೋಡಿ ರಸ್ತೆ, ಪಶು ಆಸ್ಪತ್ರೆ ಸ್ಥಳಾಂತರ, ಪ್ರೌಢಶಾಲೆ, ಕುಂಬಾರ ಭವನ, ವಿಶ್ವಕರ್ಮ ಭವನಕ್ಕೆ ಹಣ ಬಿಡುಗಡೆ ಹಾಗೂ ಪ್ರಸಾದ್ ಯೋಜನೆಯಡಿ ದೇವಸ್ಥಾನವನ್ನು ಸೇರಿಸಿ ಅಭಿವೃದ್ಧಿಪಡಿಸಬೇಕು, ಕನಕಭವನಕ್ಕೆ ಆರ್‌ಟಿಸಿ ಆಗಬೇಕು, ಆಶ್ರಯ ಮನೆಗಳಿಗೆ ಸಕ್ರಮ ಆಗಬೇಕು ಎಂದು ಒತ್ತಾಯಿಸಿದ್ದೀರಿ. ಕುಡಿಯುವ ನೀರಿನ ಬಗ್ಗೆ ಹಲವು ಸಮಸ್ಯೆಗಳನ್ನು ತಿಳಿಸಿದ್ದೀರಿ. ಈ ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿ ಮಾಡಲು ಆಗದಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಆದ್ಯತೆ ಮೇಲೆ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ

ಮುಖ್ಯಮಂತ್ರಿ ವಿಶೇಷಾಧಿಕಾರಿ ಕೆ ಎನ್ ವಿಜಯ್, ತಹಶೀಲ್ದಾರ್‌ ಜೆ ಮಹೇಶ್‍ ಕುಮಾರ್, ಬಿಇಒ ವಿವೇಕಾನಂದ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ತಾ.ಪಂ. ಮಾಜಿ ಅಧ್ಯಕ್ಷೆ ಮಂಜುಳಾ ಮಂಜುನಾಥ್, ಎಸ್‌ಐ ಚೇತನ್, ಆರ್‌ಐ ಶಂಕರ್, ಆಪ್ತ ಸಹಾಯಕ ಶಿವಸ್ವಾಮಿ, ಪ್ರದೀಪ್‍ ಕುಮಾರ್, ನಾಗರಾಜು ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಇತರರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X