ಮೈಸೂರು | ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಂಪೂರ್ಣ ಬಳಸಿ; ಜಿಲ್ಲಾಧಿಕಾರಿ ಸೂಚನೆ

Date:

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಬಲೀಕರಣಕ್ಕಾಗಿ ಮೀಸಲಾಗಿರುವ ವಿಶೇಷ ಘಟಕ ಯೋಜನೆ(ಎಸ್‌ಸಿಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಅನುದಾನವನ್ನು ಪ್ರಸ್ತು ಹಣಕಾಸು ವರ್ಷದ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಮೈಸೂರಿನಲ್ಲಿ ನಡೆದ ಎಸ್‌ಸಿಪಿ/ ಟಿಎಸ್‌ಪಿ ಅನುದಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿಸ್ತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

“ಸರ್ಕಾರದಿಂದ ಅನುದಾನ ಬಿಡುಗಡೆ ಆಗುವವರೆಗೂ ಕಾಯಬಾರದು. ಫಲಾನುಭವಿಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಅನುದಾನ ಬಿಡುಗಡೆಯಾದ ಕೂಡಲೇ ಸೌಲಭ್ಯ ಕಲ್ಪಿಸಲು ಅನುಕೂಲವಾಗುತ್ತದೆ. ಇದರಿಂದ ಅನುದಾನ ವ್ಯರ್ಥವಾಗುವುದನ್ನೂ ತಡೆಯಬಹುದು” ಎಂದು ತಿಳಿಸಿದರು.

“ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಅಧಿಕಾರಿಗಳು ಪ್ರಾರಂಭಿಸಬೇಕು. ಸರ್ಕಾರಿ ವಸತಿ ನಿಲಯಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಭೂಮಿ ಬೇಕಾಗಿರುವುದರಿಂದ ತಮ್ಮ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಿ ಸಾರ್ವಜನಿಕ ಬಳಕೆಗೆ ಕಾಯ್ದಿರಿಸಿ, ಅದರ ಪಟ್ಟಿಯನ್ನು ತನಗೆ ಸಲ್ಲಿಸಬೇಕು” ಎಂದರು.

“ಭೂರಹಿತ ಎಸ್‌ಸಿ/ಎಸ್‌ಟಿ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಲವು ಯೋಜನೆಗಳಡಿ ಭೂಮಿ ವಿತರಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಜೇನು ಕೃಷಿಕರ ಸಂಘದ ಚುನಾವಣೆ; ಮತದಾನ ವಂಚಿತರಿಗೆ ಮತದಾನಕ್ಕೆ ಅವಕಾಶ

“ಬುಡಕಟ್ಟು ಕುಗ್ರಾಮಗಳಲ್ಲಿ ನಿಯಮಿತ ಶಿಬಿರಗಳನ್ನು ನಡೆಸಬೇಕು. ಬುಡಕಟ್ಟು ಜನರಿಗೆ ಸರ್ಕಾರದಿಂದ ಪಡಿತರ ಚೀಟಿಗಳು, ಆಧಾರ್, ಜಾಬ್ ಕಾರ್ಡ್‌ಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡಬೇಕು” ಎಂದು ಬುಡಕಟ್ಟು ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ ಎಂ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಕಮಹಾದೇವಿ, ಬಸವಣ್ಣ, ಅಲ್ಲಮಪ್ರಭು ಮಾತನಾಡುವ ರೊಬೋಟಿಕ್ ಪುತ್ಥಳಿಗಳ ನಿರ್ಮಾಣ: ಈಶ್ವರ ಖಂಡ್ರೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ...

ಬಸವಣ್ಣನವರ ಸಮಾನತೆಯ ಕನಸು ಇನ್ನೂ ನನಸಾಗಿಲ್ಲ: ಸಿದ್ದರಾಮಯ್ಯ ವಿಷಾದ

ಜಾತಿ ತಾರತಮ್ಯ, ಅಸ್ಪೃಶ್ಯತೆ, ಲಿಂಗಭೇದ ಹಾಗೂ ಸಾಮಾಜಿಕ ಅಸಮಾನತೆಗಳ ವಿರುದ್ಧ 12ನೇ...

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಟೆಕ್ನೋ ಆಯುರ್ವೇದ ಅಭಿವೃದ್ಧಿಗೆ ಪೂರಕ: ಗುಂಡಪ್ಪಗೌಡ

ಭಾರತದ ಸಾಂಪ್ರದಾಯಿಕ ವೈದ್ಯ ಪದ್ಧತಿಯಾದ ಆಯುರ್ವೇದಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡುವುದರಿಂದ...