ಮೈಸೂರು | ಅಪ್ರಾಪ್ತೆಯೊಂದಿಗೆ ವಿವಾಹ; ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Date:

ಮೈಸೂರು ಜಿಲ್ಲೆಯಲ್ಲಿ ಅಪ್ರಾಪ್ತೆಯನ್ನು ಮದುವೆಯಾಗಿದ್ದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿರುವ ಕಮಲಮ್ಮ ಗುರುಮಲ್ಲಪ್ಪ ಛತ್ರದಲ್ಲಿ ಹಾಡ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಕ್ಲಾಸ್ 1 ಸಿವಿಲ್ ಗುತ್ತಿಗೆದಾರ ಹರೀಶ್ ಕುಮಾರ್ 2023ರ ಫೆಬ್ರವರಿ 15ರಂದು 17 ವರ್ಷದ ಬಾಲಕಿಯನ್ನು ಮದುವೆಯಾಗಿದ್ದು, ಇಬ್ಬರೂ ಒಂದೇ ಜಾತಿ ಮತ್ತು ಗ್ರಾಮದವರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಮಹೇಶ್ ನೇತೃತ್ವದಲ್ಲಿ ಹರಿಯೂರು ಗ್ರಾಮಸ್ಥರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ (ಸಿಡಿಪಿಒ) ದೂರು ನೀಡಿದ್ದರು. ಆ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹರೀಶ್ ಕುಮಾರ್ ಫೆಬ್ರವರಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದು, ಮದುವೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಆಧಾರ್ ಕಾರ್ಡ್‌ನಲ್ಲಿ ಹುಟ್ಟಿದ ದಿನಾಂಕವನ್ನು ಬದಲಾಯಿಸಿದ್ದಾರೆ. ಆದರೆ, ಶಾಲಾ ದಾಖಲೆಗಳ ಪ್ರಕಾರ, ಬಾಲಕಿಯ ಜನ್ಮ ದಿನಾಂಕ 19 ನವೆಂಬರ್ 2005 ಆಗಿದ್ದು, ಅವಳು ಹುರಾ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ. ಬಾಲಕಿ ಗರ್ಭಿಣಿಯಾಗಿದ್ದಾಳೆ. ರಾಜಕೀಯ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿರುವ ಹರೀಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮಹೇಶ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? 5 ಕೋಟಿ ವಂಚನೆ ಪ್ರಕರಣ: 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ

ದೂರಿನ ಆಧಾರದ ಮೇಲೆ ಸಿಡಿಪಿಒ ಅಧಿಕಾರಿಗಳು ಶಾಲಾ ಪ್ರಮಾಣಪತ್ರಗಳು ಮತ್ತು ಗರ್ಭಧಾರಣೆಯನ್ನು ದೃಢೀಕರಿಸಲು ಆಸ್ಪತ್ರೆಯ ವರದಿಗಳನ್ನು ಪರಿಶೀಲಿಸಿದರು. ನಂತರ ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಸುಶೀಲಾ ಎಸ್ ಬಿ ಅವರು ಹರೀಶ್ ಕುಮಾರ್ ವಿರುದ್ಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 376 (2) ಎನ್ (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು), ಪೋಕ್ಸೊ ಕಾಯ್ದೆ, 2012 ಮತ್ತು ಸೆಕ್ಷನ್ 9, 10 ಮತ್ತು 11 (ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ವಿಜಯಪುರ | ಭಾರತೀಯರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು: ಡಾ. ಅಸಂಗ ವಾಂಖೇಡೆ

ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ...