ಮೈಸೂರು | ವಿವಿ ಕುಲಪತಿ ನೇಮಕಕ್ಕೆ ಸಂಶೋಧಕ ಸದಸ್ಯರ ಆಗ್ರಹ

Date:

ಆಡಳಿತಾತ್ಮಕ ಹಿತದೃಷ್ಠಿಯಿಂದ ಮೈಸೂರು ವಿಶ್ವವಿದ್ಯಾಲಯಕ್ಕೆ ಕುಲಪತಿ ಅಥವಾ ಪ್ರಭಾರ ಕುಲಪತಿಯನ್ನು ಕೂಡಲೇ ನೇಮಕ ಮಾಡಬೇಕು ಎಂದು ಒತ್ತಾಯಿಸಿ ಸಂಶೋಧಕರ ಸಂಘದ ಸದಸ್ಯರು ಮೈಸೂರು ನಗರದ ಕ್ರಾಫರ್ಡ್ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷ ಮರಿದೇವಯ್ಯ ಎಸ್ ಮಾತನಾಡಿ, “ವಿಶ್ವವಿದ್ಯಾಲಯದಲ್ಲಿ ಕಳೆದ ಮೂರು ತಿಂಗಳಿನಿಂದ ಕುಲಪತಿಗಳಿಲ್ಲದೆ, ಸಂಶೋಧಕರ ಹಾಗೂ ವಿದ್ಯಾರ್ಥಿಗಳ ಸಣ್ಣಪುಟ್ಟ ಸಮಸ್ಯೆಗಳೂ ಬಗೆಹರಿಯದ ಪರಿಸ್ಥಿತಿ ಎದುರಾಗಿದೆ. ಕುಲಸಚಿವರಿಗೆ ಅಧಿಕಾರ ನೀಡಿದ್ದರೂ ಅವರು ಸಮಸ್ಯೆಗೆ ಸ್ಪಂದಿಸುತ್ತಿಲ್ಲ” ಎಂದು ಆರೋಪಿಸಿದರು.

“ವಿಶ್ವವಿದ್ಯಾನಿಲಯದ ಸ್ವಜನಪಕ್ಷಪಾತ, ಭ್ರಷ್ಟಾಚಾರ, ವಿದ್ಯಾರ್ಥಿ ವಿರೋಧಿ ನಡೆಯಿಂದ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಮೂಲಸೌಕರ್ಯಗಳಿಲ್ಲದೆ ಬೀದಿಗೆ ಬರುವಂತಾಗಿದೆ. ಸೆ.21ರವರೆಗೆ ಯುವರಾಜ ಕಾಲೇಜಿನಲ್ಲಿ ಪರೀಕ್ಷೆಗಳಿದ್ದರೂ ಹಾಸ್ಟೆಲ್‌ಗಳನ್ನು ಈಗಾಗಲೇ ಮುಚ್ಚಿರುವುದು ಖಂಡನಿಯ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಂಪೂರ್ಣ ಬಳಸಿ; ಜಿಲ್ಲಾಧಿಕಾರಿ ಸೂಚನೆ

“ನ್ಯಾಯಾಲಯದ ಆದೇಶ ಬರುವವರೆಗೆ ವಿಶ್ವವಿದ್ಯಾಲಯಕ್ಕೆ ಪ್ರಭಾರ ಕುಲಪತಿ ಅಥವಾ ಪ್ರಾದೇಶಿಕ ಆಯುಕ್ತರನ್ನು ಮೇಲಸ್ತುವಾರಿಯನ್ನಾಗಿ ನೇಮಕ ಮಾಡಿ, ಸಮಸ್ಯೆ ಬಗೆಹರಿಸಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಸಂಶೋಧಕ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲುಷಿತ ನೀರು ಸೇವನೆ | ಕೆ.ಸಾಲುಂಡಿ ಗ್ರಾಮದ ಯುವಕ ಸಾವು; ಕಾರಣ ಪತ್ತೆ ಹಚ್ಚಲು ಸಿಎಂ ಸೂಚನೆ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ...

ಮೈಸೂರು | ಚೆಕ್ ದುರುಪಯೋಗ; ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು

ವ್ಯವಹಾರದ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್‌ಅನ್ನು​​ ದುರುಪಯೋಗ ಮಾಡಿಕೊಂಡ...

ಆದಿವಾಸಿ, ಬುಡಕಟ್ಟು ಸಮುದಾಯಗಳ ಅಭಿವೃದ್ದಿಗೆ ಮೀಸಲಿದ್ದ 6.9 ಕೋಟಿ ರೂ. ಅನುದಾನ ದುರ್ಬಳಕೆ; ಅರೋಪ

ರಾಜ್ಯದ ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಯೋಜನೆ/ಕಾರ್ಯಕ್ರಮಗಳ ಕುರಿತು ಅರಿವು...

ಮೈಸೂರು | ಭತ್ತದ ಗದ್ದೆಗೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್;‌ 40ಕ್ಕೂ ಅಧಿಕ ಮಂದಿಗೆ ಗಾಯ

ಭತ್ತದ ಗದ್ದೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ ಬಿದ್ದಿದ್ದು, 40ಕ್ಕೂ ಹೆಚ್ಚು ಮಂದಿ...