ಮೈಸೂರು | ಜೆಡಿಎಸ್‌ ನಾಯಕರ ವಿರುದ್ಧ ಅಸಮಾಧಾನ; ಪಕ್ಷ ತೊರೆಯಲು ಸಜ್ಜಾದ ಅಬ್ದುಲ್ ಅಜೀಜ್

Date:

ಪಕ್ಷದ ಮುಖಂಡರೊಂದಿಗೆ ಅಸಮಾಧಾನ ಹೊಂದಿರುವ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್ ತಮ್ಮ ಬೆಂಬಲಿಗರೊಂದಿಗೆ ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ. ಪಕ್ಷ ತೊರೆಯುವುದು ಅಥವಾ ಮುಂದುವರೆಯುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

“ಪಕ್ಷದ ಮುಖಂಡರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವಾಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ, ಪಕ್ಷದಲ್ಲಿ ಮುಂದುವರೆಯುವ ಬಗ್ಗೆ ಶೀಘ್ರವೇ ನಿರ್ಧರಿಸುತ್ತೆನೆ” ಎಂದು ಅಜೀಜ್ ಸಭೆಯಲ್ಲಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ನರಸಿಂಹರಾಜ ಕ್ಷೇತ್ರದಲ್ಲಿ ಪಕ್ಷವನ್ನು ಕಟ್ಟಿದ್ದೇನೆ. ಈ ಬಾರಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಕೇಳಿದ್ದೆ. ಆದರೆ, ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ನಾಲ್ಕು ತಿಂಗಳ ಹಿಂದೆ ನನ್ನೊಂದಿಗೆ ಮಾತನಾಡಿ, ‘ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿದರು. ನಾನು ಅವರನ್ನು ಸ್ವಾಗತಿಸಿದರೂ ಪಕ್ಷದ ನಾಯಕರು ನಮ್ಮನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“2018 ರಲ್ಲಿ, ನನಗೆ ಕೊನೆಯ ಕ್ಷಣದಲ್ಲಿ ಪಕ್ಷದ ಟಿಕೆಟ್ ನೀಡಲಾಯಿತು. ಅದು ನನ್ನ ಗೆಲುವಿನ ಸಾಧ್ಯತೆಯ ಮೇಲೆ ಪರಿಣಾಮ ಬೀರಿತು. ಈ ವರ್ಷವೂ ಅಭ್ಯರ್ಥಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬ ತಂತ್ರ ಅನುಸರಿಸಲಾಗುತ್ತಿದೆ. ಪಕ್ಷ ಟಿಕೆಟ್ ನೀಡಿದರೂ ನಾನು ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿ ಆರ್ ಪಾಟೀಲ್ ಪತ್ರಕ್ಕೆ ಉತ್ತರಿಸಲಾರೆ, ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ: ಕೃಷ್ಣಬೈರೇಗೌಡ

ಅನಗತ್ಯವಾಗಿ ವಿವಾದ ಸೃಷ್ಟಿಸಲು ನಾನು ಇಲ್ಲಿಗೆ ಬಂದಿಲ್ಲ ಇಷ್ಟಕ್ಕೂ ಸದರಿ...

ಸಿಬಿಐ ತನಿಖೆ ವಾಪಸ್ ವಿಚಾರ: ಡಿಕೆ ಶಿವಕುಮಾರ್‌ಗೆ ತಾತ್ಕಾಲಿಕ ನೆಮ್ಮದಿ ನೀಡಿದ ಹೈಕೋರ್ಟ್‌

ತಮ್ಮ ವಿರುದ್ಧದ ಸಿಬಿಐ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟ್‌ನಲ್ಲಿ...

ವಿಜಯಪುರ | ಅಯ್ಯಪ್ಪ ಹುಟ್ಟಿನ ಬಗ್ಗೆ ಅವಹೇಳನ; ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ...

ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು...