ಮೈಸೂರು | ಬಿಜೆಪಿಗೆ ತಕ್ಕಂತೆ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

Date:

ಕೇಂದ್ರ ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲವಾಗುವ ರೀತಿ ಎಸ್ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -

ಮೈಸೂರು ನಗರದ ಜಿ ಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಭಾಗೀಯ ಮಟ್ಟದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಚುನಾವಣಾ ಆಯೋಗವು ಯಾವುದೇ ಪಕ್ಷಪಾತ ಇಲ್ಲದೆ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಈ ಹಿಂದೆ ಮತದಾರರ ಪಟ್ಟಿ ಪರಿಷ್ಕರಣೆ ನಡೆದಾಗ ಚುನಾವಣಾ ಆಯೋಗ ಹೊಸದಾಗಿ ಮತದಾರರನ್ನು ಸೇರಿಸುತ್ತಿತ್ತೇ ಹೊರತು, ಪಟ್ಟಿಯಿಂದ ತೆಗೆದು ಹಾಕುತ್ತಿರಲಿಲ್ಲ. ಮತದಾರರ ದಾಖಲೆಗಳನ್ನೂ ಕೇಳುತ್ತಿರಲಿಲ್ಲ. ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ತಮಿಳುನಾಡು ಮತ್ತು ಬಿಹಾರದಲ್ಲಿ ಬಿಜೆಪಿಗೆ ಹೆಚ್ಚು ಲಾಭವಾಗುವಂತೆ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ” ಎಂದು ದೂರಿದರು.

“ಎಸ್‌ಐಆರ್ ಪ್ರಕ್ರಿಯೆ ನಡೆಯುವಾಗ ಅರ್ಜಿಯಲ್ಲಿ ತಪ್ಪು ಮಾಹಿತಿ ಕೊಟ್ಟರೆ ಅವರ ಹೆಸರು ಅಂತಿಮ ಪಟ್ಟಿಯಲ್ಲಿ ಬರುವುದೇ ಇಲ್ಲ. ಹಾಗಾಗಿ, ನಮ್ಮ ಬಿಎಲ್​ಒಗಳು ಪ್ರತಿ ಮತದಾರರು ಅರ್ಜಿ ಸಲ್ಲಿಸುವಾಗ ಸಹಾಯ ಮಾಡಬೇಕು. ಮಾಹಿತಿ ಸರಿ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಸ್ವಲ್ಪ ಎಚ್ಚರ ತಪ್ಪಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯದಲ್ಲಿ ಹಾನಿಯಾಗುವುದು ನಿಶ್ಚಿತ” ಎಂದು ಕಳವಳ ವ್ಯಕ್ತಪಡಿಸಿದರು.

“ಮತದಾರರಿಗೆ ಆಯೋಗ ಕೇಳಿರುವ 11 ದಾಖಲೆಗಳು ಸುಲಭವಾಗಿ ಸಿಗಲು ಸರ್ಕಾರ ಕ್ರಮಗಳನ್ನು ಕೈಗೊಂಡಿದ್ದು, ಗ್ರಾಮ ಪಂಚಾಯಿತಿ ಹಾಗೂ ನಗರ ಪಾಲಿಕೆ ಮಟ್ಟದಲ್ಲಿ ದಾಖಲೆಗಳು ಸಿಗಲಿವೆ. ಈ ದಾಖಲೆಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಬೇಕು” ಎಂದು ತಿಳಿಸಿದರು.

“ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸರಿಯಾದ ಮಾಹಿತಿ ಒದಗಿಸದಿದ್ದರೆ ಪೌರತ್ವವೇ ರದ್ದಾಗಬಹುದು. ಸರ್ಕಾರಿ ಸೌಲಭ್ಯಗಳು ಸಿಗದೇ ಹೋಗಬಹುದು. ಹಾಗಾಗಿ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ನಮ್ಮ ಪಕ್ಷದ ಬಿಎಲ್​​ಒಗಳು ಆ ದಾಖಲೆಗಳು ಹಾಗೂ ಸಮಗ್ರ ಪ್ರಕ್ರಿಯೆ ಕುರಿತು ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಬೇಕಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಕ್ಕಳಲ್ಲಿ ಪರಿಸರ ಜಾಗೃತಿ ಬೆಳೆಸುವುದು ಅಗತ್ಯ: ಎಂ.ಎನ್. ಮಧ್ಯಸ್ಥ

ಜನಜಾಗೃತಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಕಾರ್ಯಾಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ವಿ ಆರ್ ಸುದರ್ಶನ್, ಜಿಲ್ಲಾಧ್ಯಕ್ಷ ಬಿ ಜೆ ವಿಜಯಕುಮಾರ್, ಮಾಜಿ ಸಚಿವರಾದ ಡಾ. ಎ‌ಚ್‌ ಸಿ ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ತನ್ವೀರ್ ಸೇಠ್ ಸೇರಿದಂತೆ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...