ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

Date:

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು ₹50 ಲಕ್ಷ ಅನುದಾನ ನೀಡುವುದಾಗಿ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಘೋಷಿಸಿದ್ದಾರೆ.

- Advertisement -

ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ₹25 ಲಕ್ಷ ಹಾಗೂ ಮುಂದಿನ ವರ್ಷ ಮತ್ತೊಂದು ₹25 ಲಕ್ಷ ಅನುದಾನ ನೀಡಲಾಗುವುದು ಎಂದು ತಿಳಿಸಿದರು. ಪತ್ರಕರ್ತರ ಸಂಘದ ನೂತನ ಭವನದ ನಿರ್ಮಾಣ ಕಾರ್ಯ ಆದಷ್ಟು ಬೇಗ ಪೂರ್ಣಗೊಂಡು ಪತ್ರಕರ್ತರಿಗೆ ಅನುಕೂಲವಾಗಲಿ ಎಂದು ಆಶಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಮೈಸೂರು ಸಂಸ್ಥಾನದ ಅವಧಿಯಲ್ಲೇ ಆರಂಭಗೊಂಡು, ಇಂದಿಗೂ ಸಂಘಟನಾತ್ಮಕವಾಗಿ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಯದುವೀರ ಒಡೆಯರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ತಮ್ಮ ತಂದೆಯವರಾದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಪತ್ರಕರ್ತರ ಸಂಘದ ಈಗಿನ ಭವನಕ್ಕೆ ಅನುದಾನ ನೀಡಿ ಪ್ರೋತ್ಸಾಹಿಸಿದ್ದನ್ನು ಸ್ಮರಿಸಿದ ಅವರು, ಇದೀಗ ತಮಗೂ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ನೆರವು ನೀಡುವ ಅವಕಾಶ ದೊರೆತಿರುವುದು ಸೌಭಾಗ್ಯ ಎಂದರು. “ಮುಂದಿನ ದಿನಗಳಲ್ಲಿ ನಿರ್ಮಾಣವಾಗಲಿರುವ ನೂತನ ಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಮೊದಲ ಹಂತದಲ್ಲಿ ₹25 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು. ಅಗತ್ಯಕ್ಕೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ನೀಡಲು ಸಹಕರಿಸಲಾಗುವುದು” ಎಂದು ಅವರು ಭರವಸೆ ನೀಡಿದರು.

ಈ ವಿಶೇಷ ವರದಿ ಓದಿದ್ದೀರಾ? ‘SIR’ Form-7: ಕೊಡಗಿನ ಬ್ಯಾಡಗೊಟ್ಟದಲ್ಲಿ 64 ಮತದಾರರ ಹೆಸರು ಅಳಿಸಲು ಯತ್ನ; ಐವರ ವಿರುದ್ಧ FIR

ಸಂಸದರ ಈ ಘೋಷಣೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಉಪಾಧ್ಯಕ್ಷ ರವಿ ಪಾಂಡವಪುರ, ಖಜಾಂಚಿ ಎನ್. ಸುರೇಶ್, ಗ್ರಾಮೀಣ ಕಾರ್ಯದರ್ಶಿ ದಾರಾ ಮಹೇಶ್, ಕಾರ್ಯಕಾರಿಣಿ ಸದಸ್ಯ ಸೋಮಶೇಖ್ ಚಿಕ್ಕಮರಳ್ಳಿ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹರ್ಷ ವ್ಯಕ್ತಪಡಿಸಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

ಹಾವೇರಿ | ಕವಲೆತ್ತು ನದಿ ಪಕ್ಕ ಮೆಟ್ಟಿಲು ನಿರ್ಮಿಸಲು ಡಿಸಿಗೆ ಗ್ರಾಮಸ್ಥರು ಮನವಿ

ರಾಣಿಬೆನ್ನೂರ ತಾಲೂಕಿನ ಕವಲೆತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆಯ ತುಂಗಭದ್ರಾ...

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...