ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

Date:

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ ಹಾಡುಗಳ ಆಡಿಯೊ ಆಲ್ಬಂ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು.

- Advertisement -

ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪ ಅವರ ಸಾಹಿತ್ಯ ರಚನೆಯಲ್ಲಿ ಮೂಡಿಬಂದಿರುವ ‘ದಸರಾ’ ಹಾಗೂ ‘ಅಭಿಮನ್ಯು ಬೀಳ್ಕೊಡುಗೆ’ ಹಾಡುಗಳ ಆಡಿಯೊ ಆಲ್ಬಂ ಅನ್ನು ಕೃಷ್ಣಮೂರ್ತಿಪುರಂನ ಬಿಎಸ್‌ಎಸ್‌ ವಿದ್ಯೋದಯ ಸಂಸ್ಥೆಯ ಸಭಾಂಗಣದಲ್ಲಿ ಗಣ್ಯರು ಬಿಡುಗಡೆ ಮಾಡಿದರು. ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್‌, ಸ್ಕಾಲ್ ಇಂಟರ್‌ನ್ಯಾಷನಲ್‌, ಮೈಸೂರು ಗೈಡ್ಸ್ ಅಸೋಸಿಯೇಷನ್‌, ಮೈಸೂರು ಚೇಂಬರ್‌ ಆಫ್‌ ಕಾಮರ್ಸ್‌, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ದಸರಾ ಹಾಗೂ ಅಭಿಮನ್ಯುವಿನ ಕುರಿತ ಆಡಿಯೊ ಆಲ್ಬಂ ಮತ್ತು ಛಾಯಾಚಿತ್ರ ಪ್ರದರ್ಶನ ಉತ್ತಮವಾಗಿ ಮೂಡಿಬಂದಿವೆ. ದಸರಾ ಇತಿಹಾಸದಲ್ಲಿ ಅಭಿಮನ್ಯುವಿಗೆ ಪ್ರಮುಖ ಸ್ಥಾನವಿದ್ದು, ಆನೆಯ ನಿವೃತ್ತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ರೀತಿಯ ಅರ್ಥಪೂರ್ಣ ಬೀಳ್ಕೊಡುಗೆ ಕಾರ್ಯಕ್ರಮಗಳು ವಿಶೇಷ ಮಹತ್ವ ಪಡೆದುಕೊಳ್ಳುತ್ತವೆ. ಇಂತಹ ಪ್ರಯತ್ನಗಳ ಮೂಲಕ ಮೈಸೂರಿನ ವೈಶಿಷ್ಟ್ಯವನ್ನು ಪ್ರವಾಸಿಗರಿಗೆ ಪರಿಚಯಿಸಬೇಕು ಎಂದರು.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್‌ ಅಧ್ಯಕ್ಷ ಬಿ.ಎಸ್. ಪ್ರಶಾಂತ್ ಮಾತನಾಡಿ, ಹಿಂದೆ ಮನೆಗಳಲ್ಲಿ ಬೆಳಗ್ಗೆ ಎದ್ದಾಗ ಸುಮಧುರ ಹಾಡುಗಳು ಕೇಳಿಬರುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಆ ಸಂಸ್ಕೃತಿ ನಿಧಾನವಾಗಿ ಮರೆಯಾಗುತ್ತಿದೆ. ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡುಗಳು ಆ ಹಳೆಯ ನೆನಪನ್ನು ಮತ್ತೆ ಮೂಡಿಸಿವೆ. ಇಂತಹ ಹಾಡುಗಳು ಮೈಸೂರಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವಂತಾಗಬೇಕು ಎಂದರು.

Advertisements

ದಸರಾ ಸಂದರ್ಭದಲ್ಲಿ ತಪ್ಪುಗಳನ್ನು ಹುಡುಕುವುದಕ್ಕಿಂತ ಹೊಸ ಆಲೋಚನೆಗಳೊಂದಿಗೆ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ. ಮೈಸೂರನ್ನು ‘ವೀಕೆಂಡ್ ಡೆಸ್ಟಿನೇಷನ್’ ಆಗಿ ಅಭಿವೃದ್ಧಿಪಡಿಸಲು ಸಂಜೆ ವೇಳೆ ಗನ್‌ಹೌಸ್‌ ಕಡೆಯಿಂದ ಪೊಲೀಸ್‌ ಬ್ಯಾಂಡ್‌, ಕಲಾತಂಡಗಳು, ಪೊಲೀಸ್‌ ವಾದ್ಯವೃಂದ ಹಾಗೂ ಮೌಂಟೆಡ್‌ ಪೊಲೀಸ್‌ ಒಳಗೊಂಡ ಮಿನಿ ಮೆರವಣಿಗೆ ಆಯೋಜಿಸಬಹುದು ಎಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಪಿ. ಜ್ಞಾನ ಪ್ರಕಾಶ್ ಮಾತನಾಡಿ, ದಸರಾ ಆಚರಣೆ ಕೇವಲ ಒಂದು ತಿಂಗಳಿಗೆ ಸೀಮಿತವಾಗಬಾರದು. ಅಭಿಮನ್ಯುವಿನ ನಿವೃತ್ತಿ ಹಾಗೂ ಬೀಳ್ಕೊಡುಗೆ ಮೈಸೂರಿನ ಪ್ರವಾಸೋದ್ಯಮವನ್ನು ಮತ್ತಷ್ಟು ಬೆಳೆಸಲು ಉತ್ತಮ ಅವಕಾಶವಾಗಿದೆ. ಮೈಸೂರಿನ ವೈಶಿಷ್ಟ್ಯ, ಸಂಗೀತ ಮತ್ತು ಸಾಹಿತ್ಯವನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಬೇಕು ಎಂದರು.

ಈ ವಿಶೇಷ ವರದಿ ಓದಿದ್ದೀರಾ? SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ಕಾರ್ಯಕ್ರಮದಲ್ಲಿ ಕರ್ನಾಟಕ ಪೊಲೀಸ್‌ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್‌ ಕುಮಾರ್, ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಅಧ್ಯಕ್ಷ ಎ.ಪಿ. ನಾಗೇಶ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಚೇಂಬರ್‌ ಆಫ್‌ ಕಾಮರ್ಸ್‌ ಅಧ್ಯಕ್ಷ ಡಾ. ಕೆ.ಬಿ. ಲಿಂಗರಾಜು, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ನಂಜಯ್ಯ ಹೊಂಗನೂರು, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್‌ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ಕೆ.ವಿ. ಮಲ್ಲೇಶ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ವೈ.ಡಿ. ರಾಜಣ್ಣ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಅಹಿಂದ ಕೆ.ಎಸ್. ಶಿವರಾಮು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...