ಮೈಸೂರು | ಟೈಲರಿಂಗ್ ವೃತ್ತಿಯ ಅಭಿವೃದ್ಧಿಗೆ ಒಗ್ಗಟ್ಟಿನ ಹೆಜ್ಜೆ: ಜಿ.ಟಿ. ದೇವೇಗೌಡ

Date:

ಮೈಸೂರು ನಗರದ ಹೂಟಗಳ್ಳಿಯಲ್ಲಿ ಶ್ರೀ ಭುವನೇಶ್ವರಿ ಟೈಲರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

- Advertisement -

ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಸ್ಥಳೀಯ ಮಾಲೀಕರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ, ಅವರ ಹಿತಾಸಕ್ತಿ, ವೃತ್ತಿಯ ಅಭಿವೃದ್ಧಿ ಹಾಗೂ ಪರಸ್ಪರ ಸಹಕಾರವನ್ನು ಉತ್ತೇಜಿಸುವ ಉದ್ದೇಶದಿಂದ ಸಂಘವನ್ನು ಸ್ಥಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಅರ್ಹರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಒದಗಿಸುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಹಕರಿಸುವುದಾಗಿ ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚಂದ್ರಿಕಾ ಸುರೇಶ್ ಮಾತನಾಡಿ, ಸಂಘದ ಸದಸ್ಯರಿಗೆ ಅಗತ್ಯವಿರುವ ಸಂದರ್ಭದಲ್ಲಿ ಬೆಂಬಲ ಮತ್ತು ಸಹಕಾರ, ಸಂಘದ ಅಭಿವೃದ್ಧಿ ಹಾಗೂ ಸದಸ್ಯರ ಹಿತಾಸಕ್ತಿಗಾಗಿ ಸದಾ ಬೆನ್ನೆಲುಬಾಗಿ ನಿಲ್ಲುವುದಾಗಿ ಹೇಳಿದರು.

ಪಿ.ಜಿ.ಆರ್.ಎಸ್.ಎಸ್. ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಅಧ್ಯಕ್ಷ ಯಾದವ್ ಹರೀಶ್ ಮಾತನಾಡಿ, ಸಂಘದ ಕಾರ್ಯಚಟುವಟಿಕೆಗಳಿಗೆ ಹಾಗೂ ಸದಸ್ಯರ ಹಿತಾಸಕ್ತಿಗಾಗಿ ಅಗತ್ಯವಿರುವ ಸಂದರ್ಭದಲ್ಲಿ ಸಹಕಾರ ಮತ್ತು ಬೆಂಬಲ ನೀಡುವುದಾಗಿ ತಿಳಿಸಿದರು. ಚಿರಂಜೀವ ಸೇವಾ ಟ್ರಸ್ಟ್, ಮೈಸೂರು ಅಧ್ಯಕ್ಷ ಹಾಗೂ ರಕ್ತದಾನಿ ಮಂಜು ಮಾತನಾಡಿ, ಸಂಘದ ಮುಂದಿನ ಪಯಣದಲ್ಲಿ ಅಗತ್ಯವಿರುವ ಎಲ್ಲ ರೀತಿಯ ಬೆಂಬಲ ಮತ್ತು ಮಾರ್ಗದರ್ಶನ ನೀಡುವುದಾಗಿ ಹೇಳಿದರು.

ಸಂಘದ ಅಧ್ಯಕ್ಷ ಮಣಿ ಮಾತನಾಡಿ, ಮುಂದಿನ ದಿನಗಳಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಎಲ್ಲರನ್ನೂ ಸಂಘದೊಂದಿಗೆ ಸಂಪರ್ಕಿಸುವ ಪ್ರಯತ್ನ ಮಾಡಲಾಗುವುದು. ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯ ಮಾರ್ಗದರ್ಶನ, ಸಹಕಾರ ಹಾಗೂ ಸಾಧ್ಯವಾದಷ್ಟು ನೆರವು ಒದಗಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಂಘದ ಪದಾಧಿಕಾರಿಗಳು, ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವವರ ಸಮಸ್ಯೆಗಳಿಗೆ ಸ್ಪಂದಿಸುವುದು, ಅಗತ್ಯವಿರುವವರಿಗೆ ನೆರವು ನೀಡುವುದು ಹಾಗೂ ವೃತ್ತಿಯ ಅಭಿವೃದ್ಧಿಗೆ ಪೂರಕವಾಗುವ ವಿವಿಧ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಕೆಎಚ್‌ಬಿ/ಎನ್‌ಎಚ್‌ಬಿ ಬಡಾವಣೆ, ಜಿ.ಟಿ. ಲೇಔಟ್ ಬಡಾವಣೆ, ಬೆಳವಾಡಿ, ಕೂರ್ಗಳ್ಳಿ ಹಾಗೂ ಹೂಟಗಳ್ಳಿ ಭಾಗದ ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...