ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

Date:

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ (ದಸಂಸ) ಆಗ್ರಹಿಸಿದೆ.

- Advertisement -

ಪ್ರಚಾರಕ್ಕಾಗಿ ಹಾಗೂ ಬಿಜೆಪಿ ಕೇಂದ್ರ ನಾಯಕರನ್ನು ಓಲೈಸುವ ಉದ್ದೇಶದಿಂದ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸಿ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ಭೇದಭಾವ ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ದಸಂಸ ಮುಖಂಡರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ʼಮಹಾಭಾರತʼ ಟಿವಿ ಧಾರಾವಾಹಿಗೆ ಅವಿಸ್ಮರಣೀಯ ಸಂಭಾಷಣೆ ಬರೆದಿದ್ದ ಈ...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಟಿ ನರಸೀಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಸತ್ತಾತ್ಮಕ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಮೇಲೆ ರಾಜಕೀಯ ಒತ್ತಡ ತರುವ ಪ್ರಯತ್ನ ಸಲ್ಲದು ಎಂದರು.

ತಿರುಮಕೂಡಲು ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶೋತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಸೂಚನೆ ನೀಡಿದ್ದಾರೆ. ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳ ಸಮೀಪ ಪ್ರಚೋದನಕಾರಿ ವರ್ತನೆ, ಘೋಷಣೆ, ಪಟಾಕಿ ಸಿಡಿಸುವುದು ಅಥವಾ ಇತರರಿಗೆ ಅಸಮಾಧಾನ ಉಂಟುಮಾಡುವ ರೀತಿಯಲ್ಲಿ ನಡೆದುಕೊಳ್ಳದಂತೆ ತಿಳಿಸಿರುವುದು ಕಾನೂನು ಸುವ್ಯವಸ್ಥೆ ಕಾಪಾಡುವ ಕ್ರಮವಾಗಿದೆ ಎಂದು ದಸಂಸ ಮುಖಂಡರು ಹೇಳಿದರು.

ಆದರೆ, ಈ ವಿಚಾರವನ್ನು ತಪ್ಪಾಗಿ ಅರ್ಥೈಸಿಕೊಂಡು ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಸ್ಥಳೀಯವಾಗಿ ಕಾನೂನು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಧನಂಜಯ್ ಅವರ ವಿರುದ್ಧ ರಾಜಕೀಯವಾಗಿ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳಿದ್ದು, ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಕೂಡ ಕೆಲವು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದ ಘಟನೆಗಳನ್ನು ಉಲ್ಲೇಖಿಸಿದ ದಸಂಸ ಮುಖಂಡರು, ಇಂತಹ ಬೆಳವಣಿಗೆಗಳು ಸಮಾಜದಲ್ಲಿ ಅನಗತ್ಯ ಉದ್ವಿಗ್ನತೆ ಸೃಷ್ಟಿಸಬಹುದು ಎಂದು ಹೇಳಿದರು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂತಹ ರಾಜಕೀಯ ಬೆಳವಣಿಗೆಗಳಲ್ಲಿ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಸಂಸ ಮುಖಂಡರು ಹೇಳಿದರು.

ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಧನಂಜಯ್ ಅವರಿಗೆ ಯಾವುದೇ ರೀತಿಯ ರಾಜಕೀಯ ಒತ್ತಡ ಅಥವಾ ಅಡ್ಡಿ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಸಂಚಾಲಕ ದೇವಗಳ್ಳಿ ಸೋಮಶೇಖರ್, ಶ್ರೀಕಂಠಸ್ವಾಮಿ, ರಾಜಶೇಖರ ಕೋಟೆ, ಪುಟ್ಟಮಾದಯ್ಯ, ಅಲಗೂಡು ಶಿವಣ್ಣ, ಲಿಂಗಯ್ಯ, ಎಂ. ರಾಜಶೇಖರ್, ಕಾಂತರಾಜ್, ಎಸ್.ಆರ್.ಎಸ್. ಮಂಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...