ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

Date:

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ, ವರ್ತಕರ ಮಂಡಳಿ, ರಾಜಸ್ಥಾನ್ ಸಂಘ, ರೋಟರಿ ಕ್ಲಬ್ ಹೆಚ್.ಡಿ.ಕೋಟೆ, ಸೈಂಟ್ ಮೇರೀಸ್ ನರ್ಸಿಂಗ್ ಕಾಲೇಜು ಹೆಚ್.ಡಿ.ಕೋಟೆ, ಜೈನ್ ಮಿಲನ್ ಸರಗೂರು ಸೇರಿದಂತೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಉಪಶಮನ ಆರೈಕೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಚಾಲನೆ ನೀಡಿದರು.

- Advertisement -

ಸಮುದಾಯ ಕಾರ್ಯಕ್ರಮದ ವ್ಯವಸ್ಥಾಪಕ ಕೆ. ವೆಂಕಟಸ್ವಾಮಿ ಮಾತನಾಡಿ, ವಿವೇಕಾನಂದ ಸ್ಮಾರಕ ಆಸ್ಪತ್ರೆಯ ವತಿಯಿಂದ 2023ರ ಜನವರಿ 12ರಂದು ಉಪಶಮನ ಆರೈಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಆರಂಭದಲ್ಲಿ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಾರ್ಯಕ್ರಮವನ್ನು ಪ್ರಸ್ತುತ 25 ಕಿಲೋಮೀಟರ್ ವ್ಯಾಪ್ತಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಕಾರ್ಯಕ್ರಮದಡಿ ವೈದ್ಯರು, ಶುಶ್ರೂಷಕರು, ಆಪ್ತಸಮಾಲೋಚಕರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡ ತಂಡವು ರೋಗಿಗಳ ಮನೆಗಳಿಗೆ ಭೇಟಿ ನೀಡಿ ಉಚಿತ ವೈದ್ಯಕೀಯ ಆರೈಕೆ ಸೇವೆ ಒದಗಿಸುತ್ತಿದೆ. ದೀರ್ಘಕಾಲದ ಅನಾರೋಗ್ಯ ಹಾಗೂ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅವರ ಮನೆಗಳಲ್ಲಿಯೇ ಅಗತ್ಯ ಆರೈಕೆ ಮತ್ತು ಸೇವೆ ನೀಡಲಾಗುತ್ತಿದೆ ಎಂದು ವಿವರಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್ ಮಾತನಾಡಿ, ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಉಪಶಮನ ಆರೈಕೆ ದಿನವನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯು ಕಳೆದ ನಾಲ್ಕು ವರ್ಷಗಳಿಂದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದ ಭಾಗವಾಗಿ ಜನಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.

ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾ ಹಾಸಿಗೆ ಹಿಡಿದಿರುವ ರೋಗಿಗಳನ್ನು ಗುರುತಿಸಿ, ಅವರ ಮನೆಗಳಿಗೆ ತೆರಳಿ ಆರೈಕೆ ಒದಗಿಸುವ ಕಾರ್ಯ ಶ್ಲಾಘನೀಯವಾಗಿದೆ. ಪ್ರಸ್ತುತ ಸುಮಾರು 25 ಕಿಲೋಮೀಟರ್ ವ್ಯಾಪ್ತಿಯಲ್ಲಿ 477ಕ್ಕೂ ಹೆಚ್ಚು ರೋಗಿಗಳಿಗೆ ಈ ಸೇವೆ ನೀಡಲಾಗುತ್ತಿದೆ. ಇಂತಹ ಮಾನವೀಯ ಸೇವೆಗಳ ಕುರಿತು ಹೆಚ್ಚಿನ ಜನರು ತಿಳಿದುಕೊಂಡು ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಸಾರ್ವಜನಿಕರಿಗೆ ಕರೆ ನೀಡಿದರು.

ಜಾಥಾ ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಸರಗೂರಿನ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಿಗೆ ಉಪಶಮನ ಆರೈಕೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಬಳಿಕ ಸರಗೂರು ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಜನಜಾಗೃತಿ ಮೂಡಿಸಲಾಯಿತು.

ಈ ವಿಶೇಷ ವರದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

ಕಾರ್ಯಕ್ರಮದಲ್ಲಿ ವರ್ತಕರ ಮಂಡಳಿ ಅಧ್ಯಕ್ಷ ಪ್ರಸಾದ್ ಎಸ್.ಪಿ., ಕಾರ್ಯದರ್ಶಿ ವೆಂಕಟೇಶ್, ರಾಜಸ್ಥಾನ್ ಸಂಘದ ಅಧ್ಯಕ್ಷ ಡಕ್ಲರಾಮ್, ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್ ಜೈನ್, ಸೈಂಟ್ ಮೇರೀಸ್ ನರ್ಸಿಂಗ್ ಕಾಲೇಜಿನ ಬೋಧಕಿ ಧನವತಿ, ಐನ್‌ಸ್ಟೈನ್ ವಿಭಾಗದ ಮುಖ್ಯಸ್ಥ ಡಾ. ಮನೋಹರ್ ಪ್ರಸಾದ್ ಹಾಗೂ ಎಂ.ಎಸ್. ರಾಮಯ್ಯ ಸಂಸ್ಥೆಯ ಎಂ.ಪಿ.ಎಚ್. ವಿದ್ಯಾರ್ಥಿಗಳು, ವಿವೇಕಾನಂದ ಸ್ಮಾರಕ ಆಸ್ಪತ್ರೆಯ ವ್ಯವಸ್ಥಾಪಕಿ ಸಂಧ್ಯಾ ಬಿ.ಜಿ., ಸಮುದಾಯ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿಗಳಾದ ನಂದೀಶ್, ಪ್ರತಾಪ್, ಮಂಜುಳ, ಮಮತಾ, ರಾಜೇಶ್, ಪ್ರವೀಣ್, ಸಂತೋಷ್, ಚನ್ನಪ್ಪ, ನಾಗರತ್ನ, ಪುಟ್ಟಮ್ಮ, ಪದ್ಮ, ಗೋಪಾಲಕೃಷ್ಣ, ಬಂಗಾರಶೆಟ್ಟಿ, ರಮೇಶ್ ಎಂ.ಪಿ., ರೂಪೇಶ್, ಪ್ರಮೋದ್, ಶ್ರೀಕಾಂತ್, ನವೀನ್, ಅಫ್ರೋಜ್ ಪಾಷ, ನಿಂಗರಾಜು ಹಾಗೂ ರುಚಿತ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ...

ಉಡುಪಿ | ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಾಹಿತ್ಯದ ಪಾತ್ರ ಮಹತ್ವದ್ದು

ಪ್ರಶ್ನೆಗಳನ್ನು ಎತ್ತುವುದಷ್ಟೇ ಮುಖ್ಯವಲ್ಲ; ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವೂ ಅಗತ್ಯ. ಸಾಹಿತ್ಯವು...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಇಂಡಿ |‌ ಜೋಡೆತ್ತು ಕೃಷಿಕರ ಪ್ರತಿಭಟನೆ; ಅಹವಾಲು ಆಲಿಸಿದ ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು...