ಕಾವೇರಿ ನೀರು ತಮಿಳುನಾಡಿಗೆ ಬಿಡುವ ಆದೇಶ ಖಂಡನೆ: ರಾಜ್ಯದ ರೈತರ ಹಿತರಕ್ಷಣೆಗೆ ಆಗ್ರಹಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ

Date:

ಕಾವೇರಿ ಜಲ ನಿಯಂತ್ರಣ ಸಮಿತಿ (CWRC) 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ಕರ್ನಾಟಕ ರಾಜ್ಯ ರೈತ ಸಂಘ ತೀವ್ರವಾಗಿ ಖಂಡಿಸಿದೆ. ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ಇಂತಹ ಆದೇಶವು ಅವೈಜ್ಞಾನಿಕ ಹಾಗೂ ರೈತ ವಿರೋಧಿಯಾಗಿದೆ ಎಂದು ಸಂಘ ಆರೋಪಿಸಿದೆ.

- Advertisement -

ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಹಾರಂಗಿ ಅಣೆಕಟ್ಟನ್ನು ಹೊರತುಪಡಿಸಿದರೆ ಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ. ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜಲಾನಯನ ವ್ಯಾಪ್ತಿಯ ಬೆಳೆಗಳು ನೀರಿನ ಕೊರತೆಯಿಂದ ಒಣಗುತ್ತಿವೆ. ಕೆರೆ-ಕಟ್ಟೆಗಳು ಬತ್ತಿ ಹೋಗಿರುವ ಸಂಕಷ್ಟದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿರುವುದು ಸಮಂಜಸವಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ರಾಜ್ಯ ಸರ್ಕಾರವು ಕಾವೇರಿ ನಿಯಂತ್ರಣ ಮಂಡಳಿಯ ಮುಂದೆ ಕೂಡಲೇ ಮೇಲ್ಮನವಿ ಸಲ್ಲಿಸಿ, ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢ ನಿಲುವು ತಾಳಬೇಕು ಎಂದು ಅವರು ಒತ್ತಾಯಿಸಿದರು. ಅಲ್ಲದೆ, CWRC ತೀರ್ಮಾನದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಾಗೂ ಚಳುವಳಿಗಳನ್ನು ಹಮ್ಮಿಕೊಳ್ಳುವ ಮೂಲಕ ರೈತರ ಧ್ವನಿಯನ್ನು ಸರ್ಕಾರ ಮತ್ತು ಸಂಬಂಧಿತ ಪ್ರಾಧಿಕಾರಗಳಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಇದೇ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ರೈತ ಸಂಘದ ವತಿಯಿಂದ ಜುಲೈ 29ರಂದು (ಬುಧವಾರ) ಬೆಳಿಗ್ಗೆ 11.30ಕ್ಕೆ ಮೈಸೂರು ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಆಯೋಜಿಸಲಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?SIR: ಸಂಬಂಧಗಳ ಗೊಂದಲ-ನಿವೃತ್ತ ಸೇನಾಧಿಕಾರಿಯ ಅನುಭವ ಎತ್ತಿದ ಗಂಭೀರ ಪ್ರಶ್ನೆಗಳು

ಮೈಸೂರು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಅವರು ಈ ಕುರಿತು ಮಾಹಿತಿ ನೀಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತ ಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ರಾಜ್ಯದ ರೈತರ ಹಿತಾಸಕ್ತಿಯ ಹೋರಾಟಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು...

ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು...

ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ...