ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ: ಮೈಸೂರಿನಲ್ಲಿ ಬೃಹತ್ ಜೈಲ್ ಭರೋ ಚಳವಳಿ

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ, ಸಂಯುಕ್ತ ಹೋರಾಟ–ಕರ್ನಾಟಕ ಹಾಗೂ ಜಂಟಿ ಕಾರ್ಮಿಕ ಸಂಘಟನೆ (ಜೆಸಿಟಿಯು) ವತಿಯಿಂದ ಮೈಸೂರು ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಬೃಹತ್ ಜೈಲ್ ಭರೋ ಚಳವಳಿ ನಡೆಯಿತು.

- Advertisement -

ಕ್ವಿಟ್ ಇಂಡಿಯಾ ಚಳವಳಿಯ ನೆನಪಿನಲ್ಲಿ ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ವಿವಿಧ ಸಂಘಟನೆಗಳ ಮುಖಂಡರು, ರೈತರು, ಕಾರ್ಮಿಕರು ಸೇರಿದಂತೆ ನೂರಾರು ಮಂದಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಮಾವೇಶಗೊಂಡರು. ಬಳಿಕ ಭಿತ್ತಿಫಲಕಗಳನ್ನು ಹಿಡಿದು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆಟ್ರೋಪೋಲ್ ವೃತ್ತದ ಮೂಲಕ ಮೈಸೂರು ರೈಲು ನಿಲ್ದಾಣದತ್ತ ಮೆರವಣಿಗೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ದಾಸಪ್ಪ ವೃತ್ತದ ಬಳಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಕೆಲಕಾಲ ತಳ್ಳಾಟ, ನೂಕಾಟ ನಡೆಯಿತು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು.

ರೈತರು, ಕಾರ್ಮಿಕರ ಬದುಕು ಸಂಕಷ್ಟಕ್ಕೆ: ಆರೋಪ

ಪ್ರತಿಭಟನಾಕಾರರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೆಡೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಯುವಜನರ ಹಿತಾಸಕ್ತಿಗೆ ವಿರುದ್ಧವಾದ ಕಾನೂನು ಮತ್ತು ನೀತಿಗಳನ್ನು ಜಾರಿಗೊಳಿಸುತ್ತಿವೆ. ಮತ್ತೊಂದೆಡೆ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ದಮನಿಸುತ್ತಿವೆ ಎಂದು ಆರೋಪಿಸಿದರು.

ಹಿಂದೆ ರಾಜರು ರೈತರ ಭೂಮಿಯನ್ನು ಕಸಿದು ಬ್ರಾಹ್ಮಣರು ಹಾಗೂ ರಾಜ ಪರಿವಾರದವರಿಗೆ ನೀಡುತ್ತಿದ್ದರು. ಇಂದು ಸರ್ಕಾರಗಳು ರೈತರ ಭೂಮಿಯನ್ನು ಅಂಬಾನಿ, ಅದಾನಿ ಸೇರಿದಂತೆ ದೇಶ-ವಿದೇಶಗಳ ಕಾರ್ಪೊರೇಟ್ ಕಂಪೆನಿಗಳಿಗೆ ಒಪ್ಪಿಸುವ ಕೆಲಸ ಮಾಡುತ್ತಿವೆ ಎಂದು ದೂರಿದರು. ದೇಶದ ಕಾರ್ಮಿಕ ವರ್ಗವನ್ನು ಮತ್ತೆ ಜೀತಪದ್ಧತಿಯಂತಹ ಪರಿಸ್ಥಿತಿಗೆ ತಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟು, ಯುದ್ಧದ ಪರಿಣಾಮಗಳು, ಬೆಲೆ ಏರಿಕೆ ಸೇರಿದಂತೆ ಹಲವು ಸಂಕಷ್ಟಗಳಿಂದ ಜನತೆ ತತ್ತರಿಸುತ್ತಿರುವ ಸಂದರ್ಭದಲ್ಲಿ ತೆರಿಗೆ ಭಾರವನ್ನು ಹೆಚ್ಚಿಸಲಾಗುತ್ತಿದೆ. ಇತ್ತೀಚಿನ ಬಜೆಟ್‌ಗಳು ಜನರ ಮೇಲೆ ಹೊರೆ ಹಾಕಿ ಕಾರ್ಪೊರೇಟ್ ಕಂಪೆನಿಗಳ ಖಜಾನೆ ತುಂಬಿಸುವ ಸಾಧನಗಳಾಗಿವೆ ಎಂದು ಪ್ರತಿಭಟನಾಕಾರರು ಟೀಕಿಸಿದರು.

ಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ರೈತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್, ದಿನಸಿ ವಸ್ತುಗಳು ಹಾಗೂ ಸಾರಿಗೆ ದರಗಳು ಏರಿಕೆಯಾಗುತ್ತಿವೆ. ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಸೇವೆಗಳನ್ನು ಹಂತ ಹಂತವಾಗಿ ಖಾಸಗಿ ಕಂಪೆನಿಗಳಿಗೆ ಒಪ್ಪಿಸಲಾಗುತ್ತಿದೆ. ಇದರಿಂದ ಜನರ ಆದಾಯ ಕುಸಿಯುತ್ತಿದ್ದು, ಜೀವನ ವೆಚ್ಚ ಹೆಚ್ಚುತ್ತಿದೆ. ನಿರುದ್ಯೋಗ ಮತ್ತು ಬಡತನವೂ ಹೆಚ್ಚಾಗುತ್ತಿದೆ ಎಂದು ಅವರು ದೂರಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕನ್ನಡಿ ಹಿಡಿದ ಆದೇಶ: ₹3,383ರ ಎಫ್‌ಆರ್‌ಪಿ ಸಾಕೇ?

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಮುಖಂಡರಾದ ಬಾಲಾಜಿರಾವ್, ಚಂದ್ರಶೇಖರ ಮೇಟಿ, ಜಿ.ಎಸ್. ಸೀಮಾ, ಜಗದೀಶ್ ಸೂರ್ಯ, ಬಸವರಾಜ್, ದೇವದಾಸ್, ಕಂದೇಗಾಲ ಶ್ರೀನಿವಾಸ್, ಜವರಯ್ಯ ಸೇರಿದಂತೆ ನೂರಾರು ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ| ಅನಗವಾಡಿಗೆ 110 ಕೆ.ವಿ. ವಿದ್ಯುತ್ ಸ್ಟೇಷನ್ ಮಂಜೂರು ಮಾಡಲು ರೈತರ ಒತ್ತಾಯ

ಅನಗವಾಡಿ ಗ್ರಾಮದ ಕೆರೆಗೆ ಒಂದು ವಾರದೊಳಗೆ ನೀರು ತುಂಬಿಸುವುದು, ಕೃಷಿ ಪಂಪ್‌ಸೆಟ್‌ಗಳಿಗೆ...

ವಿಜಯಪುರ | ಸಮಾನತೆ ಮಾತು, ಘೋಷಣೆಗೆ ಸೀಮಿತವಾಗದಿರಲಿ: ಪ್ರೊ. ವಿಜಯಾ ಬಿ. ಕೋರಿಶೆಟ್ಟಿ

ಮಹಿಳೆಯರ ಧ್ವನಿಯನ್ನು ನಿರ್ಲಕ್ಷಿಸಿದಾಗ ಅದನ್ನು ಸಮಾಜದ ಗಮನಕ್ಕೆ ತರುವುದು ನಮ್ಮೆಲ್ಲರ ಕರ್ತವ್ಯ....

ಧಾರವಾಡ | ಸೆ.27ಕ್ಕೆ ಭಾರತಿ ನಗರದಲ್ಲಿ ಉದ್ಯಾನವನ ಉದ್ಘಾಟನೆ

ಭಾರತಿ ನಗರ ನಿವಾಸಿಗಳ ಅಭಿವೃದ್ಧಿ ಸಂಘವು ರೋಟರಿ ಕ್ಲಬ್​ ಆಫ್​ ಧಾರವಾಡ...

ವಿಜಯಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಕರೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ...