ಮೈಸೂರು | ಸೆ.6ರಂದು ‘ಕತ್ತಲ ನೆರಳು’ ನಾಟಕ ಪ್ರದರ್ಶನ

Date:

ಮೈಸೂರಿನ ರಾಮಕೃಷ್ಣನಗರದ ಮಂಡ್ಯ ರಮೇಶ್ ಅವರ ನಟನ ರಂಗಮಂದಿರದಲ್ಲಿ ಸೆಪ್ಟೆಂಬರ್ 6ರಂದು ‘ಕತ್ತಲ ನೆರಳು’ ನಾಟಕದ ಎರಡು ಪ್ರದರ್ಶನಗಳನ್ನು ಆಯೋಜಿಸಲಾಗಿದೆ.

- Advertisement -

ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ವತಿಯಿಂದ ಡೇವಿಡ್ ಹ್ಯಾರೋವರ್ ಅವರ ‘ಬ್ಲ್ಯಾಕ್ ಬರ್ಡ್’ ನಾಟಕವನ್ನು ಆಧರಿಸಿ ರೂಪಾಂತರಗೊಂಡಿರುವ ‘ಕತ್ತಲ ನೆರಳು’ ನಾಟಕವನ್ನು ರಂಗಕರ್ಮಿ ವೆಂಕಟೇಶ್ ಪ್ರಸಾದ್ ರೂಪಾಂತರಿಸಿ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಹೆಸರಾಂತ ಚಲನಚಿತ್ರ ಹಾಗೂ ರಂಗಕಲಾವಿದ ಬಾಲಾಜಿ ಮನೋಹರ್, ಸಿರಿರವಿಕುಮಾರ್ ಹಾಗೂ ರಂಗಾಯಣ ರಘು ಅವರ ಪುತ್ರಿ ಚುಕ್ಕಿ. ರ.ಮ. ಅವರು ನಾಟಕದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ನಿನ್ನೆಯ ನೆನಪುಗಳನ್ನು ಎದುರಿಸುವುದು ಹೇಗೆ? ಅವುಗಳನ್ನು ಬಿಟ್ಟು ಇಂದು ಹಾಗೂ ನಾಳೆಯನ್ನು ಬದುಕಲು ಸಾಧ್ಯವೇ ಎಂಬ ಗಂಭೀರ ಪ್ರಶ್ನೆಯನ್ನು ನಾಟಕ ಮುಂದಿಡುತ್ತದೆ.

15 ವರ್ಷಗಳ ಬಳಿಕ ಮತ್ತೆ ಭೇಟಿಯಾಗುವ ಇಬ್ಬರು ವ್ಯಕ್ತಿಗಳು ಒಂದೇ ಕೋಣೆಯಲ್ಲಿ ಮುಖಾಮುಖಿಯಾಗುತ್ತಾರೆ. ಅವರ ನಡುವೆ ಮೌನವಾಗಿ ಇಣುಕುವ ನೆನಪುಗಳ ಜೊತೆಗೆ ವಿದ್ರೋಹ, ಕೋಪ, ದುಗುಡ ಹಾಗೂ ಪಾಪಪ್ರಜ್ಞೆಯಂತಹ ಭಾವನೆಗಳು ಸಂಘರ್ಷಕ್ಕೆ ಕಾರಣವಾಗುತ್ತವೆ. ಪ್ರತಿಯೊಂದು ನೋಟವೂ ಹಳೆಯ ನೆನಪುಗಳನ್ನು ಕೆದಕಿದರೆ, ಪ್ರತಿಯೊಂದು ಮಾತೂ ಆರದ ಗಾಯಗಳಿಗೆ ಉಪ್ಪು ಸವರುವಂತಾಗುತ್ತದೆ. ಈ ಮಾನಸಿಕ ಸಂಘರ್ಷದ ಮೂಲಕ ನಾಟಕ ಪ್ರೇಕ್ಷಕರನ್ನು ಆಳವಾದ ಚಿಂತನೆಗೆ ಒಳಪಡಿಸುತ್ತದೆ.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಓದಿನಲ್ಲಿ ಜೀವ, ಓದಿನಲ್ಲೇ ಜೀವನ’

ಸೆಪ್ಟೆಂಬರ್ 6ರಂದು ಮಧ್ಯಾಹ್ನ 3.30ಕ್ಕೆ ಹಾಗೂ ಸಂಜೆ 6.30ಕ್ಕೆ ಎರಡು ಪ್ರದರ್ಶನಗಳು ನಡೆಯಲಿವೆ. ಪ್ರವೇಶ ದರ ರೂ.200 ನಿಗದಿಪಡಿಸಲಾಗಿದೆ. ಟಿಕೆಟ್‌ಗಳಿಗಾಗಿ 9900182400 ಸಂಖ್ಯೆಯನ್ನು ಸಂಪರ್ಕಿಸಬಹುದು. ಅಲ್ಲದೆ, BookMyShow ಮೂಲಕವೂ ಟಿಕೆಟ್‌ಗಳು ಲಭ್ಯವಿವೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ನಾಟಕ ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...