ಮೈಸೂರು | ಪರಿಷ್ಕೃತ ಕನಿಷ್ಠ ವೇತನ ಕೂಡಲೇ ಜಾರಿಗೊಳಿಸಲು ಆಗ್ರಹ

Date:

ಪರಿಷ್ಕೃತ ಕನಿಷ್ಠ ವೇತನದ ಮರುಪರಿಷ್ಕರಣೆಯನ್ನು ಕೈಬಿಟ್ಟು, ಈಗಾಗಲೇ ಪರಿಷ್ಕರಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ‘ಕನಿಷ್ಠ ವೇತನ ಜಾರಿಗಾಗಿ ಹೋರಾಟ ಸಮಿತಿ’ ವತಿಯಿಂದ ನಗರದಲ್ಲಿ ಪೋಸ್ಟ್‌ಕಾರ್ಡ್ ಚಳವಳಿ ನಡೆಸಲಾಯಿತು.

- Advertisement -

ಮೈಸೂರು ನಗರದ ಚಿಕ್ಕ ಗಡಿಯಾರದ ಬಳಿಯಿರುವ ಅಂಚೆ ಪೆಟ್ಟಿಗೆಗೆ ಎಂಎಂಸಿ ಮತ್ತು ಆರ್‌ಐ ಯುನೈಟೆಡ್ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ (ರಿ) ವತಿಯಿಂದ ಮುಖ್ಯಮಂತ್ರಿ ಅವರಿಗೆ ಸಾಮೂಹಿಕವಾಗಿ ಪೋಸ್ಟ್‌ಕಾರ್ಡ್‌ಗಳನ್ನು ಕಳುಹಿಸುವ ಮೂಲಕ ಚಳವಳಿಗೆ ಚಾಲನೆ ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಚಂದ್ರಶೇಖರ್ ಮೇಟಿ, ಐದು ವರ್ಷಗಳಿಗೊಮ್ಮೆ ನಡೆಯಬೇಕಿದ್ದ ಕನಿಷ್ಠ ವೇತನ ಪರಿಷ್ಕರಣೆಯನ್ನು ಕೊರೊನಾ ಕಾರಣ ನೀಡಿ ಮುಂದೂಡಲಾಗಿತ್ತು. ಇದೀಗ ಸುಮಾರು ಹತ್ತು ವರ್ಷಗಳ ಬಳಿಕ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದ್ದು, ಅದನ್ನು ಜಾರಿಗೊಳಿಸುವ ಬದಲು ಮರುಪರಿಷ್ಕರಣೆಗೆ ಮುಂದಾಗಿರುವುದು ಕಾರ್ಮಿಕ ವಿರೋಧಿ ಕ್ರಮವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಪರಿಷ್ಕೃತ ಕನಿಷ್ಠ ವೇತನ ಜಾರಿಯಾಗದಂತೆ ಮಾಲೀಕರ ವಲಯದಿಂದ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯಲು ಪ್ರಯತ್ನ ನಡೆದರೂ ಅದು ಯಶಸ್ವಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಕೈಗೊಂಡಿರುವ ನಿರ್ಧಾರವನ್ನು ಜಾರಿಗೊಳಿಸುವ ಬದಲು ಮರುಪರಿಷ್ಕರಣೆಗೆ ಮುಂದಾಗಿರುವುದು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಹಳೇ ಮೈಸೂರು: ಆಡಳಿತ, ನೀರಾವರಿ ಮತ್ತು ಸಾರ್ವಜನಿಕ ಬದುಕಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಎಚ್.ಎಂ. ಚನ್ನಬಸಪ್ಪ

ಸರ್ಕಾರ ಕೂಡಲೇ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಕಡೆಗಣಿಸಿದರೆ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಅಗತ್ಯಬಿದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಎಸ್.ಎಚ್., ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಅಕ್ಕಮಹಾದೇವಿ, ಪವಿತ್ರಾ ಎಸ್.ಎಂ. ಸೇರಿದಂತೆ ಕಾರ್ಮಿಕರಾದ ಸಿದ್ದರಾಜು, ಗುರುಮಲ್ಲು, ಶಿವಮ್ಮ, ರಾಜಮ್ಮ ಮಲ್ಲಿಗೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...