ಮೈಸೂರು | ಲಿಂಗಾಂಬುಧಿ ಕೆರೆಗೆ ಪ್ರವೇಶ ಶುಲ್ಕ ವಿಧಿಸುವ ಪ್ರಸ್ತಾವನೆ ಕೈಬಿಡಲು ಒತ್ತಾಯ

Date:

ಮೈಸೂರಿನ ಲಿಂಗಾಂಬುಧಿ ಕೆರೆ ಹಾಗೂ ಉದ್ಯಾನವನದ ನಿರ್ವಹಣೆಯ ಹೆಸರಿನಲ್ಲಿ ಪ್ರವೇಶ ಶುಲ್ಕ ವಿಧಿಸಲು ಅರಣ್ಯ ಇಲಾಖೆ ಮುಂದಾಗಿರುವುದನ್ನು ವಿರೋಧಿಸಿ, ಪ್ರವೇಶ ಶುಲ್ಕದ ಪ್ರಸ್ತಾವನೆಯನ್ನು ಕೂಡಲೇ ಕೈಬಿಡುವಂತೆ ಒತ್ತಾಯಿಸಿ ಲಿಂಗಾಂಬುಧಿ ಉದ್ಯಾನವನದ ವಾಯುವಿಹಾರಿಗಳು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಸಹಾಯಕ ವಲಯ ಅರಣ್ಯಾಧಿಕಾರಿ ಪ್ರಮೋದ್ ಅವರಿಗೆ ಸಲ್ಲಿಸಿದರು.

- Advertisement -

ಹೋರಾಟ ಸಮಿತಿಯ ಮುಖಂಡರ ಮನವಿಗೆ ಸ್ಪಂದಿಸಿದ ಸಹಾಯಕ ವಲಯ ಅರಣ್ಯಾಧಿಕಾರಿ ಪ್ರಮೋದ್ ಅವರು ಸ್ಥಳಕ್ಕೆ ಆಗಮಿಸಿ ವಾಯುವಿಹಾರಿಗಳೊಂದಿಗೆ ಮಾತುಕತೆ ನಡೆಸಿದರು. ಅರಣ್ಯ ಇಲಾಖೆಯ ವತಿಯಿಂದ ನಿರ್ವಹಣೆ ಮಾಡಲಾಗುತ್ತಿರುವ ಉದ್ಯಾನವನಗಳಲ್ಲಿ ಪ್ರವೇಶ ಶುಲ್ಕ ಸಂಗ್ರಹಿಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಲಿಂಗಾಂಬುಧಿ ಉದ್ಯಾನವನದಲ್ಲಿಯೂ ಪ್ರವೇಶ ಶುಲ್ಕ ಸಂಗ್ರಹಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆದರೆ, ಲಿಂಗಾಂಬುಧಿ ಉದ್ಯಾನವನದ ವಾಯುವಿಹಾರಿಗಳು ಹಾಗೂ ಸಾರ್ವಜನಿಕರಿಂದ ಪ್ರವೇಶ ಶುಲ್ಕ ವಿಧಿಸುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಪ್ರವೇಶ ಶುಲ್ಕವನ್ನು ಹಿಂಪಡೆಯುವ ಕುರಿತು ವಲಯ ಅರಣ್ಯಾಧಿಕಾರಿಗಳೊಂದಿಗೆ ಚರ್ಚಿಸಿ, ಈ ಬಗ್ಗೆ ಮಾಹಿತಿ ನೀಡುವುದಾಗಿ ಪ್ರಮೋದ್ ಅವರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೋರಾಟ ಸಮಿತಿಯ ಮುಖಂಡರು, ಈಗಾಗಲೇ ಅಳವಡಿಸಿರುವ ಪ್ರವೇಶ ಶುಲ್ಕದ ಆದೇಶದ ಫಲಕವನ್ನು ಕೂಡಲೇ ತೆರವುಗೊಳಿಸಬೇಕು. ಅರಣ್ಯ ಇಲಾಖೆ ಪ್ರವೇಶ ಶುಲ್ಕವನ್ನು ಅಧಿಕೃತವಾಗಿ ಹಿಂಪಡೆದಿರುವ ಕುರಿತು ಲಿಖಿತ ಆದೇಶ ನೀಡುವವರೆಗೂ ಹೋರಾಟವನ್ನು ಕೈಬಿಡುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪ್ರವೇಶ ಶುಲ್ಕದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು ಮೂರು ಸಂಘಟನೆಗಳ ಮುಖಂಡರು ಒಟ್ಟಾಗಿ ಆಗಸ್ಟ್ 30ರಂದು ಭಾನುವಾರ ಲಿಂಗಾಂಬುಧಿ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಮೈಸೂರಿನ ಹೆಚ್ಚಿನ ಸಂಖ್ಯೆಯ ನಾಗರಿಕರು ಹಾಗೂ ಲಿಂಗಾಂಬುಧಿ ಉದ್ಯಾನವನದ ವಾಯುವಿಹಾರಿಗಳು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮುಖಂಡರು ಕರೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆಗಾಲದಲ್ಲೇ ಬರದ ಛಾಯೆ: ಮೈಸೂರು ಜಿಲ್ಲೆಯ ಕೃಷಿ ಬದುಕಿಗೆ ಕಾಡುತ್ತಿರುವ ಮಳೆ ಕೊರತೆ

ಮನವಿ ಸಲ್ಲಿಸುವಾಗ ಲಿಂಗಾಂಬುಧಿ ಉದ್ಯಾನವನ ವಾಯುವಿಹಾರಿಗಳ ಸಮಿತಿ ಸದಸ್ಯೆ ಸಂಧ್ಯಾ ಪಿ.ಎಸ್., ಲಿಂಗಾಂಬುಧಿ ಮಿತ್ರರ ಬಳಗದ ಅಧ್ಯಕ್ಷ ನಾಗೇಶ್, ಖಜಾಂಚಿ ಭರತ್ ಡೀನ್, ಹಿರಿಯ ಸದಸ್ಯರಾದ ಶಿವಕುಮಾರ್, ಸಿದ್ದೇಶ್, ರಾಜಣ್ಣ, ಸುದರ್ಶನ್, ಉಮೇಶ್ ಸೇರಿದಂತೆ ಮಿತ್ರ ಬಳಗದ ಸದಸ್ಯರು ಹಾಗೂ ಎಐಡಿವೈಒ ಜಿಲ್ಲಾಧ್ಯಕ್ಷ ಸುನಿಲ್ ಟಿ.ಆರ್. ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...