ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕ ದೇವರಾಜ ಅರಸು: ಲಕ್ಷ್ಮಿಕಾಂತ್

Date:

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ, ಶೋಷಿತ ಹಾಗೂ ದುರ್ಬಲ ವರ್ಗಗಳ ಅಭಿವೃದ್ಧಿಗೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಧೀಮಂತ ನಾಯಕರು ಎಂದು ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಲಕ್ಷ್ಮಿಕಾಂತ್ ಹೇಳಿದರು.

- Advertisement -

ಮೈಸೂರು ಜಿಲ್ಲೆ, ಪಿರಿಯಾಪಟ್ಟಣದ ಡಿ. ದೇವರಾಜ ಅರಸು ಕಲಾಭವನದಲ್ಲಿ ತಾಲೂಕು ಆಡಳಿತ, ಪುರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಭೂ ಸುಧಾರಣಾ ಕಾಯ್ದೆ ಜಾರಿಗೊಳಿಸುವ ಮೂಲಕ ಭೂಹೀನ ರೈತರಿಗೆ ಭೂಮಿಯ ಹಕ್ಕು ದೊರಕುವಂತೆ ಮಾಡಿದ ಅರಸು ಅವರು ದೂರದೃಷ್ಟಿಯ ಆಡಳಿತಗಾರರಾಗಿದ್ದರು. ಇನಾಮ್ದಾರಿ ಪದ್ಧತಿ ನಿರ್ಮೂಲನೆ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಾವನೂರು ಆಯೋಗದ ಶಿಫಾರಸುಗಳ ಜಾರಿ ಹಾಗೂ ಮೀಸಲಾತಿ ವ್ಯವಸ್ಥೆಗೆ ಬಲ ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಹೊಸ ಆಯಾಮ ಕಲ್ಪಿಸಿದರು ಎಂದರು.

ಮೈಸೂರು ರಾಜ್ಯವನ್ನು 1973ರಲ್ಲಿ ‘ಕರ್ನಾಟಕ’ ಎಂದು ಮರುನಾಮಕರಣ ಮಾಡುವ ಐತಿಹಾಸಿಕ ನಿರ್ಧಾರ ಕೈಗೊಂಡ ಅರಸು ಅವರು ರಾಜ್ಯದ ಸಾಂಸ್ಕೃತಿಕ ಮತ್ತು ಸಾಮಾಜಿಕ ಏಕತೆಗೆ ಮಹತ್ವದ ಕೊಡುಗೆ ನೀಡಿದರು. ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಶೋಷಿತ ವರ್ಗಗಳ ಪರವಾಗಿ ಧ್ವನಿ ಎತ್ತಿದ ಅವರು, ರಾಜಕಾರಣವನ್ನು ಜನಸೇವೆಯ ಮಾರ್ಗವನ್ನಾಗಿ ರೂಪಿಸಿದ ಅಪರೂಪದ ನಾಯಕರು ಎಂದು ಬಣ್ಣಿಸಿದರು.

ಕರ್ನಾಟಕದ ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದ ಅರಸು ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಹಾಗೂ ಅವಕಾಶ ದೊರಕಬೇಕು ಎಂಬ ಆಶಯದೊಂದಿಗೆ ಆಡಳಿತ ನಡೆಸಿದರು. ಹಿಂದುಳಿದ ವರ್ಗಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲಗೊಳ್ಳಲು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡರು. ಸಮಾನತೆಯ ಸಮಾಜ ನಿರ್ಮಾಣಕ್ಕೆ ಅವರು ಹಾಕಿದ ಅಡಿಪಾಯ ಇಂದಿಗೂ ಪ್ರಸ್ತುತವಾಗಿದ್ದು, ಅವರ ಜನಪರ ನೀತಿಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದರು.

ಶಿಕ್ಷಣ, ಸಾಮಾಜಿಕ ಸಮಾನತೆ ಹಾಗೂ ಜನಕಲ್ಯಾಣಕ್ಕೆ ಆದ್ಯತೆ ನೀಡಿದ ಅರಸು ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ವೃದ್ಧರು, ಅಂಗವಿಕಲರು ಹಾಗೂ ನಿರ್ಗತಿಕರ ಕಲ್ಯಾಣಕ್ಕೂ ವಿಶೇಷ ಒತ್ತು ನೀಡುವ ಮೂಲಕ ಜನಸಾಮಾನ್ಯರ ಬದುಕಿನ ಮಟ್ಟ ಸುಧಾರಿಸಲು ಶ್ರಮಿಸಿದರು. 1972ರಿಂದ 1980ರವರೆಗಿನ ಅವರ ಆಡಳಿತ ಅವಧಿಯನ್ನು ಕರ್ನಾಟಕದ ಸಾಮಾಜಿಕ ಪರಿವರ್ತನೆಯ ಸುವರ್ಣ ಯುಗವೆಂದು ಬಣ್ಣಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.

ತಾಲೂಕು ಆಶ್ರಯ ಸಮಿತಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ದೇವರಾಜ ಅರಸು ಅವರ ಅಚ್ಚಳಿಯದ ಹೆಜ್ಜೆ ಗುರುತುಗಳು ಸಮಾಜದ ಸುಧಾರಣೆಯ ದಾರಿಯನ್ನು ಇಂದಿಗೂ ತೋರಿಸುತ್ತಿವೆ. ಅವರ ಜಯಂತಿ ಕೇವಲ ಅರಸು ಮನೆತನಕ್ಕೆ ಸೀಮಿತವಾದ ಕಾರ್ಯಕ್ರಮವಲ್ಲ. ಅವರ ಜನಪರ ಆಡಳಿತ ಹಾಗೂ ಅಭಿವೃದ್ಧಿ ಯೋಜನೆಗಳ ಫಲವನ್ನು ರಾಜ್ಯದ ಜನತೆ ಇಂದಿಗೂ ಅನುಭವಿಸುತ್ತಿದ್ದಾರೆ. ಬಡತನ ನಿರ್ಮೂಲನೆಗೆ ಆದ್ಯತೆ ನೀಡಿ ಸಾಮಾಜಿಕ ಪರಿವರ್ತನೆಗೆ ಅವರು ಕಾರಣಕರ್ತರಾಗಿದ್ದರು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೊಸಳ್ಳಿ ಕೃಷ್ಣೇಗೌಡ, ಅರಸು ವಂಶಸ್ಥ ಹಾಗೂ ವಕೀಲ ದೇವರಾಜ ಅರಸು, ಸಣ್ಣಸ್ವಾಮಿ ಮಾತನಾಡಿದರು. ಕಳೆದ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉತ್ತಮ ಸೇವೆ ಸಲ್ಲಿಸಿದ ಅಡುಗೆ ಸಿಬ್ಬಂದಿ ಹಾಗೂ ಸಹಾಯಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ವಿವಿಧ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನೃತ್ಯ ಹಾಗೂ ಗಾಯನ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ

ಎಂ.ಡಿ.ಸಿ.ಸಿ. ನಿರ್ದೇಶಕ ಈ.ಪಿ. ಲೋಕೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ರಾಜಣ್ಣ, ಉಪ ತಹಸೀಲ್ದಾರ್ ಶ್ರೀನಿವಾಸ್, ಮಾಜಿ ಪುರಸಭೆ ಅಧ್ಯಕ್ಷ ವಿಷಕಂಠಯ್ಯ, ಕಾಂಗ್ರೆಸ್ ಮುಖಂಡ ಪಿ. ಮಹದೇವ್, ಕೆಡಿಪಿ ಸದಸ್ಯ ಲಕ್ಷ್ಮೀನಾರಾಯಣ, ಮಾಜಿ ಪುರಸಭೆ ಸದಸ್ಯ ರವಿ, ರೈತ ಸಂಘದ ಮುಖಂಡ ವಿಜಯರಾಜ್ ಅರಸ್ ಸೇರಿದಂತೆ ಬಿಸಿಎಂ ನಿಲಯಗಳ ವಿದ್ಯಾರ್ಥಿಗಳು, ಮೇಲ್ವಿಚಾರಕರು, ಅಡುಗೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....